ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೈ-ದಳ ಯುವ ಮುಖಂಡರ ಜಂಟಿ ಪ್ರಚಾರ
ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೈ-ದಳ ಯುವ ಮುಖಂಡರ ಜಂಟಿ ಪ್ರಚಾರ

April 13, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ಶುಕ್ರವಾರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‍ಗೌಡ ಚಾಮುಂಡೇಶ್ವರಿ ಕ್ಷೇತ್ರದ ಉದ್ಬೂರು ಹಾಗೂ ರಮ್ಮನ ಹಳ್ಳಿಯಲ್ಲಿ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು.

ಇಂದು ಬೆಳಿಗ್ಗೆ ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಸ್ಥಳೀಯ ಮುಖಂಡ ರೊಂದಿಗೆ ಜಂಟಿ ಪ್ರಚಾರ ಆರಂಭಿಸಿದ ಇಬ್ಬರೂ ಯುವ ಮುಖಂಡರು, ನಾಯಕ ಸಮುದಾಯದ ಮತದಾರರೇ ಹೆಚ್ಚಾಗಿ ರುವ ಉದ್ಬೂರು ಹಾಗೂ ರಮ್ಮನಹಳ್ಳಿ ಯಲ್ಲಿ ರೋಡ್ ಶೋ ನಡೆಸಿ, ಗ್ರಾಮದ ಮುಖಂಡರೊಂದಿಗೆ ಸಭೆ ನಡೆಸಿದರು. ಎರಡೂ ಪಕ್ಷಗಳ ಕಾರ್ಯಕರ್ತರು ಗಾಳಿ ಸುದ್ದಿಗೆ ಮನ್ನಣೆ ನೀಡದೆ ಮೈತ್ರಿ ಅಭ್ಯರ್ಥಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಅವರಿಗೆ ಮತ ಚಲಾಯಿಸುವಂತೆ ಮನವಿ ಮಾಡಿದರು.

ಇದೇ ವೇಳೆ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಸಿದ್ದರಾಮ ಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಳವಾರ, ಪರಿವಾರ ಪಂಗಡವನ್ನು ಎಸ್‍ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಬಿಜೆಪಿ ನಾಯಕರು ಶೋಷಿತರು ದಲಿತರ ವಿರೋಧಿಗಳಾಗಿರುವುದರಿಂದ ತಳವಾರ ಹಾಗೂ ಪರಿವಾರ ಪಂಗಡವನ್ನು ಎಸ್‍ಟಿಗೆ ಸೇರಿಸುವ ವಿಧೇಯಕವನ್ನು ಸಂಸತ್ತಿನಲ್ಲಿ ಪಾಸ್ ಮಾಡದೇ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕರ್ನಾಟಕ ಉದ್ಯೋಗ ಸೃಷ್ಟಿಯಲ್ಲಿ ನಂ. 1 ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಂದೇ ಒಂದು ನಗರ ಸ್ಮಾರ್ಟ್ ಸಿಟಿ ಆಗಿಲ್ಲ. ಮಾತಿನಲ್ಲಿ ಮರಳು ಮಾಡುವ ಬಿಜೆಪಿ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲ ವಾಗಿದೆ. ಸಂಸದ ಪ್ರತಾಪಸಿಂಹ ರಾಜ್ಯ ಸರ್ಕಾರ ಮಾಡಿರುವ ಕಾಮಗಾರಿಗಳನ್ನು ನಾನು ಮಾಡಿದ್ದೇನೆಂದು ಹೇಳುತ್ತಿದ್ದಾರೆ. ಸ್ವಂತ ಶಕ್ತಿಯ ಮೇಲೆ ಚುನಾವಣೆ ಎದುರಿಸಲು ಸಾಧ್ಯವಾಗದೆ ಮೋದಿ ಹೆಸ ರನ್ನು ಹೇಳಿಕೊಂಡು ಮತ ಕೇಳುತ್ತಿದ್ದಾರೆ. ಇಂತಹವರಿಗೆ ತಕ್ಕ ಪಾಠ ಕಲಿಸಬೇಕಾದರೆ ಸೌಮ್ಯ ಸ್ವಭಾವದ, ಸರಳ ಸಜ್ಜನ ರಾಜಕಾರಣಿ ಸಿ.ಹೆಚ್. ವಿಜಯ ಶಂಕರ್ ಅವರನ್ನು ಹೆಚ್ಚಿನ ಮತಗಳ ಅಂತರ ದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಹರೀಶ್ ಗೌಡ ಮಾತನಾಡಿ, ವರಿಷ್ಠರ ಆದೇಶದ ಮೇರೆಗೆ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ. ಎಲ್ಲಾ ಭಿನ್ನಾಭಿಪ್ರಾಯ ಗಳನ್ನು ಬದಿಗಿಟ್ಟು ಮೈತ್ರಿ ಅಭ್ಯರ್ಥಿ ಸಿ.ಎಚ್. ವಿಜಯಶಂಕರ್‍ರವರನ್ನು ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸÀಬೇಕು. ಸಮ್ಮಿಶ್ರ ಸರ್ಕಾರದಲ್ಲಿ ರೈತರ 43 ಸಾವಿರ ಕೋಟಿ ಸಾಲ ಮನ್ನಾ ಮಾಡಲಾಗಿದೆ. ಮೈಸೂರು, ಚಾಮರಾಜನಗರ ಭಾಗದ 22000 ರೈತರ 150 ಕೋಟಿ ರೂ. ಸಾಲ ಈಗಾಗಲೇ ಮನ್ನವಾಗಿದೆ. ಭ್ರಷ್ಟ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವುದರೊಂದಿಗೆ ಸಮ್ಮಿಶ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತೆರಳಿ ವಿವರಿಸಿ ಸಿ.ಎಚ್.ವಿಜಯ ಶಂಕರ್‍ರವರ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ, ಎಪಿಎಂಸಿ ಅಧ್ಯಕ್ಷ ಕೆ.ಪ್ರಭುಸ್ವಾಮಿ, ಮುಖಂಡರಾದ ಉದ್ಬೂರು ಕೃಷ್ಣ, ಮಹಾದೇವಸ್ವಾಮಿ, ತಾ.ಪಂ. ಸದಸ್ಯ ರಾದ ಮಾರ್ಬಳ್ಳಿ ಕುಮಾರ್, ದಾಸನಾಯ್ಕ, ಸಿ.ಎಂ.ಸಿದ್ದರಾಮೇಗೌಡ, ಕೃಷ್ಣಕುಮಾರ್ ಸಾಗರ್, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳ ಮಾನಸ, ದೂರ ನಾಗರಾಜ್, ನರೇಂದ್ರ ಗುರುಪಾದಸ್ವಾಮಿ, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಹಿನಕಲ್ ರಾಜು, ಬಸವರಾಜು, ಪಿತಾಮಹಾ ಮೂರ್ತಿ, ಧನಗಳ್ಳಿ ಬಸವರಾಜು, ಕೋಟೆ ಹುಂಡಿ ಮಹಾದೇವ, ವೆಂಕಟಯ್ಯ, ಸಿದ್ದರಾಜು ಇನ್ನಿತರರು ಉಪಸ್ಥಿತರಿದ್ದರು.

Translate »