ಸುತ್ತೂರಲ್ಲಿ ಇಂದಿನಿಂದ ಪತ್ರಕರ್ತರ ರಾಜ್ಯ ಸಮ್ಮೇಳನ
ಮೈಸೂರು

ಸುತ್ತೂರಲ್ಲಿ ಇಂದಿನಿಂದ ಪತ್ರಕರ್ತರ ರಾಜ್ಯ ಸಮ್ಮೇಳನ

March 1, 2019

ಮೈಸೂರು: ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಾಳೆ(ಮಾ.1) ಮತ್ತು ಮಾ.2 ರಂದು ಪತ್ರಕರ್ತರ 34ನೇ ರಾಜ್ಯ ಸಮ್ಮೇಳನ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಜಂಟಿ ಆಶ್ರಯದಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಸುತ್ತೂರು ಮಠಾಧೀಶ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಶ್ರೀ ಆದಿಚುಂಚನಗಿರಿ ಮಠಾಧಿಪತಿ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸುವರು. ಶುಕ್ರವಾರ ಮಧ್ಯಾಹ್ನ 1.30 ಗಂಟೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಮ್ಮೇಳನ ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇ ಶ್ವರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆ ವಹಿಸುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ‘ಸಾಧ್ವಿ’ ಸುದ್ದಿಕೋಶವನ್ನು ಲೋಕಾ ರ್ಪಣೆ ಮಾಡಲಿದ್ದು, ಸಚಿವ ಡಿ.ಕೆ.ಶಿವಕುಮಾರ್ ವ್ಯಂಗ್ಯ ಚಿತ್ರ ಪ್ರದರ್ಶನ ಉದ್ಘಾಟಿಸುವರು. ಸಚಿವ ಸಾ.ರಾ.ಮಹೇಶ್ ವಸ್ತು ಪ್ರದರ್ಶನ ಉದ್ಘಾಟಿಸಲಿದ್ದು, ಸಂಸದ ಆರ್.ಧ್ರುವನಾರಾ ಯಣ್ ಸಾಕ್ಷ್ಯಚಿತ್ರ ಬಿಡುಗಡೆ ಮಾಡುವರು. ಶಾಸಕ ಡಾ. ಯತೀಂದ್ರ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸುವರಲ್ಲದೆ, ನವದೆಹಲಿಯ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಅವರು ಆಶಯ ಭಾಷಣ ಮಾಡುವರು.

Translate »