ಕೆ.ಆರ್. ಕ್ಷೇತ್ರದಲ್ಲಿ ರಾಮದಾಸ್, ಸೋಮಶೇಖರ್, ಮಲ್ಲೇಶ್ ಪಾದಯಾತ್ರೆ ಮೂಲಕ ಮತ ಯಾಚನೆ
ಮೈಸೂರು

ಕೆ.ಆರ್. ಕ್ಷೇತ್ರದಲ್ಲಿ ರಾಮದಾಸ್, ಸೋಮಶೇಖರ್, ಮಲ್ಲೇಶ್ ಪಾದಯಾತ್ರೆ ಮೂಲಕ ಮತ ಯಾಚನೆ

April 27, 2018

ಮೈಸೂರು:  ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಗುರುವಾರ ಮೂರೂ ಪಕ್ಷಗಳ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ವಿವಿಧ ಬಡಾ ವಣೆಗಳಲ್ಲಿ ಪಾದಯಾತ್ರೆ ನಡೆಸಿ ಬಿರುಸಿನ ಮತ ಯಾಚನೆ ಮಾಡಿದರು.

ಮೂರೂ ಪಕ್ಷಗಳ ಅಭ್ಯರ್ಥಿಗಳು ಮತ ದಾರರ ಓಲೈಕೆಗೆ ತೀವ್ರ ಕಸರತ್ತು ನಡೆಸು ತ್ತಿದ್ದು, ತಮ್ಮ ಮುಂದಿನ ಗುರಿಯನ್ನು ವಿವ ರಿಸುವುದರೊಂದಿಗೆ ಈ ಹಿಂದೆ ಕ್ಷೇತ್ರಕ್ಕೆ ಮಾಡಿರುವ ಅಭಿವೃದ್ಧಿ ಕಾರ್ಯಗಳ ಮನ ವರಿಕೆ ಮಾಡಿಕೊಡುವ ಮೂಲಕ ಈ ಬಾರಿ ತಮ್ಮನ್ನು ಬೆಂಬಲಿಸುವಂತೆ ಕೋರಿದರು.

ಬಿಜೆಪಿ: ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ಎಸ್.ಎ.ರಾಮದಾಸ್ 21ನೇ ವಾರ್ಡ್ ವ್ಯಾಪ್ತಿಯ ಬಡಾವಣೆಗಳಲ್ಲಿ ಮತ ಯಾಚಿಸಿದರು. ಕಾಮಾಕ್ಷಿ ಆಸ್ಪತ್ರೆಯ ಆವರಣದಲ್ಲಿರುವ ಗಣ ಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆ ಆರಂಭಿಸಿದರು. ಕುವೆಂಪು ನಗರ, ಸರಸ್ವತಿಪುರಂ, ತೊಣಚಿಕೊಪ್ಪಲ್, ಇ ಅಂಡ್ ಎಫ್ ಬ್ಲಾಕ್ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಈ ವೇಳೆ ರಾಮದಾಸ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫ್‍ರೆನ್ಸ್ ಮೂಲಕ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಜೊತೆ ಚುನಾವಣೆ ಯಲ್ಲಿ ಅನುಸರಿಸಬೇಕಾದ ಪ್ರಚಾರ ತಂತ್ರಗಳ ಬಗ್ಗೆ ಚರ್ಚಿಸಿದರು. ಬೂತ್‍ಮಟ್ಟದ ಕಾರ್ಯಕರ್ತರು, ಮತದಾರರ ಪಟ್ಟಿಯಲ್ಲಿ ಪ್ರತಿಯೊಂದು ಹಾಳೆಗೆ ಒಬ್ಬರನ್ನು ಪ್ರಮುಖ ರನ್ನಾಗಿ ನೇಮಕ ಮಾಡಿ, ಆ ಹಾಳೆಯಲ್ಲಿ ಇರುವ ಮತದಾರ ಜೊತೆ ನಿರಂತರ ಸಂಪರ್ಕ ದಲ್ಲಿದ್ದು, ಚುನಾವಣೆಯಲ್ಲಿ ಮತದಾನ ಮಾಡಿಸುವ ಮೂಲಕ ಹೆಚ್ಚಿನ ಸಂಖ್ಯೆ ಯಲ್ಲಿ ಮತದಾನವಾಗುವಂತೆ ನೋಡಿ ಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.

ಮೈಸೂರಿನ ಕೆಆರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಎ.ರಾಮದಾಸ್ ವಿವಿಧೆಡೆ ಪಾದಯಾತ್ರೆ ಮೂಲಕ ಮತ ಯಾಚನೆ ಮಾಡಿದರು. ಈ ವೇಳೆ ಮಾಜಿ ಉಪಮೇಯರ್ ವನಿತಾ ಪ್ರಸನ್ನ ಇತರರಿದ್ದಾರೆ.

ಪೇಜ್ ಪ್ರಮುಖರನ್ನಾಗಿ ಒಟ್ಟು 8,810 ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ. ಒಬ್ಬ ಪೇಜ್ ಪ್ರಮುಖರಿಗೆ 10ರಿಂದ 15 ಮನೆಗಳನ್ನು ನೇಮಿಸಲಾಗಿದೆ. ಈಗಾಗಲೇ ಇವರು ಮನೆ ಮನೆ ಸಂಪರ್ಕ ಪ್ರಾರಂಭಿಸಿದ್ದಾರೆ. ಇಡೀ ದೇಶಕ್ಕೆ ಸಂಘಟನೆಯ ಹೊಸ ರೂಪವನ್ನು ಕೊಟ್ಟಂತಹ ಸಂಘಟಕ ನರೇಂದ್ರ ಮೋದಿ ಅವರು ಪ್ರಸ್ತುತ ಚುನಾ ವಣೆಯಲ್ಲಿ ಉಳಿದಿರುವ 15 ದಿನಗಳಲ್ಲಿ ಪೇಜ್ ಪ್ರಮುಖರು ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದುಕೊಂಡು ಕೇಂದ್ರ ಸರ್ಕಾರದ ಸಾಧನೆಗಳು, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ದ್ದಾಗ ಮಾಡಿದ ಸಾಧನೆಗಳನ್ನು ತಿಳಿಸಿ ಕೊಡುವ ಮೂಲಕ ಮತಯಾಚಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರ ಜಾತಿ ಜಾತಿಗಳ ನಡುವೆ ಕಂದಕವನ್ನು ನಿರ್ಮಿಸಿ ಚುನಾವಣೆ ಯಲ್ಲಿ ಗೆಲ್ಲಲು ಕ್ಷೇತ್ರದಲ್ಲಿ ಯಾವ ಯಾವ ಜಾತಿಯವರು ಎಷ್ಟಿದ್ದಾರೆ ಎಂದು ಲೆಕ್ಕ ಹಾಕುವ ನೀತಿಗೆ ತಣ ್ಣೀರೆರಚುವ ಹಾಗೆ ಕಾರ್ಯಕರ್ತರು ನಿರಂತರವಾಗಿ ಮತದಾರ ಜೊತೆ ಸುಮಾರು 5ರಿಂದ 10 ನಿಮಿಷಗಳ ಕಾಲ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಮತದಾರ ರಲ್ಲಿ ಜಾಗೃತಿ ಮೂಡಿಸಬೇಕೆಂದು ತಿಳಿಸಿ ದರು. ಈ ಸಂದರ್ಭದಲ್ಲಿ ಮಾಜಿ ಉಪ ಮೇಯರ್ ವನಿತಾ ಪ್ರಸನ್ನ, ಪಾಲಿಕೆ ಸದಸ್ಯೆ ಸೀಮಾ ಪ್ರಸಾದ್ ಇನ್ನಿತರರಿದ್ದರು.

ಕಾಂಗ್ರೆಸ್: ಕೃಷ್ಣರಾಜ ವಿಧಾನಸಭಾ ಕ್ಷೇತ್ರ ದಲ್ಲಿ ಚುನಾವಣಾ ಪ್ರಚಾರ ಬಿರುಸು ಗೊಂಡಿದ್ದು, ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಕೆ.ಸೋಮಶೇಖರ್ ತಮ್ಮ ಬೆಂಬಲಿಗ ರೊಂದಿಗೆ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿಮತ ಯಾಚನೆ ಮಾಡಿದರು.

ಮೈಸೂರಿನ ವಿವೇಕಾನಂದನಗರದ ವಿವೇ ಕಾನಂದ ವೃತ್ತದಿಂದ ಪಾದಯಾತ್ರೆ ಆರಂಭಿ ಸಿದ ಸೋಮಶೇಖರ್ ತಮ್ಮನ್ನು ಪುನರಾಯ್ಕೆ ಮಾಡುವಂತೆ ಮನವಿ ಮಾಡಿದರು.

ಈ ವೇಳೆ ಮತದಾರರನ್ನು ಉದ್ದೇಶಿಸಿ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವ ಮೂಲಕ ರಾಜ್ಯದ ಅಭಿವೃದ್ಧಿಗೆ ನಾಂದಿ ಹಾಡಿದೆ. ಸುಭದ್ರ ಹಾಗೂ ಪಾರದರ್ಶಕ ಆಡಳಿತದ ಮೂಲಕ ಸರ್ವ ಜನಾಂಗದ ಹಿತ ಕಾದಿದೆ. ಈ ಹಿನ್ನೆಲೆ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ತಮ್ಮನ್ನು ಬೆಂಬಲಿಸಬೇಕೆಂದು ಕೋರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೆ ತಂದ ಜನಪರ ಕಾರ್ಯಕ್ರಮಗಳು ಸಮಾ ಜದ ಪ್ರಗತಿಗೆ ಕಾರಣವಾಗಿದೆ. ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಅನೇಕ ಭಾಗ್ಯಗಳನ್ನು ನೀಡುವ ಮೂಲಕ ರಾಜ್ಯದ ಜನತೆಯ ಜೀವನ ಸುಧಾರಣೆಗೆ ನಾಂದಿ ಹಾಡಿದ್ದಾರೆ. ಈ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆಗೆ ಅವಕಾಶ ನೀಡಿ ಎಂದು ಮನವಿ ಮಾಡಿದರು.

ಜೆಡಿಎಸ್: ಕೃಷ್ಣರಾಜ ವಿಧಾನಸಭಾ ಕ್ಷೇತ್ರ ದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ವಿ.ಮಲ್ಲೇಶ್ ಗುರುವಾರ ಕ್ಷೇತ್ರದ ವಿವಿಧ ಭಾಗಗಳಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ಮತ ಯಾಚನೆ ಮಾಡಿದರು. ಜೆಡಿಎಸ್ ಕಾರ್ಯ ಕರ್ತರೊಂದಿಗೆ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸಿದ ಅವರು ಮನೆ ಮನೆಗೆ ತೆರಳಿ ಜೆಡಿಎಸ್‍ಗೆ ಮತ ಹಾಕುವ ಮೂಲಕ ತಮ್ಮನ್ನು ಆಯ್ಕೆ ಮಾಡುವಂತೆ ಕೋರಿದರು. ಎರಡು ರಾಷ್ಟ್ರೀಯ ಪಕ್ಷಗಳಿಗೆ ಈಗಾಗಲೇ ರಾಜ್ಯದ ಆಡಳಿತ ನಡೆಸುವ ಅವಕಾಶ ಲಭ್ಯವಾಗಿದೆ. ಆದರೆ ಇವರಿಂದ ಉತ್ತಮ ಆಡಳಿತವಂತೂ ರಾಜ್ಯಕ್ಕೆ ದೊರೆಯಲಿಲ್ಲ. ಈ ಬಾರಿ ಜೆಡಿಎಸ್ ಬೆಂಬಲಿಸುವ ಮೂಲಕ ಹೆಚ್.ಡಿ.ಕುಮಾರ ಸ್ವಾಮಿ ಮುಖ್ಯಮಂತ್ರಿ ಆಗಲು ಅವಕಾಶ ನೀಡಿ ಎಂದು ಮನವಿ ಮಾಡಿದರು.

ಮೈಸೂರಿನ ಕೆಆರ್ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ವಿ.ಮಲ್ಲೇಶ್ ಗುರುವಾರ ವಿವಿಧೆಡೆ ಮತ ಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

Translate »