ಮೈಸೂರು ನಗರ ಸಾರಿಗೆ ಘಟಕದಲ್ಲಿ ಕೆಂಪೇಗೌಡ ಜಯಂತಿ ಆಚರಣೆ

ಮೈಸೂರು: ಮೈಸೂರಿನ ಕುವೆಂಪುನಗರದ ಕೆಎಸ್ಆರ್‌ಟಿಸಿ ನಗರ ಸಾರಿಗೆ 2ನೇ ಘಟಕದಲ್ಲಿ ಬುಧವಾರ ಕೆಎಸ್ಆರ್‌ಟಿಸಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು.

ಕೆಂಪೇಗೌಡರ ಭಾವಚಿತ್ರಕ್ಕೆ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್ ಪುಷ್ಪಾರ್ಚನೆ ಮಾಡಿದರು. ಬಳಿಕ ಮಾತನಾಡಿದ ಅವರು, ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರು ಯಾವುದೇ ಒಂದು ಜಾತಿ ಅಥವಾ ವರ್ಗಕ್ಕೆ ಸೇರದ ಜಾತ್ಯತೀತ ಮಹಾನ್ ನಾಯಕ ಎಂದು ಸ್ಮರಿಸಿದರು.

ಕೆಎಸ್ಆರ್‌ಟಿಸಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಟಿ.ಬಸವರಾಜು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ವಿ.ಸಂತೋಷ್‍ಕುಮಾರ್, ಸಹಾಯಕ ಕಾರ್ಯಾಧೀಕ್ಷಕ ಕೃಷ್ಣೇಗೌಡ, ವಿಭಾಗೀಯ ಮೆಕ್ಯಾನಿಕಲ್ ಇಂಜಿನಿಯರ್ ವೆಂಕಟೇಶ್‍ಮೂರ್ತಿ, ವಿಭಾಗೀಯ ಸಂಚಲನಾಧಿಕಾರಿ ಮರೀಗೌಡ, ಸಹಾಯಕ ಆಡಳಿತಾಧಿಕಾರಿ ವಿ.ಕೆ.ಶಾಂತಲಕ್ಷ್ಮಿ, ಅಂಕಿ-ಅಂಶ ಅಧಿಕಾರಿ ಗೀತಾಂಜಲಿ, ಕಾರ್ಮಿಕ ಕಲ್ಯಾಣಾಧಿಕಾರಿ ಕೆ.ಕೆ.ಸೋಮಶೇಖರ್, ಸಹಾಯಕ ಸಂಚಾರ ವ್ಯವಸ್ಥಾಪಕ ದಿನೇಶ್‍ಕುಮಾರ್ ಸೇರಿದಂತೆ ಚಾಲಕರು, ನಿರ್ವಾಹಕರು ಇನ್ನಿತರೆ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.