ಬೆಂಗಳೂರು, ಮಾ.5(ಕೆಎಂಶಿ)- ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ಪ್ರಸಕ್ತ ಸಾಲಿನಲ್ಲೇ ಮಂಡ್ಯ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬೃಹತ್ ಕುಡಿಯುವ ನೀರು ಯೋಜನೆಯನ್ನು 700 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿ ಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.
ಅಷ್ಟೇ ಅಲ್ಲದೆ ಮುಂದಿನ 4 ವರ್ಷಗಳಲ್ಲಿ ‘ಮನೆ ಮನೆಗೆ ಗಂಗೆ’ ನೂತನ ಯೋಜನೆಯಡಿ ಗ್ರಾಮೀಣ ಭಾಗದ ಎಲ್ಲಾ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಹಾಗೂ ರಾಜ್ಯದ ಸಂಪನ್ಮೂಲ ಗಳನ್ನು ಬಳಸಿಕೊಂಡು, ಪ್ರತಿಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 10 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಒದಗಿಸುವುದಾಗಿಯು ಘೋಷಣೆ ಮಾಡಿದ್ದಾರೆ.
ಅಲ್ಲದೆ, ಮಹತ್ವಾಕಾಂಕ್ಷಿ ಜಲಧಾರೆ ಯೋಜನೆ ಅನುಷ್ಠಾನಗೊಳಿಸುತ್ತಿದ್ದು, ಇದಕ್ಕೆ ತಗಲುವ ಪೂರ್ಣ ವೆಚ್ಚವನ್ನು ಏಷ್ಯಾ ಮೂಲಸೌಕರ್ಯ ಬಂಡವಾಳ ಹಣಕಾಸು ಸಂಸ್ಥೆಯಿಂದ ನೆರವು ಪಡೆದು 2 ಜಿಲ್ಲೆಗಳಲ್ಲಿ ಯೋಜನೆ ಅನುಷ್ಠಾನಕ್ಕೆ ತರುವುದಾಗಿ ಹೇಳಿದ್ದಾರೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ನೀರಿನ ಪೂರೈಕೆಯಲ್ಲಿ ಸಮನ್ವಯ ಸಾಧಿಸಲು ಹಾಗೂ ಶುದ್ಧ ಕುಡಿಯುವ ನೀರು ಪೂರೈಸಲು ಸಮಗ್ರ ನೀತಿ ರೂಪಿಸುವುದಾಗಿ ತಿಳಿಸಿರುವ ಮುಖ್ಯ ಮಂತ್ರಿಯವರು ಸಂಬಂಧಿಸಿದ ಇಲಾಖೆ ಮತ್ತು ಸಂಸ್ಥೆಗಳನ್ನು ಒಂದೇ ಸಚಿವಾಲಯ ದಡಿ ತರುವುದಾಗಿ ಹೇಳಿದ್ದಾರೆ. ರಾಜ್ಯದ 17 ನದಿ ಪಾತ್ರದ ಮಲೀನತೆ ತಡೆಗಟ್ಟಲು 1690 ಕೋಟಿ ರೂ. ವೆಚ್ಚದಲ್ಲಿ 20 ನಗರ ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಹಾಗೂ 1 ಪಟ್ಟಣಕ್ಕೆ ಮಲತ್ಯಾಜ್ಯ ಸಂಸ್ಕರಣಾ ಘಟಕ ಅಳವಡಿಸಲು ತೀರ್ಮಾನಿಸಲಾಗಿದೆ.
ಪೆÇಲೀಸರಿಗೆ `ಗೃಹ ಭಾಗ್ಯ’ ಮಹಿಳೆಯರಿಗೆ `ಸುರಕ್ಷಾ ಆ್ಯಪ್’
ಬೆಂಗಳೂರು,ಮಾ.5- ಪೆÇಲೀಸ್ ಸಿಬ್ಬಂದಿಗೆ `ಪೆÇಲೀಸ್ ಗೃಹ ಭಾಗ್ಯ-2020’ ಯೋಜನೆಯನ್ನು ಜಾರಿಗೆ ತರಲು ಮುಂದಾ ಗಿದೆ. 2020-21ನೇ ಸಾಲಿನಲ್ಲಿ ಯೋಜನೆಯ ಕಾಮಗಾರಿಗಳನ್ನು ಮುಂದುವರಿಸಲು 200 ಕೋಟಿ ರೂ. ಒದಗಿಸಲಾಗುವುದು. ಜೊತೆಗೆ, `ಪೆÇಲೀಸ್ ಗೃಹ-2025’ ಯೋಜನೆಯ ಅನುಷ್ಠಾನಕ್ಕೆ ಎಲ್ಲಾ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದರು. ಪ್ರಸಕ್ತ ಬಜೆಟ್‍ನಲ್ಲಿ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳ ವಲಯಕ್ಕೆ ಸರ್ಕಾರ ಬರೋಬ್ಬರಿ 10 ಸಾವಿರ ಕೋಟಿ ರೂ. ಮೀಸಲಿರಿಸಿದೆ.
ಸುರಕ್ಷಾ ಆ್ಯಪ್ ವಿಸ್ತರಣೆ: ಮಹಿಳೆಯರಿಗೆ ಸುರಕ್ಷತೆ ಒದಗಿಸುವ ಸಲುವಾಗಿ ಈಗಾಗಲೇ ಅಭಿವೃದ್ಧಿಪಡಿಸಿರುವ `ಸುರಕ್ಷಾ ಆ್ಯಪ್’ ಅನ್ನು ಬೆಂಗಳೂರು ನಗರವೊಂದರಲ್ಲೇ 2 ಲಕ್ಷಕ್ಕೂ ಹೆಚ್ಚು ಜನರು ಡೌನ್‍ಲೋಡ್ ಮಾಡಿಕೊಂಡಿದ್ದಾರೆ. 2020-21ನೇ ಸಾಲಿನಲ್ಲಿ ಆ್ಯಪ್ ಅನ್ನು ರಾಜ್ಯಾದ್ಯಂತ ವಿಸ್ತರಿಸಿ ಸಂಕಷ್ಟದ ಸಮಯದಲ್ಲಿ ಮಹಿಳೆ ಯರಿಗೆ ತುರ್ತು ಸ್ಪಂದನಾ ವಾಹನಗಳ ಮೂಲಕ ರಕ್ಷಣೆ ನೀಡ ಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದರು.