ರಾಜ್ಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಕಪಿಲ್ ಸಿಬಲ್
ಮೈಸೂರು

ರಾಜ್ಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಕಪಿಲ್ ಸಿಬಲ್

April 5, 2019

ಬೆಂಗಳೂರು: ಎಐಸಿಸಿಯಿಂದ ಬಿಡುಗಡೆಯಾದ ಚುನಾವಣಾ ಪ್ರಣಾಳಿಕೆಯನ್ನು ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಬಿಡುಗಡೆ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಆರ್ಥಿಕ ಪ್ರಗತಿ ಮತ್ತು ಸಾಮಾಜಿಕ ನ್ಯಾಯದ ಮೇಲೆ ದೇಶ ಅಭಿವೃದ್ಧಿ ಕಾಣುತ್ತಿದೆ. ಕೇಂದ್ರ ಸರ್ಕಾರ ಕಳೆದ ಐದು ವರ್ಷದಲ್ಲಿ ಯಾವುದೇ ಸಾಧನೆ ಮಾಡಿಲ್ಲ. ಬಡವರು ಬಡವರಾಗಿ, ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಹಣ ಮಾಡಿಕೊಂಡವರು ದೇಶ ಬಿಟ್ಟು ಓಡಿ ಹೋಗುತ್ತಿದ್ದಾರೆ. ಬಡವರು ಕುಟುಂಬಕ್ಕೆ ಊಟ ದಕ್ಕಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಶೇ.70ರಷ್ಟು ಮಂದಿ ಸರಾಸರಿ 10 ಸಾವಿರ ರೂ. ಮಾತ್ರ ಆದಾಯ ಹೊಂದಿದ್ದಾರೆ. ಯುಪಿಎ ಸಾಕಷ್ಟು ಅಭಿವೃದ್ಧಿ ಮಾಡಿತ್ತು. ಆದರೆ ಈಗ 5 ವರ್ಷ ದೇಶ ಮುನ್ನಡೆ ಸಿದ ಮೋದಿ ಸರ್ಕಾರ ಎಲ್ಲವನ್ನೂ ಕೆಡಿಸಿದೆ ಎಂದರು.

ನಾವು ನಮ್ಮ ಪ್ರಣಾಳಿಕೆಯಲ್ಲಿ ಉಚಿತ ಹಾಗೂ ಕಡ್ಡಾಯ ಶಿಕ್ಷಣವನ್ನು 12ನೇ ತರಗತಿಯವರೆಗೆ ವಿಸ್ತರಿಸುತ್ತೇವೆ. ಶಿಕ್ಷಣದಲ್ಲಿ ತಂತ್ರಜ್ಞಾನ ಅಳವಡಿಸುತ್ತಿದ್ದು, ಗುಣಮಟ್ಟದ ಶಿಕ್ಷಣ ಲಭಿಸಲಿದೆ. ಸಾಮಾಜಿಕ ನ್ಯಾಯಕ್ಕೆ ಬೆಂಬಲ ನೀಡುತ್ತೇವೆ. ಆರೋಗ್ಯದ ಬಗ್ಗೆ ಗಮನ ಹರಿಸಿದ್ದೇವೆ. ಉಚಿತ ಔಷಧ ನೀಡುವ ಕಾರ್ಯವನ್ನು ಕೆಲ ವರ್ಗ ದವರಿಗೆ ನೀಡಿದ್ದೇವೆ. ನಮ್ಮ ಬದ್ಧತೆ ಹೆಚ್ಚಿದೆ. ಇದರಿಂ ದಲೇ ಹೇಳಿದ್ದನ್ನೇ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಿದ್ದೇವೆ ಎಂದರು. ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಕೇಂದ್ರ ಸರ್ಕಾರದ ಅಧೀನ ಇಲಾಖೆಗಳಲ್ಲಿ ಮಹಿಳೆಯ ರಿಗೆ ಶೇ.33ರಷ್ಟು ಮೀಸಲಾತಿ ತರಲಿದ್ದೇವೆ. ದೇಶದ 6 ಕಡೆ ವಿಶೇಷ ನ್ಯಾಯಾಲಯ ಪೀಠ ಸ್ಥಾಪಿಸುತ್ತೇವೆ.

ಜ್ಯುಡಿಷಿಯಲ್ ನೇಮಕ ವ್ಯವಸ್ಥೆ ಜಾರಿಗೆ ತರುತ್ತೇವೆ. ನ್ಯಾಯ ದೂರು ಸೇರಿದಂತೆ ವಿವಿಧ ವಿಭಾಗ ತೆರೆಯು ತ್ತೇವೆ. ಈಗಿರುವ ಸಮಸ್ಯೆ ನ್ಯಾಯಾಲಯದ ವಿಚಾರದಲ್ಲಿ ಆಗಲ್ಲ. ಆರು ಸ್ಥಳೀಯ ನ್ಯಾಯಾಲಯ ಸ್ಥಾಪಿಸುತ್ತೇವೆ. ಪ್ರತಿ ವಲಯದಲ್ಲಿ ನ್ಯಾಯಾಲಯ ಇರುವುದರಿಂದ ಜನರಿಗೆ ದಿಲ್ಲಿಗೆ ಬರುವ ಸಮಸ್ಯೆ ಇಲ್ಲ. ಗೃಹ ನಿರ್ಮಾಣ, ಜಿಎಸ್ಟಿ 2.0 ಮಾಡಲಿದ್ದೇವೆ. ಸರಳೀಕರಣ ತರುತ್ತೇವೆ. ಜಿಎಸ್ಟಿ ಕೌನ್ಸಿಲ್‍ಗೆ ಬರುವ ಆದಾಯ ರಾಜ್ಯಕ್ಕೆ ಹಂಚುತ್ತೇವೆ. ಎನ್ಸಿಟಿಸಿ, ನ್ಯಾಕ್ ಬಲಗೊಳಿಸುತ್ತೇವೆ ಎಂದರು. ಕಳೆದ 5 ವರ್ಷಗಳಲ್ಲಿ ದೇಶದಲ್ಲಿ ಆರ್ಥಿಕ ಕುಸಿತ ಉಂಟಾಗಿದೆ. ಸಾಮಾಜಿಕ ನ್ಯಾಯದ ಬದಲು ಅನ್ಯಾಯ ಎಸಗಲಾಗಿದೆ. ಮೋದಿ ಸರ್ಕಾರ ನಡೆದುಕೊಂಡ ರೀತಿಯಿಂದ ಆರ್ಥಿಕ ಕುಸಿತ ಉಂಟಾಗಿದೆ. ನೋಟ್ ಬ್ಯಾನ್‍ನಿಂದ ಸಾಮಾನ್ಯ ಜನರ ಜೀವನಕ್ಕೆ ಭಾರೀ ಹೊಡೆತ ಬಿದ್ದಿದೆ.

Translate »