ಕರಿಘಟ್ಟ: ವಿದ್ಯಾರ್ಥಿಗಳಿಂದ ಸ್ವಚ್ಛತೆ ಕಾರ್ಯಕ್ರಮ
ಮೈಸೂರು

ಕರಿಘಟ್ಟ: ವಿದ್ಯಾರ್ಥಿಗಳಿಂದ ಸ್ವಚ್ಛತೆ ಕಾರ್ಯಕ್ರಮ

January 2, 2020

ಶ್ರೀರಂಗಪಟ್ಟಣ, ಜ.1(ವಿನಯ್ ಕಾರೇ ಕುರ)- ಹೊಸ ವರ್ಷದ ಸಂಭ್ರಮಾ ಚರಣೆಯನ್ನು ಮೈಸೂರಿನ ಸಿದ್ಧಾರ್ಥ ನಗರ ಸರ್ಕಾರಿ ಪದವಿ ಪೂರ್ವ ಕಾಲೇ ಜಿನ ವಿದ್ಯಾರ್ಥಿಗಳು ಶ್ರಮದಾನದ ಮೂಲಕ ಸ್ವಚ್ಛತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿನೂತನವಾಗಿ ಆಚರಿಸಿದರು.

ತಾಲೂಕಿನ ಕರಿಘಟ್ಟ ಬೆಟ್ಟದಲ್ಲಿ ಪರಿಸರ ಪ್ರೇಮಿ ರಮೇಶ್ ನೆಟ್ಟಿರುವ ಸುಮಾರು 500ಕ್ಕೂ ಹೆಚ್ಚು ಗಿಡಗಳ ಸುತ್ತ ಬೆಳೆದಿರುವ ಕಳೆಯನ್ನು ವಿದ್ಯಾರ್ಥಿಗಳು ತೆರವುಗೊಳಿಸಿ, ಗಿಡಗಳಿಗೆ ನೀರು ಹಾಕಿದರು. ಈ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಪರಿಸರ ಪ್ರೇಮಿ ರಮೇಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯನ್ನು ಯುವ ಜನತೆ ಮೋಜು ಮಸ್ತಿಗಾಗಿ ಮಾಡುವುದರಲ್ಲಿ ಕಳೆಯುತ್ತಿದ್ದಾರೆ. ಮೈಸೂರಿನ ಸಿದ್ಧಾರ್ಥ ನಗರ ಸರ್ಕಾರಿ ಪದವಿ ಪೂರ್ವ ಕಾಲೇ ಜಿನ ವಿದ್ಯಾರ್ಥಿಗಳು ಹೊಸ ವರ್ಷದ ಸಂಭ್ರಮಾಚರಣೆಯನ್ನು ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಹಾಗೂ ವಿಭಿನ್ನವಾಗಿ ಆಚರಿಸುವ ಮೂಲಕ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿ ದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆ ಹಾಗೂ ಪರಿಸರ ಆಸಕ್ತರಿಂದ ಇಂದು ಕರಿಘಟ್ಟ ಸುಂದರ ವಾದ ತಾಣವಾಗಿದೆ. ಮುಂದಿನ ದಿನ ಗಳಲ್ಲಿ ಸಾವಿರಾರು ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಕೆಲಸ ಮಾಡಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ಈ ವೇಳೆ ಕಾಲೇಜಿನ ಉಪನ್ಯಾಸಕ ಪ್ರಸನ್ನಕುಮಾರ್ ಸೇರಿದಂತೆ ವಿದ್ಯಾರ್ಥಿಗಳಿದ್ದರು.

Translate »