- ಮಳೆ ಹಾನಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ
- ಭತ್ತದ ಖರೀದಿ ಕೇಂದ್ರ ತೆರೆಯಲು ಒತ್ತಾಯ =ಜಿಲ್ಲೆಯ 17 ಕಡೆ ಮರಳು ತೆಗೆಯಲು ಅನುಮತಿ
- ಕುಶಾಲನಗರದ ಕಲಾಭವನ ಶೀಘ್ರ ಉದ್ಘಾಟನೆಗೆ ಆಗ್ರಹ
- ಗ್ರಾಪಂ ವ್ಯಾಪ್ತಿಯಲ್ಲಿ ಕನ್ನಡ ನಾಮಫಲಕ ಅಳವಡಿಸಲು ಒತ್ತಾಯ
ಮಡಿಕೇರಿ, ಡಿ.10- ನಗರದ ಜಿಲ್ಲಾ ಪಂಚಾಯಿತಿ ನೂತನ ಭವನದಲ್ಲಿ ಮಂಗಳವಾರ ಜಿಪಂ ಅಧ್ಯಕ್ಷ ಬಿ.ಎ.ಹರೀಶ್ ಅವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಯ ಕುರಿತು ಹಲವು ವಿಚಾರಗಳನ್ನು ಚರ್ಚಿಸಲಾಯಿತು.
ರಸ್ತೆ ಅಭಿವೃದ್ಧಿಗೆ ಸೂಚನೆ: ಈಗಾಗಲೇ ಮಳೆ ಗಾಲ ಮುಗಿದಿರುವುದರಿಂದ ಜಿಲ್ಲೆಯ ಲೋಕೋಪ ಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಗಳ ಗುಂಡಿಯನ್ನು ಮುಚ್ಚಬೇಕು. ಆ ನಿಟ್ಟಿನಲ್ಲಿ ತುರ್ತು ಕ್ರಮವಹಿಸಬೇಕು ಎಂದು ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಜಿಪಂ ಅಧ್ಯಕ್ಷ ಬಿ.ಎ.ಹರೀಶ್ ನಿರ್ದೇಶನ ನೀಡಿದರು. ಮಳೆಹಾನಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸ ಬೇಕು. ಬೆಳೆ ಹಾನಿ ಪರಿಹಾರ ರೈತರ ಖಾತೆಗೆ ಜಮೆಯಾಗಬೇಕು ಎಂದು ನಿರ್ದೇಶನ ನೀಡಿದರು.
ಮರಳು ತೆಗೆಯಲು ಅವಕಾಶ: ಅಂಬೇಡ್ಕರ್, ಬಸವ, ಇಂದಿರಾ ಆವಾಸ್ ಯೋಜನೆಯಡಿ ಮನೆ ಗಳನ್ನು ನಿರ್ಮಿಸಬೇಕಿದೆ. ಆ ನಿಟ್ಟಿನಲ್ಲಿ ಮರಳು ತೆಗೆಯಲು ಅವಕಾಶ ನೀಡಬೇಕು. ಮರಳು ದೊರೆ ಯುವಂತೆ ನೋಡಿಕೊಳ್ಳುಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗೆ ತಿಳಿಸಿದರು.
ಬಡವರು ಮನೆ ನಿರ್ಮಿಸಿಕೊಳ್ಳಲು ಹತ್ತಿರದ ಹೊಳೆ ಬದಿ ಮರಳು ತೆಗೆದರೆ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಸರಿಯೇ, ಬಡವರು ಮನೆ ನಿರ್ಮಿಸಿಕೊಳ್ಳುವುದಾದರೂ ಹೇಗೆ? ಎಂದು ಬಿ.ಎ.ಹರೀಶ್ ಅವರು ಪ್ರಶ್ನಿಸಿದರು.
ಜಿಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ಬಡವರು ಹೊಳೆ ಬದಿ ಮರಳು ಸಂಗ್ರಹಣೆ ಮಾಡಿಕೊಂಡಿದ್ದರೆ, ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಇಂತಹ ಪ್ರಕರಣ ಗಳನ್ನು ವಾಪಸ್ ಪಡೆಯಬೇಕು ಎಂದು ಅಧಿಕಾರಿಗೆ ಸೂಚಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾ ಖೆಯ ಹಿರಿಯ ಅಧಿಕಾರಿ ರೇಷ್ಮ ಮಾತನಾಡಿ, ಜಿಲ್ಲೆಯ 17 ಕಡೆಗಳಲ್ಲಿ ಮರಳು ತೆಗೆಯಲು ಅನುಮತಿ ದೊರೆತಿದ್ದು, ಮರಳು ಪಡೆಯಲು ಅವಕಾಶ ಮಾಡಲಾಗುವುದು ಎಂದು ತಿಳಿಸಿದರು.
ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ.ಬೋಪಣ್ಣ ಮಾತನಾಡಿ, ಭತ್ತ ಕಟಾವು ಕಾರ್ಯ ನಡೆಯುತ್ತಿದ್ದು, ಕೂಡಲೇ ಭತ್ತ ಖರೀದಿ ಕೇಂದ್ರ ತೆರೆಯಬೇಕು ಎಂದು ಒತ್ತಾಯಿಸಿದರು.
ಬಡ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಕಲ್ಪಿಸಿ: ಗೋಣಿ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರು ಸಾರ್ವ ಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸ ಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಔಷಧಿ ತರಲು ಹೊರಗಡೆ ಚೀಟಿ ಬರೆಯುವುದು ಸರಿಯಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಔಷಧಿಗಳು ದೊರೆಯಬೇಕು. ಔಷಧಿಗಳನ್ನು ತರಿಸಿಕೊಳ್ಳಬೇಕು ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ.ಬೋಪಣ್ಣ ನಿರ್ದೇಶನ ನೀಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ಕುಶಾಲನಗರದ ಕಲಾಭವನ ಕಾಮಗಾರಿ ಆರಂಭಿಸಿ ಏಳು ವರ್ಷವಾಗಿದೆ. ಆದರೂ ಇನ್ನೂ ಸಹ ಉದ್ಘಾಟನೆಯಾಗಿಲ್ಲ. ಸದ್ಯ ಉದ್ಘಾ ಟನೆ ಮಾಡಿದ್ದಲ್ಲಿ ಸಾರ್ವಜನಿಕರಿಗೆ ಉಪಯೋಗ ವಾಗಲಿದೆ ಎಂದು ಒತ್ತಾಯಿಸಿದರು.
ವಿವಿಧ ಇಲಾಖೆಗಳ ಕಾರ್ಯಕ್ರಮಗಳಿಗೆ ಸಂಬಂ ಧಿಸಿದಂತೆ ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳು ಗ್ರಾಮ ಮಟ್ಟದಲ್ಲಿ ಹಮ್ಮಿಕೊ ಳ್ಳಬೇಕು. ರೇಡಿಯೋದಲ್ಲಿ ಸಂವಾದ ಕಾರ್ಯಕ್ರಮ ಆಯೋಜಿಸಬೇಕು ಎಂದು ಅವರು ಸಲಹೆ ಮಾಡಿದರು.
ಜಿಲ್ಲೆಯ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಕನ್ನಡ ನಾಮಫಲಕ ಅಳವಡಿಸುವ ನಿಟ್ಟಿನಲ್ಲಿ ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕು ಗ್ರಾಪಂ ಮಟ್ಟದಲ್ಲಿ ಸುಧಾರಣೆಯಾಗುತ್ತಿದೆ. ಅದೇ ರೀತಿ ವಿರಾಜ ಪೇಟೆ ತಾಲೂಕಿನಲ್ಲಿಯೂ ಸಹ ಕನ್ನಡ ನಾಮ ಫಲಕ ಕಡ್ಡಾಯವಾಗಿ ಅಳವಡಿಸುವಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಲೋಕೋಪಯೋಗಿ ಇಇ ಇಬ್ರಾಹಿಂ ಮಾತನಾಡಿ, ಕುಶಾಲನಗರದ ಕಲಾಭವನ ಕಾಮಗಾರಿ ಪೂರ್ಣ ಗೊಂಡಿದ್ದು, ಒಳ ವಿನ್ಯಾಸ ಮಾತ್ರ ಬಾಕಿ ಇದೆ. 15 ದಿನದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಕ್ರೀಡಾ ಚಟುವಟಿಕೆಗೆ ಆದ್ಯತೆ ನೀಡಿ: ಯುವ ಸಬ ಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಯವರು ಮತ್ತು ಸಿಬ್ಬಂದಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಕ್ರೀಡಾ ವಿದ್ಯಾರ್ಥಿ ನಿಲ ಯಗಳಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆ ಕೈಗೊಳ್ಳಲು ಹೆಚ್ಚಿನ ಉತ್ತೇಜನ ನೀಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಜಿಪಂ ಅಧ್ಯಕ್ಷರು ಸೂಚಿಸಿದರು.
ಜಿಪಂ ಆರೋಗ್ಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷÀ ಕಿರಣ್ ಕಾರ್ಯಪ್ಪ ಮಾತನಾಡಿ, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಕಾಲಮಿತಿಯೊಳಗೆ ಅನುಷ್ಠಾನ ಗೊಳಿಸಲು ಕಡತಗಳನ್ನು ಶೀಘ್ರ ವಿಲೇವಾರಿ ಮಾಡ ಬೇಕು ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯ ಕರ್ತರಿಗೆ ಗೌರವಧನ ಸಕಾಲದಲ್ಲಿ ಪಾವತಿಸಲಾಗು ತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ತಿಳಿಸಿದರು. ಸೋಮವಾರ ಪೇಟೆ ತಾಲೂಕಿನ ಪುಷ್ಪಗಿರಿ ಬೆಟ್ಟದಲ್ಲಿ ಕುಡಿಗಾಣ ಅಂಗನವಾಡಿ ಕೇಂದ್ರದ ಕಾಮಗಾರಿ ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಜಿಪಂ ಉಪಾ ಧ್ಯಕ್ಷರು ಅತೃಪ್ತಿ ವ್ಯಕ್ತಪಡಿಸಿದರು.
ವಿಕಲಚೇತನರಿಗೆ ದ್ವಿಚಕ್ರವಾಹನ ವಿತರಣೆ, ಮಾತೃ ಪೂರ್ಣ ಯೋಜನೆ, ಮಾತೃ ವಂದನಾ ಕಾರ್ಯ ಕ್ರಮ ಅನುಷ್ಠಾನ, ಪ್ರಕೃತಿ ವಿಕೋಪದಿಂದ ನಷ್ಟವಾದ ಬೆಳೆಗೆ ಪರಿಹಾರ ವಿತರಣೆ, ಕೃಷಿ ಭಾಗ್ಯ, ಕೃಷಿ ತರಬೇತಿ ಕಾರ್ಯಕ್ರಮ, ಟಾರ್ಪಾಲ್ ವಿತರಣೆ, ಕೃಷಿ ಹೊಂಡ ನಿರ್ಮಾಣ, ಡೀಸೆಲ್ ಪಂಪ್‍ಸೆಟ್ ಒದಗಿಸುವುದು, ತೋಟಗಾರಿಕಾ ಇಲಾಖೆಯಿಂದ ಹನಿ ನೀರಾವರಿ ಕಾರ್ಯಕ್ರಮಕ್ಕೆ ಉತ್ತೇಜನ ನೀಡು ವುದು, ಜೇನು ಸಾಕಾಣಿಕೆ, ಕೃಷಿ ಯಾಂತ್ರೀಕರಣ, ಮತ್ತಿತರ ವಿಷಯಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲೆಯ ಹಲವು ಕಡೆಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ತೆರೆದು ಹಾಲು ಸಂಗ್ರಹಣೆಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಕೃಷಿಕರಿಗೆ ಮಾಹಿತಿ ನೀಡಿ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ರಚಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಿ.ಕೆ.ಬೋಪಣ್ಣ ಅವರು ತಿಳಿಸಿದರು. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರೋಜಮ್ಮ ಅವರು ಹಲವು ವಿಚಾರಗಳ ಕುರಿತು ಪ್ರಸ್ತಾಪಿ ಸಿದರು. ಜಿಪಂ ನೂತನ ಭವನಕ್ಕೆ ಕೆಎಸ್‍ಆರ್‍ಟಿಸಿ ಯಿಂದ ಬಸ್ ಸೌಲಭ್ಯವನ್ನು ಬೆಳಿಗ್ಗೆ 9 ಮತ್ತು 9.30 ಗಂಟೆಗೆ ಕಲ್ಪಿಸಬೇಕು. ಹಾಗೂ ಸಂಜೆ 6 ಗಂಟೆಯ ನಂತರ ಜಿಪಂ ನೂತನ ಭವನದಿಂದ ಬಸ್ ಹೊರಡುವಂತಾಗಬೇಕು ಎಂದು ಸಿಇಒ ಕೆ.ಲಕ್ಷ್ಮೀಪ್ರಿಯ ತಿಳಿಸಿದರು.
ಕಾಡಾನೆ ಹಾವಳಿ ನಿಯಂತ್ರಣಕ್ಕೆ ಸೂಚನೆ
ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವಿಪರೀತವಾಗಿದ್ದು, ಕಾಡಾನೆ ಹಾವಳಿಯಿಂದಾಗಿ ಪ್ರಾಣ ಹಾನಿ, ಬೆಳೆ ನಾಶ ಉಂಟಾಗುತ್ತಿದ್ದು, ಜನರು ಭಯ ಭೀತಿಯಿಂದ ಬದುಕು ಸಾಗಿಸು ವಂತಾಗಿದೆ. ಆದ್ದರಿಂದ ಕೂಡಲೇ ಕಾಡಾನೆಗಳನ್ನು ಸ್ಥಳಾಂತರಿಸಬೇಕು ಎಂದು ಜಿಪಂ ಅಧ್ಯಕ್ಷ ಬಿ.ಎ.ಹರೀಶ್ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂಬಂಧ ಮಾಹಿತಿ ನೀಡಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ, ಈಗಾಗಲೇ 5 ಕಾಡಾನೆಗಳನ್ನು ಸ್ಥಳಾಂತರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ವಿದ್ಯಾರ್ಥಿಗಳಿಗೆ ಸಿಇಟಿ ಮಾದರಿ ತರಬೇತಿ ನೀಡಿ
ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಸಿಇಟಿ ಮಾದರಿಯಲ್ಲಿ ತರಬೇತಿ ನೀಡಿ ಫಲಿತಾಂಶ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಗುಡೂರು ಭೀಮ ಸೇನ ಸಲಹೆ ನೀಡಿದರು. ಸಭೆಯಲ್ಲಿ ಮಾತನಾಡಿದ ಅವರು, ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಸಂಬಂಧ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ಅವರನ್ನು ಪರೀಕ್ಷೆಗೆ ತಯಾರಿ ಮಾಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ.ಬೋಪಣ್ಣ ಮಾತನಾಡಿ, ವಿದ್ಯಾರ್ಥಿಗಳ ಕ್ರೀಯಾಶೀಲತೆ ಮತ್ತು ಚಲನಶೀಲತೆಗೆ ಒತ್ತು ನೀಡುವ ನಿಟ್ಟಿನಲ್ಲಿ ಬೆಳಗ್ಗಿನ ವೇಳೆಯಲ್ಲಿ ಯೋಗಕ್ಕೆ ಆದ್ಯತೆ ನೀಡಬೇಕು. ಹಾಗೆಯೇ ಸ್ಥಳೀಯ ಗ್ರಾಪಂ, ತಾಪಂ, ಜಿಪಂ ಸದಸ್ಯರನ್ನು ಆಹ್ವಾನಿಸಿ ಪೋಷಕರ ಸಭೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಜಿಪಂ ಅಧ್ಯಕ್ಷ ಬಿ.ಎ.ಹರೀಶ್ ಮಾತನಾಡಿ, ಎಸ್‍ಎಸ್ ಎಲ್‍ಸಿ ಫಲಿತಾಂಶ ಶೇಕಡವಾರು ಹೆಚ್ಚಳಕ್ಕೆ ಅಗತ್ಯ ತಯಾರಿ ಮಾಡಬೇಕು. ರಾಜ್ಯದ ರ್ಯಾಂಕ್‍ನಲ್ಲಿ 10 ರೊಳಗೆ ಕೊಡಗು ಜಿಲ್ಲೆ ಇರುವಂತೆ ಶ್ರಮಿಸಬೇಕು ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಖಾಸಗಿ ಶಾಲೆಗಳು ಹೆಚ್ಚಾಗುತ್ತಿವೆ. ಖಾಸಗಿ ಶಾಲೆಗಳು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕುಶಾಲನಗರದಲ್ಲಿಯೇ 20 ಖಾಸಗಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರಿ ಶಾಲೆಗಳನ್ನು ಉಳಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕಿದೆ ಎಂದರು.