ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ: ಶೀಘ್ರದಲ್ಲಿಯೇ ಕಾನೂನು ಜಾರಿ
ಮೈಸೂರು

ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ: ಶೀಘ್ರದಲ್ಲಿಯೇ ಕಾನೂನು ಜಾರಿ

August 27, 2018

ಬೆಂಗಳೂರು: ರಾಜ್ಯದಲ್ಲಿನ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯವಾಗಿಸುವ ನಿಟ್ಟಿನಲ್ಲಿ ಕಾನೂನು ರೂಪಿಸಲಾಗುತ್ತಿದೆ.

ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಸಾರ್ವಜನಿಕ ಘಟಕಗಳ ಹೆಸರು ಕನ್ನಡದಲ್ಲಿಯೇ ಇರಬೇಕು ಎಂಬ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಾಮಾಲಾ ನೇತೃತ್ವದ ಸಮಿತಿ ಕರಡು ಸಿದ್ಧಪಡಿಸುವ ಕಾರ್ಯದಲ್ಲಿ ತೊಡಗಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಇಂತಹದೊಂದು ಕಾನೂನು ರೂಪಿಸಲಾಗುತ್ತಿದೆ. ಆರಂಭದಲ್ಲಿ ಈ ಕಾರ್ಯ ಕೈಗೊಳ್ಳಲು ಯಾವುದೇ ಇಲಾಖೆ ಸಿದ್ಧವಿರಲಿಲ್ಲ. ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರಡು ಸಿದ್ಧಪಡಿಸುವ ಕಾರ್ಯ ನಡೆಸುತ್ತಿದೆ. ನಾವು ನಮ್ಮ ತೀರ್ಮಾನದೊಂದಿಗೆ ದೃಢವಾಗಿರುತ್ತಿದ್ದೇವೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಅಗತ್ಯ
ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರೊಬ್ಬರು ತಿಳಿಸಿದ್ದಾರೆ. ಆದಾಗ್ಯೂ, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ವಿಧಾನಸಭೆ ಹಾಗೂ ಪರಿಷತ್ತಿನ ಅಧಿವೇಶನ ಸಂದರ್ಭದಲ್ಲಿ ಈ ಯೋಜನೆ ಕಾನೂನು ರೂಪ ಪಡೆಯಬೇಕಾಗಿದೆ. ನಾಮಫಲಕಗಳಲ್ಲಿ ಕನ್ನಡಕ್ಕೆ ಎಷ್ಟು ಜಾಗ ಇರಬೇಕೆಂಬ ಬಗ್ಗೆ ಸ್ಪಷ್ಟತೆ ಇಲ್ಲ. ಇದರಲ್ಲಿ ಉಲ್ಲಂಘನೆಯಾದಾಗಲೂ ಕ್ರಮ ಕೈಗೊಳ್ಳಲು ಪ್ರಾಧಿಕಾರಕ್ಕೆ ಅಧಿಕಾರವಿಲ್ಲ. ಇಂತಹ ವಿಚಾರಗಳ ಬಗ್ಗೆ ಮಸೂದೆಯಲ್ಲಿ ವಿವರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Translate »