ಹಾಸನ: ಸೊಳ್ಳೆಗಳಿಂದ ಹರಡುವ ಮಲೇರಿಯಾ ಮತ್ತು ಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಪಂ ಸಿಇಓ ಜಿ.ಜಗದೀಶ್ ಆರೋಗ್ಯ ಇಲಾಖಾಧಿಕಾರಿ ಗಳಿಗೆ ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ವಿರೋಧ ಮಾಸಾಚರಣೆಗಳ ಹಿನ್ನೆಲೆಯಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ರೋಗ ಗಳು ಸೊಳ್ಳೆಗಳಿಂದ ಹರಡುವುದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ವಹಿಸಲು ಜನರಿಗೆ ತಿಳುವಳಿಕೆ ನೀಡಬೇಕು. ಜಿಲ್ಲೆಯಲ್ಲಿ 2023ರ ವೇಳೆಗೆ ಮಲೇರಿಯಾ ನಿರ್ಮೂ ಲನೆ ಗುರಿ ಹೊಂದಿದ್ದು, ಈ ಸಂಬಂಧ ಎಲ್ಲಾ ಇಲಾಖೆಗಳು ಸಹಕರಿಸಬೇಕು ಎಂದು ಸೂಚಿಸಿದರು.
ಸಾರ್ವಜನಿಕರು ಮನೆ ಸುತ್ತಮುತ್ತ ಸ್ವಚ್ಛ ವಾಗಿಡುವುದರ ಜೊತೆಗೆ ನೀರು ನಿಲ್ಲದಂತೆ ನಿಗಾ ವಹಿಸಲು ಹಾಗೂ ಮನೆಗಳಲ್ಲಿ ನೀರು ಶೇಖರಣೆ ಮಾಡುವ ಬ್ಯಾರಲ್ ಮತ್ತು ತೊಟ್ಟಿ ಗಳನ್ನು ಸ್ವಚ್ಛವಾಗಿಡಲು ಮುತುವರ್ಜಿ ವಹಿಸಲು ಅರಿವು ಮೂಡಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮೀಣ ಪ್ರದೇಶದಲ್ಲಿಯೂ ಸಹ ಸ್ವಚ್ಛತೆಗೆ ಆದ್ಯತೆ ನೀಡಿ, ಸೊಳ್ಳೆಗಳ ನಿಯಂತ್ರಣಕ್ಕೆ ಗ್ರಾಪಂ ಮಟ್ಟದಲ್ಲಿಯೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು. ಹೊಸದಾಗಿ ನೀರು ಸಂಗ್ರಹ ವಾದ ಕೆರೆಗಳಿಗೆ ಮೀನುಗಾರಿಕೆ ಇಲಾಖೆ ಹಾಗೂ ನೀರಾವರಿ ಇಲಾಖೆಗಳು ಅಲ್ಲಿನ ಸ್ಥಳೀಯ ಗ್ರಾಪಂ ಸಹಕಾರದೊಂದಿಗೆ ಲಾರ್ವಹಾರಿ ಮೀನು ಬಿಡಲು ಕ್ರಮ ವಹಿಸಲು ಸೂಚಿಸಿದರಲ್ಲದೆ, ಪ್ಲಾಸ್ಟಿಕ್ ಬಳಕೆ ನಿಯಂತ್ರಣಕ್ಕೆ ನಿಗಾ ವಹಿಸುವಂತೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 106 ಖಚಿತ ಡೆಂಗ್ಯೂ ಜ್ವರ ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ ಹಾಸನ ತಾಲೂಕಿನಲ್ಲಿ 63 ಪ್ರಕರಣ ವರದಿಯಾಗಿವೆ. ಅದರಲ್ಲಿ 44 ಪ್ರಕರಣ ಗಳು ನಗರಕ್ಕೆ ಒಳಪಟ್ಟಿವೆ. ಈ ಹಿನ್ನೆಲೆ ಯಲ್ಲಿ ಕೂಡಲೇ ನಗರಸಭೆ ಸಹಯೋಗ ದೊಂದಿಗೆ ಈಡೀಸ್ ಸೊಳ್ಳೆಗಳ ಉತ್ಪತ್ತಿ ತಾಣ ನಾಶಪಡಿಸಲು ಕೂಡಲೇ ಕ್ರಮ ಕೈಗೊ ಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಂಕರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಹಿರಣ್ಣಯ್ಯ, ಹಾಸನ ತಾಲೂಕು ಆರೋಗ್ಯ ಅಧಿಕಾರಿ ಡಾ.ಸಂತೋಷ್, ಕೀಟಶಾಸ್ತ್ರಜ್ಞ ರಾಜೇಶ್ ಕುಲಕರ್ಣಿ, ಜಿಲ್ಲಾ ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಜಿಲ್ಲಾ ಆಯುಷ್ ಅಧಿಕಾರಿ ಗಳು, ನಗರ ಸಭೆಯ ಅಧಿಕಾರಿಗಳು, ಜಿಲ್ಲಾ ಕೈಗಾರಿಕಾ ಇಲಾಖೆಯ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.