ಕರ್ನಾಟಕ ರಂಗ ಪರಿಷತ್ತು ಚಾಮರಾಜನಗರ ಜಿಲ್ಲಾಧ್ಯಕ್ಷರಾಗಿ ಜಿ.ರಾಜಪ್ಪ ನೇಮಕ
ಚಾಮರಾಜನಗರ

ಕರ್ನಾಟಕ ರಂಗ ಪರಿಷತ್ತು ಚಾಮರಾಜನಗರ ಜಿಲ್ಲಾಧ್ಯಕ್ಷರಾಗಿ ಜಿ.ರಾಜಪ್ಪ ನೇಮಕ

August 2, 2018

ಚಾಮರಾಜನಗರ: ಕರ್ನಾಟಕ ರಂಗ ಪರಿಷತ್ತು ಕೇಂದ್ರ ಸಮಿತಿ ಚಾಮರಾಜನಗರ ಜಿಲ್ಲಾ ಘಟಕ ಅಧ್ಯಕ್ಷರನ್ನಾಗಿ ರಾಮಸಮುದ್ರದ ಜಿ.ರಾಜಪ್ಪ ಅವರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಏರ್ಪಡಿಸಿದ್ದ “ರಂಗಚಿಂತನಾ” ಒಂದು ದಿನದ ಕಾರ್ಯಾಗಾರ ಸಮಾರಂಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್ ನೇಮಕಾತಿ ಪತ್ರವನ್ನು ನೀಡಿದರು. ಸಂಸ್ಥೆಯ ರಾಜ್ಯ ಕಾರ್ಯದರ್ಶಿ ಸಂಸ ಸುರೇಶ್ ಈ ಸಂದರ್ಭದಲ್ಲಿ ಹಾಜರಿದ್ದರು. ರಂಗಶಿಕ್ಷಣ ಪದವೀಧರರಿಗೆ ಪ್ರೌಢಶಾಲೆಗಳಲ್ಲಿ ರಂಗ ಶಿಕ್ಷಕರನ್ನಾಗಿ ನೇಮಕ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುವ ನಿರ್ಣಾಯವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

Translate »