ಜುಬಿಲಂಟ್; ಶೀಘ್ರದಲ್ಲೇ ಕೊರೊನಾ ಸೋಂಕಿನ ಮೂಲ ಪತ್ತೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ವಿಶ್ವಾಸ
ಮೈಸೂರು

ಜುಬಿಲಂಟ್; ಶೀಘ್ರದಲ್ಲೇ ಕೊರೊನಾ ಸೋಂಕಿನ ಮೂಲ ಪತ್ತೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ವಿಶ್ವಾಸ

April 27, 2020

ಮೈಸೂರು, ಏ.26(ಆರ್‍ಕೆಬಿ)- ನಂಜನಗೂಡು ತಾಲೂಕಿನ ಜ್ಯುಬಿಲಂಟ್ ಕಾರ್ಖಾನೆ ಸಿಬ್ಬಂದಿಯಿಂದ ಕೊರೊನಾ ಸೋಂಕು ಹರಡಿದ್ದು, ಸೋಂಕಿನ ಮೂಲ ಯಾವುದು ಎಂಬುದನ್ನು ಶೀಘ್ರದಲ್ಲೇ ಪತ್ತೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಮೈಸೂರಿನ ವಿದ್ಯಾಪೀಠ ವೃತ್ತದ ಬಳಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತ ನಾಡಿದ ಅವರು, ಸೋಂಕಿನ ಮೂಲ ತಿಳಿಯಲು ತನಿಖೆಗೆ ಸಮರ್ಥ ಅಧಿಕಾರಿಯನ್ನು ನೇಮಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಅಧಿಕಾರಿ ಹರ್ಷಗುಪ್ತ ಅವರಿಗೆ ಮುಖ್ಯಮಂತ್ರಿಗಳು ಜವಾಬ್ದಾರಿ ವಹಿಸಿದ್ದಾರೆ. ಶೀಘ್ರದಲ್ಲೇ ವರದಿ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಮತ್ತು ಜಿಲ್ಲೆಯಲ್ಲಿ ಕೊರೋನಾ ಹರಡುವ ಪ್ರಮಾಣ ಈಗ ಕಡಿಮೆಯಾಗಿದೆ. ಸರ್ಕಾರ ಬಿಗಿಕ್ರಮಗಳನ್ನು ತೆಗೆದುಕೊಂಡ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಮುಂದಿನ ದಿನಗಳಲ್ಲಿ ಪೂರ್ಣ ಹತೋಟಿಗೆ ಬರಲಿದೆ ಎಂದು ಸಚಿವರು ತಿಳಿಸಿದರು.

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ಎಂ.ಜಿ. ರಸ್ತೆಯ ತರಕಾರಿ ಸಗಟು ಮಾರುಕಟ್ಟೆಯನ್ನು ಸ್ಥಳಾಂತರಿಸಲಾಗಿದ್ದು, ಸೂಕ್ತ ವ್ಯವಸ್ಥೆಯಾದ ಮೇಲೆ ಎಲ್ಲವೂ ಸರಿಯಾಗಲಿದೆ. ಈ ವಿಚಾರದಲ್ಲಿ ಸಾರ್ವಜನಿಕರ ಸಹಕಾರದ ಅಗತ್ಯವಿದೆ ಎಂದರು.

Translate »