ನಾಳೆಯಿಂದ ಮೈಸೂರಲ್ಲಿ ಪತ್ರಕರ್ತರ ಕ್ರೀಡಾಕೂಟ
ಮೈಸೂರು

ನಾಳೆಯಿಂದ ಮೈಸೂರಲ್ಲಿ ಪತ್ರಕರ್ತರ ಕ್ರೀಡಾಕೂಟ

June 15, 2018

ಮೈಸೂರು: ಜೂನ್ 16 ಮತ್ತು 17ರಂದು ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಫುಟ್‍ಬಾಲ್ ಮೈದಾನದಲ್ಲಿ 2018ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ. ಮೈಸೂರು ಜಿಲ್ಲಾ ಪತ್ರ ಕರ್ತರ ಸಂಘವು ಏರ್ಪಡಿಸಿರುವ ಈ ಕ್ರೀಡಾಕೂಟವನ್ನು ಜೂನ್ 16ರಂದು ಬೆಳಿಗ್ಗೆ 8 ಗಂಟೆಗೆ ರಾಷ್ಟ್ರೀಯ ಶೂಟರ್ ರಕ್ಷಿತ ಶಾಸ್ತ್ರಿ ಅವರು ಉದ್ಘಾಟಿಸುವರು. ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ಕುಮಾರಿ ಹನಿ ಅವರು ಭಾಗವಹಿಸುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ ಬಾಬು ತಿಳಿಸಿದ್ದಾರೆ.

ಜೂನ್ 17ರಂದು ಮಧ್ಯಾಹ್ನ 2.30 ಗಂಟೆಗೆ ನಡೆಯಲಿರುವ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಶಾಸಕ ಎಲ್.ನಾಗೇಂದ್ರ, ಕಾವೇರಿ ಆಸ್ಪತ್ರೆ ವ್ಯವ ಸ್ಥಾಪಕ ನಿರ್ದೇಶಕ ಡಾ. ಚಂದ್ರಶೇಖರ್, ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಪಿ.ಕೃಷ್ಣಯ್ಯ, ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಮೈಸೂರು ನಗರ ಮತ್ತು ಜಿಲ್ಲೆಯ ಎಲ್ಲಾ ಮಾಧ್ಯಮ ಪ್ರತಿನಿಧಿಗಳು, ಪತ್ರಕರ್ತರು ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

Translate »