ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತಿ ವರ್ಷ 2 ಸಾವಿರ ರೂ. ನೆರವು
ಮೈಸೂರು

ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತಿ ವರ್ಷ 2 ಸಾವಿರ ರೂ. ನೆರವು

March 6, 2020

ಬೆಂಗಳೂರು,ಮಾ.5(ಕೆಎಂಶಿ)- ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತೀ ವರ್ಷ 2000 ರೂ.ಗಳ ನೆರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿ ದ್ದಾರೆ. ಪ್ರಸಕ್ತ ಸಾಲಿನ ಮುಂಗಡ ಪತ್ರದಲ್ಲಿ ಅವರ ಸಹಾಯಕ್ಕೆ ಬಂದಿ ರುವ ಮುಖ್ಯಮಂತ್ರಿಯವರು ಇದಕ್ಕಾಗಿ 40 ಕೋಟಿ ರೂ.ಗಳನ್ನು ಮೀಸಲಿರಿಸಿದ್ದಾರೆ.

ರಾಜ್ಯದಲ್ಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಸಾರ್ವಜನಿಕ ಸಾರಿಗೆ ಸೇವೆಯನ್ನು ಒದಗಿಸಲು ಕೆಎಸ್‍ಆರ್‍ಟಿಸಿ, ಈಶಾನ್ಯ ಹಾಗೂ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗಳಿಂದ 2450 ಹೊಸ ಬಸ್‍ಗಳನ್ನು ಖರೀದಿಸಲಾಗುತ್ತಿದೆ. ಒಟ್ಟಾರೆ 2020-21ನೇ ಸಾಲಿನಲ್ಲಿ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳ ವಲಯಕ್ಕೆ 10,194 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ.

Translate »