ಕೇರಳ ಪ್ರವಾಹ: ಸಾವಿನ ಸಂಖ್ಯೆ 324ಕ್ಕೆ ಏರಿಕೆ, ಇಂದು ಪ್ರಧಾನಿ ಮೋದಿ ಭೇಟಿ
ಮೈಸೂರು

ಕೇರಳ ಪ್ರವಾಹ: ಸಾವಿನ ಸಂಖ್ಯೆ 324ಕ್ಕೆ ಏರಿಕೆ, ಇಂದು ಪ್ರಧಾನಿ ಮೋದಿ ಭೇಟಿ

August 18, 2018

ತಿರುವನಂತಪುರಂ: ಕೇರಳದಲ್ಲಿ ಸುರಿಯುತ್ತಿರುವ ಮಹಾಮಳೆ ಕ್ಷಣ ಕ್ಷಣಕ್ಕೂ ತನ್ನ ರೌದ್ರಾವತಾರವನ್ನು ಹೆಚ್ಚಿಸುತ್ತಿದ್ದು, ಕೇವಲ 24 ಗಂಟೆ ಗಳ ಅವಧಿಯಲ್ಲಿ ಮಳೆಯಿಂದಾಗಿ ಬರೊಬ್ಬರಿ 106 ಮಂದಿ ಸಾವಿಗೀಡಾ ಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 324ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರವಾಹದಿಂದ 324 ಮಂದಿ ಜೀವ ಕಳೆದುಕೊಂಡಿದ್ದು, ಸುಮಾರು 2 ಲಕ್ಷ ಮಂದಿ ಪ್ರವಾಹಸಂತ್ರಸ್ಥರ ಕ್ಯಾಂಪ್‍ಗಳಲ್ಲಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ. ಕೇರಳ ಕಳೆದ 100 ವರ್ಷಗಳಲ್ಲೇ ಅತ್ಯಂತ ಭೀಕರ ಪ್ರವಾಹ ಎದುರಿಸುತ್ತಿದ್ದು, 80 ಡ್ಯಾಮ್‍ಗಳ ಗೇಟ್ ಅನ್ನು ತೆರೆಯಲಾಗಿದೆ ಎಂದು ಸಿಎಂ ವಿಜಯನ್ ತಿಳಿಸಿದ್ದಾರೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಇದುವರೆಗೆ 4 ಸಾವಿರ ಜನರನ್ನು ರಕ್ಷಿಸಲಾಗಿದ್ದು, ಸಂತ್ರಸ್ತರ ರಕ್ಷಣೆಗೆ ಭಾರತೀಯ ಸೇನೆಯ ಕಾಲ್ದಳ, ವಾಯುದಳ ಮತ್ತು ನೌಕಾದಳಗಳ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದರೂ, ಸಾವಿನ ಸಂಖ್ಯೆ ಮಾತ್ರ ದಿನೇ ದಿನೆ ಏರಿಕೆಯಾಗುತ್ತಲೇ ಇದೆ.

ಹೀಗಾಗಿ ಕೇರಳಕ್ಕೆ ಹೆಚ್ಚುವರಿಯಾಗಿ 50 ಎನ್ ಡಿಆರ್ ಎಫ್ ತಂಡಗಳನ್ನು ರವಾನೆ ಮಾಡಲಾಗಿದ್ದು, ಇದರ ಜೊತೆಗೆ 420 ಸಿಬ್ಬಂದಿಗಳು, 23 ಹೆಲಿಕಾಪ್ಟರ್ ಗಳನ್ನು ಮತ್ತು 200 ಯಾಂತ್ರಿಕ ಬೋಟ್ ಗಳನ್ನು ಕೇರಳಕ್ಕೆ ರವಾನೆ ಮಾಡಲು ನಿರ್ಧರಿಸಲಾಗಿದೆ. ಅಂತೆಯೇ ಕೊಚ್ಚಿ ವಿಮಾನ ನಿಲ್ದಾಣ ಆಗಸ್ಟ್ 26ರವರೆಗೂ ಸ್ಥಗಿತಗೊಳಿಸಲು ನಿರ್ಧರಿಸ ಲಾಗಿದೆ. ಇನ್ನು ಪ್ರವಾಹ ಪೀಡಿತ ಕೇರಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಖುದ್ದು ಮೋದಿ ಕೇರಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಲಿದ್ದಾರೆ.

Translate »