ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ತಾಪಂ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ
ಚಾಮರಾಜನಗರ

ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ತಾಪಂ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

October 26, 2018

ಚಾಮರಾಜನಗರ: ಕೊಳ್ಳೇ ಗಾಲ ನಗರಸಭೆಯ ವಾರ್ಡ್ 9 ಹಾಗೂ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ತಾಪಂ ಕ್ಷೇತ್ರದ ಉಪ ಚುನಾವಣೆಗೆ ಮತದಾನ ಅಕ್ಟೋಬರ್ 28ರಂದು ನಡೆ ಯಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಸಂಬಂಧಪಟ್ಟ ವಾರ್ಡ್ ಹಾಗೂ ಕ್ಷೇತ್ರ ವ್ಯಾಪ್ತಿಯೊಳಗೆ ಸಂತೆ ಹಾಗೂ ಎಲ್ಲ ತರಹದ ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.

ಮತದಾನದಂದು ಬೆಳಿಗ್ಗೆ 5 ಗಂಟೆ ಯಿಂದ ಸಂಜೆ 6 ಗಂಟೆಯವರೆಗೆ ಈ ಎರಡೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಂತೆ ಜಾತ್ರೆ ನಿಷೇಧ ಆದೇಶ ಜಾರಿಯಲ್ಲಿರು ತ್ತದೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »