ಆಯುಷ್ಮಾನ್ ಫಲಾನುಭವಿಗಳಿಗೆ ಕೋವಿಡ್-19 ಪರೀಕ್ಷೆ, ಚಿಕಿತ್ಸೆ ಉಚಿತ
ಮೈಸೂರು

ಆಯುಷ್ಮಾನ್ ಫಲಾನುಭವಿಗಳಿಗೆ ಕೋವಿಡ್-19 ಪರೀಕ್ಷೆ, ಚಿಕಿತ್ಸೆ ಉಚಿತ

April 5, 2020

ನವದೆಹಲಿ,ಏ.4-ಆಯುಷ್ಮಾನ್ ಫಲಾನುಭವಿಗಳಿಗೆ ಕೋವಿಡ್-19 ಪರೀಕ್ಷೆ, ಚಿಕಿತ್ಸೆ ಉಚಿತವಾಗಿ ದೊರೆಯಲಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಘೋಷಿ ಸಿದೆ. ಏ.4ರಂದು ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಧಿಕಾರ, ಖಾಸಗಿ ಪ್ರಯೋಗಾಲಯ, ಪಟ್ಟಿ ಮಾಡಿರುವ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಫಲಾನುಭವಿಗಳಿಗೆ ಉಚಿತವಾಗಿ ಕೋವಿಡ್ -19 ಸೋಂಕು ಪರೀಕ್ಷೆ, ಚಿಕಿತ್ಸೆ ದೊರೆಯಲಿದೆ ಎಂದು ಹೇಳಿದೆ. ರಾಷ್ಟ್ರೀಯ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸುವ ಎನ್‍ಹೆಚ್‍ಎ, ಆಯುಷ್ಮಾನ್ ಯೋಜನೆಯಡಿ ಬರುವ 50 ಕೋಟಿ ಜನರಿಗೆ ಕೋವಿಡ್-19ಗಾಗಿ ಉಚಿತ ಪರೀಕ್ಷೆ, ಚಿಕಿತ್ಸೆ ದೊರೆಯಲಿದೆ, ಆಯುಷ್ಮಾನ್ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಖಾಸಗಿ ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಸಿಗಲಿದೆ ಎಂದು ಹೇಳಿದೆ.

Translate »