ಕೆ.ಆರ್. ಕ್ಷೇತ್ರದ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮತಯಾಚನೆ
ಮೈಸೂರು

ಕೆ.ಆರ್. ಕ್ಷೇತ್ರದ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮತಯಾಚನೆ

May 3, 2018

ಮೈಸೂರು: ಮೈಸೂರಿನ ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಬುಧವಾರ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ತಮ್ಮ ಬೆಂಬಲಿಗ ರೊಂದಿಗೆ ಬಿರುಸಿನಿಂದ ಮತ ಯಾಚಿಸಿದರು.

ಕಾಂಗ್ರೆಸ್: ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಎಂ.ಕೆ.ಸೋಮಶೇಖರ್, ತಮ್ಮ ಬೆಂಬಲಿಗರೊಂದಿಗೆ ಅಗ್ರಹಾರ ಸೇರಿ ದಂತೆ ವಿವಿಧ ಬಡಾವಣೆಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಈ ವೇಳೆ ಮಾತ ನಾಡಿದ ಅವರು, ಕಳೆದ 5 ವರ್ಷಗಳಿಂದ ಕೆ.ಆರ್.ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ನಡೆಸಲಾಗಿದೆ. ಅಲ್ಲದೆ ಸಿಎಂ ಸಿದ್ದ ರಾಮಯ್ಯ ಅವರು 5 ವರ್ಷದಲ್ಲಿ ನೀಡಿ ರುವ ಕಳಂಕರಹಿತ ಆಡಳಿತ ಹಾಗೂ ಸಾಲ ಮನ್ನಾ, ಅನ್ನಭಾಗ್ಯ ಯೋಜನೆ ಸೇರಿದಂತೆ ಹಲವಾರು ಜನಪ್ರಿಯ ಕಾರ್ಯಕ್ರಮಗಳು ಎಲ್ಲಾ ವರ್ಗದ ಹಾಗೂ ಸಮುದಾಯದ ಜನರಿಗೂ ತಲುಪಿದೆ. ಯಾವುದೇ ಭ್ರಷ್ಟಾಚಾರ ಹಾಗೂ ಹಗರಣಕ್ಕೆ ಆಸ್ಪದ ನೀಡದೆ ಪಾರ ದರ್ಶಕ ಆಡಳಿತ ನೀಡಿ, ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಆಶೀರ್ವದಿಸುವಂತೆ ಅವರು ಕೋರಿದರು.

ಜೆಡಿಎಸ್: ಜೆಡಿಎಸ್ ಅಭ್ಯರ್ಥಿ ಕೆ.ವಿ. ಮಲ್ಲೇಶ್ ತಮ್ಮ ಪಕ್ಷದ ಕಾರ್ಯಕರ್ತ ರೊಂದಿಗೆ ಕುವೆಂಪುನಗರ, ಸರಸ್ವತಿಪುರಂ ಸೇರಿದಂತೆ ವಿವಿಧೆಡೆ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು ತಮ್ಮ ಅಧಿಕಾರಾವಧಿಯಲ್ಲಿ ನೀಡಿರುವ ಕೊಡುಗೆಗಳು, ಅಭಿವೃದ್ಧಿ ಕಾರ್ಯಗಳಿಗೆ ಮನ್ನಣೆ ನೀಡಿ ಈ ಭಾರಿ ಜೆಡಿಎಸ್ ಬೆಂಬಲಿಸುವಂತೆ ಕೋರಿದರು.

 

Translate »