ಫೆ.6ಕ್ಕೆ ಸಂಪುಟ ವಿಸ್ತರಣೆ
ಮೈಸೂರು

ಫೆ.6ಕ್ಕೆ ಸಂಪುಟ ವಿಸ್ತರಣೆ

February 3, 2020

ಬೆಂಗಳೂರು, ಫೆ.2-ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ. ಫೆ.6ರಂದು ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ಸುದ್ದಿ ಗೋಷ್ಠಿ ನಡೆಸಿದ ಮುಖ್ಯಮಂತ್ರಿಗಳು, ಫೆ.6ರಂದು ಸಂಪುಟ ವಿಸ್ತರಣೆಯಾಗಲಿದೆ. ಅಂದು ಬೆಳಿಗ್ಗೆ 10.30ಕ್ಕೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದರು. ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎಂಬುದನ್ನು ಸೋಮವಾರ ತೀರ್ಮಾನಿಸುವುದಾಗಿ ಹೇಳಿದ ಅವರು, ನೂತನ ಸಚಿವರಾಗಿ ಯಾರೆಲ್ಲಾ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ಗುಟ್ಟು ಬಿಟ್ಟುಕೊಟ್ಟಿಲ್ಲ.

ಉಪ ಚುನಾವಣೆಯಲ್ಲಿ ಗೆದ್ದಿರುವ ಶಾಸಕರ ಪೈಕಿ 10 ಮಂದಿ ಸಚಿವರಾಗಲಿದ್ದಾರೆ ಎಂದು ಹೇಳಿದ ಮುಖ್ಯ ಮಂತ್ರಿಗಳು, ಸುಪ್ರೀಂಕೋರ್ಟ್‍ನ ತೀರ್ಪಿನ ಹಿನ್ನೆಲೆಯಲ್ಲಿ ಉಪ ಚುನಾವಣೆಯಲ್ಲಿ ಸೋತವ ರಿಗೆ ಸಚಿವ ಸ್ಥಾನ ಸಿಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಫೆ.5ರಂದು ಕಲಬುರಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಉದ್ಘಾ ಟನೆ ಕಾರ್ಯಕ್ರಮದಲ್ಲಿ ಭಾಗವ ಹಿಸಲಿರುವ ಮುಖ್ಯಮಂತ್ರಿ ಯಡಿ ಯೂರಪ್ಪ, ಮರುದಿನವೇ ಸಂಪುಟ ವಿಸ್ತರಿಸಲಿದ್ದಾರೆ.

ಸಿಎಂ-ರಮೇಶ್ ಜಾರಕಿಹೊಳಿ ಭೇಟಿ: ಸಂಪುಟ ವಿಸ್ತ ರಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರನ್ನು ಭೇಟಿ ಮಾಡಿ ಸುಮಾರು 30 ನಿಮಿಷ ಮಾತುಕತೆ ನಡೆಸಿದರು. ಈ ವೇಳೆ ಸಚಿವ ಸ್ಥಾನದಿಂದ ವಂಚಿತರಾಗಲಿರುವ ಮಹೇಶ್ ಕುಮಟಳ್ಳಿ ಅವರ ಮನ ವೊಲಿಸುವಂತೆ ಮುಖ್ಯಮಂತ್ರಿಗಳು ರಮೇಶ್ ಜಾರಕಿ ಹೊಳಿ ಅವರಿಗೆ ಮನವಿ ಮಾಡಿದರು ಎನ್ನಲಾಗಿದೆ. ಅಲ್ಲದೇ ಮಹೇಶ್ ಕುಮಟಳ್ಳಿ ಅವರಿಗೆ ಪ್ರಮುಖ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಪ್ರಸ್ತಾವನೆ ಯನ್ನು ಮುಖ್ಯಮಂತ್ರಿಗಳು ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ರಮೇಶ್ ಜಾರಕಿಹೊಳಿ ತಮಗೆ ಜಲ ಸಂಪನ್ಮೂಲ ಖಾತೆಯನ್ನೇ ಕೊಡಬೇಕು. ಅಲ್ಲದೇ ಸಮ್ಮಿಶ್ರ ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್‍ಗೆ ವಿಧಾನಸೌಧದಲ್ಲಿ ಒದಗಿಸಿದ್ದ 336 ಮತ್ತು 337ನೇ ಸಂಖ್ಯೆಯ ಕೊಠಡಿ ಗಳನ್ನೇ ನೀಡಬೇಕು ಎಂದು ಪಟ್ಟು ಹಿಡಿದರೆಂದು ಹೇಳಲಾಗಿದೆ. ಆದರೆ ರಮೇಶ್ ಜಾರಕಿಹೊಳಿ ಅವರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳು ಯಾವುದೇ ಸ್ಪಷ್ಟ ಭರವಸೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

Translate »