ನೂತನ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್.ಪಾಟೀಲ್ ಇಂದು ಪ್ರಮಾಣ ವಚನ
ಮೈಸೂರು

ನೂತನ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್.ಪಾಟೀಲ್ ಇಂದು ಪ್ರಮಾಣ ವಚನ

June 15, 2022

ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾ ಯುಕ್ತ ಭೀಮನ ಗೌಡ ಸಂಗನಗೌಡ ಪಾಟೀಲ್ ಅವರು ನೂತನ ಲೋಕಾ ಯುಕ್ತರಾಗಿ ನೇಮಕಗೊಂಡಿದ್ದಾರೆ.

ಬಿ.ಎಸ್.ಪಾಟೀಲ್ ಅವರನ್ನು ಲೋಕಾ ಯುಕ್ತರನ್ನಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದ್ದ ಶಿಫಾರಸಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಬಿ.ಎಸ್.ಪಾಟೀಲ್ ನಾಳೆ(ಜೂ.೧೫) ಬೆಳಗ್ಗೆ ರಾಜಭವನದಲ್ಲಿ ನೂತನ ಲೋಕಾ ಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸ ಲಿದ್ದಾರೆ. ಈ ಹಿಂದೆ ಲೋಕಾಯುಕ್ತ ರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ೨೦೨೨ರ ಜನವರಿ ೨೭ ರಂದು ನಿವೃತ್ತರಾಗಿದ್ದರು. ಅಂದಿನಿAದ ಈ ಹುದ್ದೆ ಖಾಲಿ ಇತ್ತು. ಈ ಹುದ್ದೆಗೆ ಈಗ ಬಿ.ಎಸ್.ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ೨೦೧೯ರ ನವೆಂಬರ್ ನಿಂದ ಉಪಲೋಕಾಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಮತ್ತು ವಿಧಾನಪರಿಷತ್ ವಿರೋಧ ಪಕ್ಷದ ನಾಯ ಕರ ಜತೆ ಸಮಾಲೋಚಿಸಿದ ಬಳಿಕ ಬಿ.ಎಸ್.ಪಾಟೀಲ್ ಅವರ ಹೆಸರನ್ನು ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಿದ್ದರು. ಅದರಂತೆ ರಾಜ್ಯಪಾಲರು ನೇಮಕಾತಿ ಆದೇಶ ಹೊರಡಿಸಿದ್ದಾರೆ.

Translate »