ಡಿ.ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರರು
ಚಾಮರಾಜನಗರ

ಡಿ.ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರರು

August 21, 2021

ಚಾಮರಾಜನಗರ, ಆ.20-ಸರ್ವ ರಿಗೂ ಸಮಪಾಲು, ಸರ್ವರಿಗೂ ಸಮ ಬಾಳು ಪರಿಕಲ್ಪನೆಯಡಿ ಅನೇಕ ಜನಪರ ಯೋಜನೆ ರೂಪಿಸಿ ಸಮರ್ಪಕವಾಗಿ ಜಾರಿಗೊಳಿಸಿದ ಡಿ.ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರರು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಬಣ್ಣಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದೊಂ ದಿಗೆ ಸರಳವಾಗಿ ಆಯೋಜಿಸಿದ್ದ ಡಿ.ದೇವ ರಾಜ ಅರಸು 106ನೇ ಜಯಂತಿ ಕಾರ್ಯ ಕ್ರಮ ಉದ್ಘಾಟಿಸಿ ಹಾಗೂ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ದೇಶದಲ್ಲಿ ತುರ್ತು ಪರಿಸ್ಥಿತಿ ಎದುರಾದ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ 20 ಅಂಶಗಳ ಕಾರ್ಯ ಕ್ರಮ ರೂಪಿಸಿ ಕರ್ನಾಟಕ ರಾಜ್ಯವನ್ನು ಮುಂಚೂಣಿಗೆ ತಂದ ಕೀರ್ತಿ ದೇವರಾಜ ಅರಸು ಅವರದ್ದು. ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವಣ್ಣನವರ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡಿದ್ದ ಅರಸು ಹಿಂದು ಳಿದ ವರ್ಗಗಳ ಕಲ್ಯಾಣಕ್ಕೆ ಭದ್ರಬುನಾದಿ ಹಾಕಿದರು ಎಂದರು.

ಪ್ರಾಮಾಣಿಕತೆ ಹಾಗೂ ದಕ್ಷತೆಯೊಂ ದಿಗೆ ಮಾನವೀಯ ಮೌಲ್ಯಗಳಿಗೆ ಪ್ರಾಮುಖ್ಯತೆ ನೀಡಿದ ದೇವರಾಜ ಅರಸು ಅವರು ಹಿಂದುಳಿದ ವರ್ಗದ ಜನರಿಗೆ ಸಾಮಾಜಿಕ, ಅರ್ಥಿಕ ಹಾಗೂ ರಾಜ ಕೀಯ ಪ್ರೇರಕ ಶಕ್ತಿಯಾಗಿದ್ದರು. ಅರಸು ಅವರ ಸಾಮಾಜಿಕ ನ್ಯಾಯದ ಚಿಂತನೆ ಗಳು ಇಂದಿಗೂ ಆದರ್ಶಪ್ರಾಯ ಪುಟ್ಟ ರಂಗಶೆಟ್ಟಿ ತಿಳಿಸಿದರು.

ಕಾರ್ಯಕ್ರಮದಲ್ಲಿ ದೇವರಾಜ ಅರಸು ಅವರ ಜೀವನ ಸಾಧನೆಗಳ ಕುರಿತು ಗುಂಡ್ಲು ಪೇಟೆಯ ಶಿಕ್ಷಕ ಗೋವಿಂದರಾಜು ವಿಚಾರ ಮಂಡಿಸಿದರು. ಇದೇ ಸಂದರ್ಭ ದಲ್ಲಿ ವಿವಿಧ ಇಲಾಖೆಗಳ ವಸತಿ ಶಾಲೆ ಗಳಲ್ಲಿ ವ್ಯಾಸಂಗ ಮಾಡಿ ಎಸ್‍ಎಸ್ ಎಲ್‍ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಯಲ್ಲಿ ಉತ್ತೀರ್ಣರಾದ 6 ವಿದ್ಯಾರ್ಥಿ ಗಳಿಗೆ ಪ್ರಮಾಣಪತ್ರ ಹಾಗೂ ಪುಸ್ತಕಗಳನ್ನು ನೀಡಿ ಸಾಂಕೇತಿಕವಾಗಿ ಗೌರವಿಸಲಾಯಿತು.

ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ. ರಾಮಚಂದ್ರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಪಂ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಹರ್ಷಲ್‍ಬೋಯರ್ ನಾರಾಯಣ ರಾವ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಸ್.ಸುಂದರರಾಜು, ನಗರಸಭೆ ಪೌರಾಯುಕ್ತ ಕರಿಬಸವಯ್ಯ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇವಣ್ಣ, ಕನ್ನಡ ಮತ್ತು ಸಂಸ್ಕøತಿ ಇಲಾ ಖೆಯ ಸಹಾಯಕ ನಿರ್ದೇಶಕ ಹೆಚ್.ಕೆ. ಗಿರೀಶ್, ಸಂಘಟನೆಗಳ ಮುಖಂಡರಾದ ಪುರುಷೋತ್ತಮ್, ಜಯಕುಮಾರ್, ಬ್ಯಾಡಮೂಡ್ಲು ಬಸವಣ್ಣ, ಇತರೆ ಅಧಿಕಾರಿಗಳು ಕಾರ್ಯಕ್ರಮದಲ್ಲಿದ್ದರು.

Translate »