ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರ ಕೊಡುಗೆ ಅಪಾರ
ಕೊಡಗು

ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರ ಕೊಡುಗೆ ಅಪಾರ

June 28, 2018

ಮಡಿಕೇರಿ: ಬೆಂಗಳೂರು ನಿರ್ಮಾತೃ, ಆದರ್ಶ ಆಡಳಿತಗಾರ ಕೆಂಪೇ ಗೌಡರ ಆಡಳಿತ ವ್ಯವಸ್ಥೆ, ದಕ್ಷತೆ ವಿಚಾರ ಗಳನ್ನು ಇಂದಿನ ಯುವ ಜನರು ತಿಳಿದು ಕೊಳ್ಳುವಂತಾಗಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರ ದಲ್ಲಿ ಬುಧವಾರ ನಡೆದ ನಾಡಪ್ರಭು ಕೆಂಪೇ ಗೌಡ ಜಯಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾಡಪ್ರಭು ಕೆಂಪೇಗೌಡರು ಆದರ್ಶ ಆಡಳಿತಗಾರರಾಗಿ ಬೆಂಗಳೂರು ನಗರ ನಿರ್ಮಾಣಕ್ಕೆ ಅಪಾರ ಕೊಡುಗೆ ನೀಡಿ ದ್ದಾರೆ. ಶಿಸ್ತು ಬದ್ಧ ಹಾಗೂ ಯೋಜನಾ ಬದ್ಧ ಬೆಂಗಳೂರು ನಗರ ನಿರ್ಮಾಣಕ್ಕೆ ಅಡಿಗಲ್ಲು ಸ್ಥಾಪಿಸಿ ಇಂದು ಬೃಹತ್ ಹೆಮ್ಮರವಾಗಿ ಬೆಂಗಳೂರು ನಗರ ಬೆಳೆ ದಿದೆ ಎಂದು ಅವರು ಹೇಳಿದರು.

ನಾಡಪ್ರಭು ಕೆಂಪೇಗೌಡರಂತೆ ಮಹಾತ್ಮ ಗಾಂಧೀಜಿ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ, ಜನರಲ್ ಕೆ.ಎಸ್.ತಿಮ್ಮಯ್ಯ ಹೀಗೆ ಹಲವರ ವಿಚಾರ ಧಾರೆಗಳನ್ನು ಯುವ ಜನರು, ವಿದ್ಯಾರ್ಥಿಗಳು ತಿಳಿದು ಕೊಳ್ಳುವುದರ ಜೊತೆಗೆ, ಅವರಂತೆ ಆದರ್ಶ ಹಾಗೂ ಮಾದರಿಯಾಗಿ ನಡೆದು ಕೊಂಡಾಗ ಬಲಿಷ್ಠ ಭಾರತ ನಿರ್ಮಾಣ ಮಾಡಲು ಸಾಧ್ಯ ಎಂದು ಎಂಪಿ.ಅಪ್ಪಚ್ಚು ರಂಜನ್ ಅವರು ಸಲಹೆ ಮಾಡಿದರು.

ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಮಾತನಾಡಿ, ಬೆಂಗಳೂರು ನಗರ ನಿರ್ಮಾಣ ಮಾಡಿದ ಕೀರ್ತಿ ಕೆಂಪೇಗೌಡರದ್ದಾಗಿದೆ. ಸುಮಾರು 38 ವರ್ಷಗಳ ಕಾಲ ಬೆಂಗಳೂರು ಆಳ್ವಿಕೆ ಮಾಡಿದ್ದಾರೆ. ಕೆಂಪೇಗೌಡರು ಸ್ಥಾಪಿಸಿ ಕಟ್ಟಿ ಬೆಳೆಸಿದ ನಗರ ಇಂದು ವಿಶ್ವ ವಿಖ್ಯಾ ತವಾಗಿದೆ. ಈ ನಗರ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ್ದು, ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಡಲಾಗಿದೆ ಎಂದು ಅವರು ತಿಳಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಬಿ.ಎಂ.ಬೆಳ್ಯಪ್ಪ ಮಾತ ನಾಡಿ, ಕೆಂಪೇಗೌಡರು ಬೆಂಗಳೂರನ್ನು ಮಾದರಿ ನಗರವಾಗಿ ದೂರದೃಷ್ಟಿಯಿಂದ ನಿರ್ಮಿಸಿದರು. ವೃತ್ತಿ, ವ್ಯಾಪಾರ, ಕಸುಬು ಗಳಿಗೆ ಅನುಗುಣವಾಗಿ ಅರಳೆಪೇಟೆ, ಅಕ್ಕಿ ಪೇಟೆ, ಬಳೇಪೇಟೆ, ಕುಂಬಾರಪೇಟೆ, ಚಿಕ್ಕ ಪೇಟೆ, ದೊಡ್ಡಪೇಟೆ ಹೀಗೆ ನಗರವನ್ನು ವ್ಯವಸ್ಥಿತವಾಗಿ ನಿರ್ಮಿಸಿದ ಹಿರಿಮೆ ಕೆಂಪೇಗೌಡರದ್ದಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟ ಕದ ಅಧ್ಯಕ್ಷ ಲೋಕೇಶ್ ಸಾಗರ್ ಮಾತ ನಾಡಿ, ಕೆಂಪೇಗೌಡರ ಆದರ್ಶಗಳನ್ನು ಪ್ರತಿ ಯೊಬ್ಬರೂ ತಿಳಿದುಕೊಳ್ಳಬೇಕು ಎಂದರು.

ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ ಮಾತನಾಡಿ, ನಗರಗಳು ಬೆಳೆ ದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸ ಬೇಕಿದೆ. ಉತ್ತಮ ಪರಿಸರವನ್ನು ಒಳ ಗೊಂಡಿರಬೇಕು. ಆ ನಿಟ್ಟಿನಲ್ಲಿ ಬಹಳ ವರ್ಷ ಗಳ ಹಿಂದೆಯೇ ಆದರ್ಶ ಆಡಳಿತಗಾರ ರಾಗಿ ಕೆಂಪೇಗೌಡರು ಉತ್ತಮ ನಗರ ವನ್ನು ನಿರ್ಮಿಸಿದ್ದರು. ಬೆಂಗಳೂರು ಬೆಳವಣಿಗೆಗೆ ಭದ್ರಬುನಾದಿ ಹಾಕಿದ ನಾಡಪ್ರಭು ಕೆಂಪೇಗೌಡ ಸ್ಮರಣೀಯ ಎಂದು ಹೇಳಿದರು.

ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ರಾದ ಸೂರ್ತಲೆ ಸೋಮಣ್ಣ ಮಾತ ನಾಡಿ, ಬೆಂಗಳೂರು ನಗರ ವಿಶ್ವದಲ್ಲಿ ಪ್ರಸಿದ್ದಿ ಪಡೆಯಲು ಕೆಂಪೇಗೌಡರು ಭದ್ರಬುನಾದಿ ಹಾಕಿದ್ದರು. ಆ ನಿಟ್ಟಿನಲ್ಲಿ ನಗರ ಬೆಳವಣಿಗೆ ಕಂಡಿದೆ ಎಂದು ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್ ಅವರು ಮಾತನಾಡಿದರು.

ಜಿಪಂ ಸಿಇಓ ಪ್ರಶಾಂತ್ ಕುಮಾರ್ ಮಿಶ್ರ, ಉಪ ವಿಭಾಗಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್ ಸ್ವಾಗತಿಸಿದರು, ಕಲಾವಿದ ಷಡಕ್ಷರಿ ಮತ್ತು ತಂಡದವರು ನಾಡಗೀತೆ ಹಾಡಿದರು, ನಿವೃತ್ತ ಉಪನ್ಯಾಸಕರಾದ ಶಂಕರಯ್ಯ ನಿರೂಪಿಸಿದರು, ವಂದಿಸಿದರು.

Translate »