ಮಡಿಕೇರಿ: ಕೊಡಗು ಪ್ರವಾಸಿ ಉತ್ಸವ ಹಾಗೂ 3 ದಿನಗಳ ಕಾಲ ಹಮ್ಮಿ ಕೊಂಡಿರುವ `ಫಲಪುಷ್ಪ ಪ್ರದರ್ಶನ’ಕ್ಕೆ ರಾಜ್ಯ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಶುಕ್ರವಾರ ಇಲ್ಲಿ ಚಾಲನೆ ನೀಡಿದರು.
ನಂತರ ಪಟ್ಟಣದ ನೈಸರ್ಗಿಕ ಸೊಬಗಿನ ರಾಜಾಸೀಟ್ ನಲ್ಲಿ ಹೂವುಗಳಿಂದ ಅಲಂಕೃತವಾಗಿದ್ದ ಕಾವೇರಿ ಮಾತೆಯ ಪ್ರತಿಮೆಗೆ ಪುಷ್ಪಾ ರ್ಚನೆ ನೆರವೇರಿಸಿ, ಉದ್ಯಾನದೊಳಗೆ ವಿಹರಿಸಿದ ಸಚಿವರು ವಿವಿಧ ಕಲಾಕೃತಿ ಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಕೃತಿ ವಿಕೋಪದಿಂದ ಸಂತ್ರಸ್ತ ವಾಗಿದ್ದ ಕೊಡಗು ಜಿಲ್ಲೆ ಈಗ ಯಥಾಸ್ಥಿತಿಗೆ ಮರಳುತ್ತಿದೆ. ಗತ ವೈಭವದ ಕಡೆ ಹೊರಳು ತ್ತಿದೆ ಎಂಬ ಸಂದೇಶವನ್ನು ದೇಶ-ವಿದೇಶ ಗಳ ಪ್ರವಾಸಿಗರಿಗೆ ನೀಡಲು ಪ್ರವಾಸಿ ಉತ್ಸವ ಮತ್ತು ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.
ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಎಲ್ಲಾ ಮೂಲಭೂತ ಸೌಲಭ್ಯ ಕಲ್ಪಿಸಲು ರಾಜ್ಯ ಸರಕಾರ ಬದ್ಧ ವಾಗಿದೆ. ಮುಂದಿನ ವರ್ಷ ಕೂಡ ಫಲ ಪುಷ್ಪ ಪ್ರದರ್ಶನ ಮತ್ತು ಕೊಡಗು ಪ್ರವಾಸಿ ಉತ್ಸವ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು. ರಾಜ್ಯ ಸರಕಾರ ಸುಭದ್ರ ವಾಗಿದ್ದು ಪೂರ್ಣಾವಧಿ ಆಡಳಿತ ನಡೆಸ ಲಿದೆ. ಬಿಜೆಪಿಯವರು ಪ್ರತಿದಿನ ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ ಆಂತರಿಕ ಸಮಸ್ಯೆಗಳನ್ನು ಮೊದಲು ಪರಿಹರಿಸಿಕೊಳ್ಳಲಿ ಎಂದು ಸಾರಾ ಹೇಳಿದರು. ಲೋಕಸಭಾ ಸ್ಥಾನ ಹಂಚಿಕೆಯ ಕುರಿತು ಜೆಡಿಎಸ್ ಮತ್ತು ಕಾಂಗ್ರೆಸ್‍ನ ರಾಜ್ಯ ಹಾಗೂ ರಾಷ್ಟ್ರೀಯ ವರಿಷ್ಟರು ನಿರ್ಧಾರ ಮಾಡುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಪ್ರಭಾರ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ, ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜು, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಸೇರಿದಂತೆ ಹಲವರು ಹಾಜರಿದ್ದರು.
ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ಕೌಟುಂಬಿಕ ಸಮಸ್ಯೆಯಿಂದ 2 ದಿನಗಳ ರಜೆ ಬೇಕೆಂದು ಕೇಳಿದ್ದರು. ಅದರಂತೆ ಅವರಿಗೆ ರಜೆ ನೀಡಲಾಗಿದೆ. ಹೆಚ್ಚುವರಿ ರಜೆ ಪಡೆದರೆ ರಾಜ್ಯ ಸರಕಾರದೊಂದಿಗೆ ಚರ್ಚಿಸಿ ಬೇರೆ ಅಧಿಕಾರಿಯನ್ನು ಜಿಲ್ಲೆಗೆ ನಿಯೋಜಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಾರಾ.ಮಹೇಶ್ ತಿಳಿಸಿದ್ದಾರೆ.