ನೋಂದಾಯಿತ ಕಾರ್ಮಿಕರ ಕುಟುಂಬಕ್ಕೆ ಉಚಿತ ಚಿಕಿತ್ಸೆ
ಮೈಸೂರು

ನೋಂದಾಯಿತ ಕಾರ್ಮಿಕರ ಕುಟುಂಬಕ್ಕೆ ಉಚಿತ ಚಿಕಿತ್ಸೆ

March 6, 2020

ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್
ಶಿಶುಪಾಲನಾ ಕೇಂದ್ರ, 110 ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ
ಬೆಂಗಳೂರು, ಮಾ.5(ಕೆಎಂಶಿ)- ಕಾರ್ಮಿಕರಿಗೆ ಮುಖ್ಯಮಂತ್ರಿ ಯಡಿ ಯೂರಪ್ಪ ತಮ್ಮ ಮುಂಗಡ ಪತ್ರದಲ್ಲಿ ಬಂಪರ್ ಕೊಡುಗೆ ನೀಡಿದ್ದಾರೆ. 1 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಮುಖ್ಯಮಂತ್ರಿ ಗಳ ಆರೋಗ್ಯ ಸುರಕ್ಷಾ ಯೋಜನೆಯಡಿ ಖಾಸಗಿ ಆಸ್ಪತ್ರೆ ಯಲ್ಲಿ ಉಚಿತ ಚಿಕಿತ್ಸೆ. ಗಾರ್ಮೆಂಟ್ಸ್‍ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ `ವನಿತಾ ಸಂಗಾತಿ’ ಎಂಬ ವಿನೂತನ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಇದರಡಿ 1 ಲಕ್ಷ ಮಹಿಳಾ ಕಾರ್ಮಿಕರಿಗೆ ಮಾಸಿಕ ಉಚಿತ ಬಸ್ ಪಾಸ್‍ಗಳನ್ನು ವಿತರಣೆ ಮಾಡಲಾಗುವುದು. ಗಾರ್ಮೆಂಟ್ಸ್ ಕಾರ್ಖಾನೆಯ ಮಾಲೀಕರು ಮತ್ತು ಬಿಎಂಟಿಸಿ ಸಹಯೋಗದೊಂದಿಗೆ ಪಾಸ್ ವಿತರಣೆ ಮಾಡಲಾಗುವುದು. ಪ್ರಸಕ್ತ ವರ್ಷ ಈ ಯೋಜನೆಗಾಗಿ 25 ಕೋಟಿ ಅನುದಾನ ಮೀಸಲಿಡಲಾಗಿದೆ. ನಗರ ಪ್ರದೇಶಗಳಲ್ಲಿ ದುಡಿಯುತ್ತಿರುವ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರಿಗೆ ಆರೋಗ್ಯ ದೃಷ್ಟಿಯಿಂದ 10 ಮೊಬೈಲ್ ಕ್ಲಿನಿಕ್‍ಗಳು ಈ ವರ್ಷವೇ ಪ್ರಾರಂಭವಾಗಲಿವೆ. ರಾಜ್ಯಾದ್ಯಂತ ಕಟ್ಟಡ ಕಾರ್ಮಿ ಕರ 6 ವರ್ಷದೊಳಗಿನ ಮಕ್ಕಳ ಪಾಲನೆ, ಪೆÇೀಷಣೆ ಮಾಡಲು ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ 10 ಸಂಚಾರಿ ಶಿಶುಪಾಲನಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 110 ಕಿತ್ತೂರುರಾಣಿ ಚನ್ನಮ್ಮ ಶಿಶುಪಾಲನಾ ಕೇಂದ್ರಗಳು ಸ್ಥಾಪನೆಯಾಗಲಿವೆ.

Translate »