ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಆರೋಗ್ಯ  ಸ್ಥಿತಿ ಗಂಭೀರ
ದೇಶ-ವಿದೇಶ

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಆರೋಗ್ಯ  ಸ್ಥಿತಿ ಗಂಭೀರ

July 30, 2018

ಚೆನ್ನೈ: ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿರುವ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯ ಮಂತ್ರಿ ಎಂ.ಕರುಣಾ ನಿಧಿ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಕೊಯಂಬತ್ತೂರು ಪ್ರವಾಸ ಮೊಟಕುಗೊಳಿಸಿ ಚೆನ್ನೈಗೆ ವಾಪಸ್ ಆಗಿದ್ದಾರೆ. ಚೆನ್ನೈನ ಕಾವೇರಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿ ರುವ 94 ವರ್ಷದ ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಇಂದು ಸಂಜೆ ಮತ್ತಷ್ಟು ಗಂಭೀರವಾಗಿದ್ದು, ಆತಂಕಗೊಂಡ ಡಿಎಂಕೆ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಆಸ್ಪತ್ರೆ ಬಳಿ ಜಮಾಯಿಸಿದ್ದಾರೆ.

ಕರುಣಾನಿಧಿ ಕುಟಂಬಸ್ಥರು ಹಾಗೂ ತಮಿಳುನಾಡು ಸಿಎಂ ಪಳನಿಸ್ವಾಮಿ ಅವರು ಸಹ ಆಸ್ಪತ್ರೆಗೆ ಆಗಮಿಸಿದ್ದು, ಆಸ್ಪತ್ರೆ ಸುತ್ತ ಭಾರಿ ಭದ್ರತೆ ಏರ್ಪಡಿಸಲಾಗಿದೆ. ಕೆಲವು ದಿನಗಳ ಹಿಂದಷ್ಟೇ ಆಸ್ಪತ್ರೆಯಿಂದ ಗೋಪಾಲ ಪುರಂ ನಿವಾಸಕ್ಕೆ ಕರೆತರಲಾಗಿದ್ದ ಕರುಣಾನಿಧಿ ಅವರಿಗೆ ಮನೆಯಲ್ಲಿ ಚಿಕಿತ್ಸೆ ನೀಡ ಲಾಗುತ್ತಿತ್ತು. ಆದರೆ ಕಳೆದ ಶುಕ್ರವಾರ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದರಿಂದ ಮತ್ತೆ ಆಸ್ಪತ್ರೆಗೆ ಕರೆತಂದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರುಣಾನಿಧಿ ಶೀಘ್ರ ಚೇತರಿಕೆ ಹಾರೈಸಿ ಟ್ವೀಟ್‍ಮಾಡಿದ್ದರು.

Translate »