ಹಾಸನ: ಕಿತ್ತೂರು ರಾಣಿ ಚೆನ್ನಮ್ಮ ಸ್ತ್ರೀ ಶಕ್ತಿ ಮತ್ತು ಸ್ವಾಭಿಮಾನದ ಸಂಕೇತ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್ ಅಭಿಪ್ರಾಯಪಟ್ಟರು.
ನಗರದ ಡಿಸಿ ಕಚೇರಿ ಸಭಾಂಗಣ ದಲ್ಲಿಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಣಿ ಚೆನ್ನಮ್ಮ ತಮ್ಮ ಸಾಮ್ರಾಜ್ಯದ ಐಕ್ಯತೆಯನ್ನು ಕಾಯ್ದುಕೊಂಡು ಬ್ರಿಟಿಷರ ವಿರುದ್ಧ ಹೋರಾಡುವ ಮೂಲಕ ಸ್ವಾತಂತ್ರ್ಯ ಚಳವಳಿಗೆ ತನ್ನದೇ ಆದ ಕೊಡುಗೆಯನ್ನು ನೀಡಿದ್ದಾರೆ. ಅಲ್ಲದೆ ಸಂಗೊಳ್ಳಿ ರಾಯಣ್ಣ ಅವರು ಕೂಡ ಈ ಸಂದರ್ಭದಲ್ಲಿ ಸ್ಮರಣೀಯರು ಎಂದು ಹೇಳಿದರು.
ಇತಿಹಾಸ ಅರಿಯದೆ ಭವಿಷ್ಯವನ್ನು ನಿರ್ಧರಿಸಲು ಸಾಧ್ಯವಿಲ್ಲ. ಹಾಗಾಗಿ ಪ್ರತಿ ಯೊಬ್ಬರೂ ನಮ್ಮ ದೇಶ, ರಾಜ್ಯದ ಸಂಸ್ಕೃತಿ, ಪರಂಪರೆ, ಸ್ವಾತಂತ್ರ್ಯ ಚಳವಳಿ, ತ್ಯಾಗ ಬಲಿದಾನಗಳ ಬಗ್ಗೆ ಅರಿವು ಹೊಂದಿರ ಬೇಕು ಎಂದು ತಿಳಿಸಿದರಲ್ಲದೆ, ಇಂದಿನ ಸಂದರ್ಭದಲ್ಲಿ ಶಿಕ್ಷಣ ಅತೀ ಮುಖ್ಯ ವಾಗಿದ್ದು, ಹೆಣ್ಣು ಮಕ್ಕಳಿಗೂ ಸಮಾನ ಅವಕಾಶಗಳು ದೊರೆಯಬೇಕು. ಸ್ತ್ರೀ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ಸಿಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ತಾಪಂ ಅಧ್ಯಕ್ಷ ಬಿ.ಟಿ.ಸತೀಶ್ ಮಾತ ನಾಡಿ, ಕರ್ನಾಟಕ ಸ್ವಾತಂತ್ರ್ಯ ಸಂಗ್ರಾಮ ದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರು ಅಜರಾಮರವಾಗಿದೆ. ಅವರ ದೇಶಪ್ರೇಮ ಮತ್ತು ಧೈರ್ಯ ನಮಗೆಲ್ಲ ಅನುಕರಣೀಯ ಎಂದರು.
ಸಾಹಿತಿ ಗೊರೂರು ಶಿವೇಶ್ ಅವರು ರಾಣಿ ಚೆನ್ನಮ್ಮ ಅವರು ಮಹಿಳಾ ಸಬಲೀ ಕರಣ ಕುರಿತು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರ್ಯಕ್ರಮ ಉದ್ಘಾಟಿಸಿ ದರು, ಜಿಪಂ ಸಿಇಓ ಪುಟ್ಟಸ್ವಾಮಿ, ಪೆÇ್ರಬೆ ಷನರಿ ಐಎಎಸ್ ಅಧಿಕಾರಿ ಪಿಯಾಂಕ, ಸ್ವಾತಂತ್ರ ಹೋರಾಟಗಾರ ಹೆಚ್.ಎಂ. ಶಿವಣ್ಣ ಸರ್ಕಾರಿ ನೌಕರರ ಸಂಘದ ಜಿಲ್ಲಾ ಧ್ಯಕ್ಷ ಶ್ರೀನಿವಾಸ್, ತಹಶೀಲ್ದಾರ್ ಶಿವ ಶಂಕರಪ್ಪ, ವೀರಶೈವ ಸಮಾಜದ ಮುಖ್ಯಸ್ಥ ಐಸಾಮಿಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ವಿನೋದ್ ಚಂದ್ರ, ವಿವಿಧ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.