ಸಿದ್ದಾಪುರ, ಮೇ 5- ಕಾಫಿ ತೋಟ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಪರಿ ಣಾಮ ಓರ್ವ ಗಂಭೀರವಾಗಿ ಗಾಯ ಗೊಂಡು ಮತ್ತೋರ್ವ ಪ್ರಾಣಾಪಾಯದಿಂದ ಪಾರಾದ ಘಟನೆ ಬರಡಿ ಗ್ರಾಮದಲ್ಲಿ ನಡೆದಿದೆ.
ಕಾಡಾನೆ ದಾಳಿಯಿಂದ ಗಾಯಗೊಂಡ ಸುರೇಂದ್ರ(50) ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ
ಮತ್ತೋರ್ವ ಕಾರ್ಮಿಕ ಜನಾರ್ದನ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯ ದಿಂದ ಪಾರಾಗಿದ್ದು, ಕಾಡಾನೆ ದಾಳಿ ಯಿಂದ ಗಾಯಗೊಂಡ ಸುರೇಂದ್ರ ಅವರನ್ನು ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಉಪಾ ಧ್ಯಕ್ಷೆ ದಮಯಂತಿ, ಸದಸ್ಯೆ ಸುಜಾತಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಡಾನೆ ಹಾವಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಕುಶಾಲನಗರ ತಾಲೂಕಿನ ನೆಲ್ಯಹುದಿ ಕೇರಿ ಪಂಚಾಯಿತಿ ವ್ಯಾಪ್ತಿಯ ಬರಡಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕೆಲಸಕ್ಕೆ ತೆರಳು ತ್ತಿದ್ದ ಕಾರ್ಮಿಕರ ಮೇಲೆ ಹಠಾತ್ ದಾಳಿ ಮಾಡಿದೆ. ವಿಷಯ ತಿಳಿದ ಸ್ಥಳೀ ಯರು ಸ್ಥಳಕ್ಕಾಗಮಿಸಿದ ಸಂದರ್ಭ ಕಾಡಾನೆ ಕಾಫಿ ತೋಟದತ್ತ ತೆರಳಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಕೆಲ ದಿನಗಳಿಂದ ಗ್ರಾಮ ವ್ಯಾಪ್ತಿಯಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡಾನೆಯಿಂದ ರೈತರ ಫಸಲು ನಾಶವಾ ಗುತ್ತಿದ್ದು, ಕಾರ್ಮಿಕರ ಮೇಲೆ ನಿರಂತರ ದಾಳಿ ಮಾಡುತ್ತಿದೆ. ಕಾಡಾನೆ ಹಾವಳಿ ತಡೆ ಗಟ್ಟಲು ಅರಣ್ಯ ಇಲಾಖೆ ವಿಫಲವಾಗಿದ್ದು, ಶಾಶ್ವತವಾಗಿ ಕಾಡಾನೆ ಹಾವಳಿ ತಡೆಗಟ್ಟಲು ಕಾರ್ಮಿಕ ಸಂಘಟನೆಯ ಮುಖಂಡ ಪಿ. ಆರ್ ಭರತ್ ಒತ್ತಾಯಿಸಿದರು.
ಉಪವಲಯ ಅರಣ್ಯಾಧಿಕಾರಿ ಸುಬ್ರಾಯ, ಅರಣ್ಯ ರಕ್ಷಕ ಚರಣ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಡಿ ಕೇರಿಗೆ ದಾಖಲಿಸಿದ್ದಾರೆ. ವಲಯ ಅರಣ್ಯಾಧಿಕಾರಿ ಸುಬ್ರಾಯ ಪತ್ರಿಕೆಯೊಂದಿಗೆ ಮಾತನಾಡಿ, ಅರಣ್ಯದಂಚಿನಲ್ಲಿ ಅಳವಡಿಸಲಾಗಿರುವ ಸೋಲಾರ್ ವಿದ್ಯುತ್ ತಂತಿ ಮೇಲೆ ಮಳೆಯಿಂದ ಮರ ಬಿದ್ದು ತುಂಡಾಗಿದೆ. ಅರಣ್ಯದಂಚಿನಿಂದ ಕಾಡಾನೆ ಯೊಂದು ಬರಡಿ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿರು ವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣ ಕಾಡಿಗಟ್ಟುವ ಕಾರ್ಯಾಚರಣೆ ಮಾಡಲಾಗುವುದು ಎಂದು ಹೇಳಿದರು.