ಕೇಜ್ರಿವಾಲ್‍ಗೆ ಕಪಾಳಮೋಕ್ಷ ಮಾಡಿದ್ದು ಆಪ್ ಕಾರ್ಯಕರ್ತ
ಮೈಸೂರು

ಕೇಜ್ರಿವಾಲ್‍ಗೆ ಕಪಾಳಮೋಕ್ಷ ಮಾಡಿದ್ದು ಆಪ್ ಕಾರ್ಯಕರ್ತ

May 6, 2019

ನವದೆಹಲಿ: ಚುನಾವಣಾ ರ್ಯಾಲಿ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕಪಾಳಮೋಕ್ಷ ಮಾಡಿದ್ದು ಬಿಜೆಪಿ ಕಾರ್ಯಕರ್ತನಲ್ಲ, ಬದಲಿಗೆ ಆತ ಆಪ್ ಕಾರ್ಯಕರ್ತ ಎಂದು ದೆಹಲಿ ಪೊಲೀಸರು ಸ್ಪಷ್ಟ ಪಡಿಸಿದ್ದಾರೆ. ಭಾರತೀಯ ಸೇನೆಯ ಬಗ್ಗೆ ಆಪ್ ನಾಯಕರು ಅವಹೇಳನಕಾರಿ ಹೇಳಿಕೆ ನೀಡಿದ್ದ ರಿಂದ ಆಕ್ರೋಶಿತನಾಗಿದ್ದ ಆತ, ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ಹೇಳಲಾಗಿದೆ.

ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಯುವಕ ನೋರ್ವ ಕೇಜ್ರಿವಾಲ್ ಅವರಿಗೆ ಕಪಾಳಮೋಕ್ಷ ಮಾಡಿದ್ದ. ಆತನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದರು. ಆತ ಮೋತಿ ನಗರ ನಿವಾಸಿ ಸುರೇಶ್ ಎಂದು ಗುರುತಿಸಲಾಗಿದ್ದು, ತನ್ನ ವ್ಯಾಪ್ತಿ ಯಲ್ಲಿ ಸುರೇಶ್ ಆಪ್ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಂಡು ಸಭೆಗಳನ್ನು ಆಯೋಜಿಸುತ್ತಿದ್ದ. ಆದರೆ ಪಕ್ಷದ ನಾಯಕರ ವರ್ತನೆಯಿಂದ ಬೇಸತ್ತಿದ್ದ ಆತ ಈ ಕೃತ್ಯ ಎಸಗಿದ್ದಾನೆ ಎಂದು ದೆಹಲಿ ಪೊಲೀಸ್ ಹೆಚ್ಚುವರಿ ಪಿಆರ್‍ಓ ಅನಿಲ್ ಮಿಠ್ಠಲ್ ತಿಳಿಸಿದ್ದಾರೆ. ಕೇಜ್ರಿವಾಲ್ ಅವರಿಗೆ ಕಪಾಳಮೋಕ್ಷ ನಡೆದಾಗ ಆಪ್ ನಾಯಕರು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗೂಬೆ ಕೂರಿಸಲು ಮುಂದಾಗಿದ್ದರು ಎಂಬುದನ್ನು ಸ್ಮರಿಸಬಹುದು.

Translate »