ರಾಮಕೃಷ್ಣ ವಿದ್ಯಾಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ
ಮೈಸೂರು

ರಾಮಕೃಷ್ಣ ವಿದ್ಯಾಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ

November 3, 2019

ಮೈಸೂರು,ನ.೨-ಕನ್ನಡಕ್ಕಾಗಿ ಕೈ ಎತ್ತು, ಅದು ಕಲ್ಪವೃಕ್ಷವಾಗುತ್ತದೆ. ಕನ್ನಡಕ್ಕಾಗಿ ಕೊರಳೆತ್ತು ಅದು ಪಾಂಚಜನ್ಯವಾಗುತ್ತದೆ. ಕನ್ನಡಕ್ಕಾಗಿ ಕಿರುಬೆರಳೆತ್ತಿದರೂ ಸಾಕು, ಅದೇ ಗೋವರ್ಧನ ಗಿರಿಯಾಗುತ್ತದೆ. ಅಂತಹ ಶಕ್ತಿ ನಮ್ಮ ಕನ್ನಡ ಭಾಷೆಗಿದೆ ಎಂದು ರಾಮ ಕೃಷ್ಣ ವಿದ್ಯಾ ಸಂಸ್ಥೆಯ ಸಂಸ್ಕೃತ ಶಿಕ್ಷಕಿ ರಾಜಶ್ರೀ ಸುಧೀರ್ ಸೊನ್ನದ್ ತಿಳಿಸಿದರು.

ಮೈಸೂರಿನ ರಾಮಕೃಷ್ಣ ನಗರದ ರಾಮ ಕೃಷ್ಣ ವಿದ್ಯಾಕೇಂದ್ರದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತ ನಾಡುತ್ತಾ, ಕನ್ನಡ ರಾಜ್ಯೋತ್ಸವವನ್ನು ಕೇವಲ ನವೆಂಬರ್‌ನಲ್ಲಿ ಆಚರಿಸದೆ, ಇಡೀ ವರ್ಷ ವೆಲ್ಲಾ ನಮ್ಮ ದಿನ ನಿತ್ಯದ ಬದುಕಿನಲ್ಲಿ ಎಲ್ಲೆಲ್ಲಿ ಸಾಧ್ಯವೋ ಅಲ್ಲಿ ಆಚರಿಸೋಣ. ಮಾತೃ ಭಾಷೆಯನ್ನು ಬಳಸುವುದರ ಮೂಲಕ ನಮ್ಮ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿ-ಬೆಳೆಸುವ ಜವಾಬ್ದಾರಿಯೊಂದಿಗೆ ಇಂದಿನ ಪರಭಾಷೆಯ ಹಾವಳಿಯಿಂದ ನಮ್ಮ ಭಾಷೆಯನ್ನು ಸಂರಕ್ಷಿಸೋಣ. ಆಗ ನಮ್ಮ ನಾಡು-ನುಡಿಗೆ ಗೌರವವನ್ನು ಸಲ್ಲಿಸಿದಂತೆ. ಇದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ರಾಮಕೃಷ್ಣ ಸೇವಾ ಸಂಘದ ಅಧ್ಯಕ್ಷ ಎಂ.ಪಾಪೇಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯ ನಿರ್ವಾ ಹಕ ಅಧಿಕಾರಿ ಪ್ರೊ. ಕೆ.ಪಿ.ಮಹದೇವಪ್ಪ, ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ.ಎಂ. ಮಹದೇವಪ್ಪ, ಪ್ರೌಢಶಾಲಾ ಮುಖ್ಯೋ ಪಾಧ್ಯಾಯ ಜಿ.ಎನ್.ವಿಶ್ವನಾಥ್, ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವೀಣಾ ಕೆ.ಹೆಗಡೆ ಮತ್ತು ಶ್ರೀ ಪಣಮ್ಯ ಎಜುಕೇಷನಲ್ ಮತ್ತು ಚಾರಿ ಟಬಲ್ ಟ್ರಸ್ಟ್ ಮ್ಯಾನೇಜಿಂಗ್ ಡೈರೆಕ್ಟರ್ ಸಿ.ಕೃಷ್ಣ ಉಪಸ್ಥಿತರಿದ್ದರು.

ನಂತರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸ ಲಾಯಿತು. ಕಾರ್ಯಕ್ರಮದ ನಿರೂಪಣೆ ಯನ್ನು ಕು. ಸಿ.ಜೆ.ಶ್ರಾವ್ಯ, ಸ್ವಾಗತವನ್ನು ಕು. ಎಸ್.ರಕ್ಷಿತ, ವಂದನಾರ್ಪಣೆಯನ್ನು ಚಿ. ಕೆ.ವಿ.ಹರ್ಷಿತ್ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಪರವಾಗಿ ಮನೋಹರವಾದ ಸಾಂಸ್ಕೃತಿಕ ನೃತ್ಯಗಳ ಮೂಲಕ ಎಲ್ಲರನ್ನೂ ರಂಜಿಸಿದರು.

Translate »