ಮುಂಬೈ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಮೈಸೂರು

ಮುಂಬೈ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

August 9, 2020

ಬೆಂಗಳೂರು, ಆ.8-ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ದೇಶದಲ್ಲಿನ 2ನೇ ಬ್ಯುಸಿಯಾಗಿರುವ ವಿಮಾನ ನಿಲ್ದಾಣ ಎನಿಸಿಕೊಂಡಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಅಂಕಿಸಂಖ್ಯೆಗಳ ಪ್ರಕಾರ ಬೆಂಗ ಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ದೀರ್ಘ ಕಾಲದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉಳಿಸಿ ಕೊಂಡಿದ್ದ ಸ್ಥಾನವನ್ನು ಕಿತ್ತುಕೊಂಡಿದ್ದು, ದೇಶದಲ್ಲಿನ 2ನೆಯ ಬ್ಯುಸಿಯಾಗಿರುವ ವಿಮಾನ ನಿಲ್ದಾಣವಾಗಿ ಹೊರಹೊಮ್ಮಿದೆ.

2020-2021ನೇ ಸಾಲಿನ ಮೊದಲ ತ್ರೈಮಾ ಸಿಕದಲ್ಲಿನ ಅಂಕಿಅಂಶಗಳು ಈ ವಾರದ ಆರಂಭದಲ್ಲಿ ಬಿಡುಗಡೆಯಾಗಿದ್ದು, ಏಪ್ರಿಲ್ ನಿಂದ ಜೂನ್‍ವರೆಗೂ 4, 54, 704 ಅಂತಾರಾಷ್ಟ್ರೀಯ ಮತ್ತು ದೇಶೀಯ ಪ್ರಯಾ ಣಿಕರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಚರಿಸಿದ್ದರೆ, ಇದೇ ಅವಧಿಯಲ್ಲಿ ಮುಂಬೈಯಲ್ಲಿ 3,19,412 ಪ್ರಯಾಣಿಕರು ಹಾಗೂ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 12,31,338 ಪ್ರಯಾಣಿಕರು ಸಂಚರಿಸಿದ್ದಾರೆ.

Translate »