ಕೃಷ್ಣ-ಯಡಿಯೂರಪ್ಪ ಭೇಟಿ: ಸುಮಲತಾ ಸ್ಪರ್ಧೆ ಕುರಿತು ಚರ್ಚೆ
ಮೈಸೂರು

ಕೃಷ್ಣ-ಯಡಿಯೂರಪ್ಪ ಭೇಟಿ: ಸುಮಲತಾ ಸ್ಪರ್ಧೆ ಕುರಿತು ಚರ್ಚೆ

March 17, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸೆಣಸಾಡುತ್ತಿರುವ ಮಾಜಿ ಸಚಿವ, ದಿವಂಗತ ನಟ ಅಂಬರೀಶ್ ಪತ್ನಿ ಸುಮ ಲತಾ ಅವರಿಗೆ ಬೆಂಬಲ ನೀಡಬೇಕೇ? ಬೇಡವೇ? ಎಂಬ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ-ಬಿ.ಎಸ್. ಯಡಿಯೂರಪ್ಪ ಚರ್ಚೆ ನಡೆಸಿದರು.

ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವರೂ ಆದ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಒಂದು ಗಂಟೆ ಕಾಲ ಸಮಾಲೋಚನೆ ನಡೆಸಿದರು. ನಿನ್ನೆಯಷ್ಟೇ ತಮ್ಮನ್ನು ಭೇಟಿಯಾಗಿ ಚರ್ಚೆ ನಡೆಸಿದ ಸುಮಲತಾ ವಿಚಾರವನ್ನು ಪ್ರಸ್ತಾಪಿಸಿದ ಎಸ್.ಎಂ. ಕೃಷ್ಣ, ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿ ಸುವುದೋ ಇಲ್ಲವೇ ಬೆಂಬಲ ನೀಡುವುದೋ ಎಂಬ ವಿಚಾರವನ್ನು ಪ್ರಸ್ತಾಪಿಸಿದರೆನ್ನ ಲಾಗಿದೆ. ಸುಮಲತಾರನ್ನು ಬಿಜೆಪಿಗೆ ಸೆಳೆಯಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ಸುಕರಾಗಿದ್ದಾರೆ. ಒಂದು ವೇಳೆ ಅವರು ಬಿಜೆಪಿಗೆ ಸೇರ್ಪಡೆ ಯಾಗದಿದ್ದಲ್ಲಿ ಅವರಿಗೆ ಬೆಂಬಲ ಸೂಚಿಸುವ ಪ್ರಸ್ತಾಪವೂ ಪಕ್ಷದ ಮುಂದಿದೆ ಎಂಬ ವಿಚಾರವನ್ನು ಯಡಿಯೂರಪ್ಪ ಅವರು ಎಸ್.ಎಂ. ಕೃಷ್ಣ ಅವರ ಗಮನಕ್ಕೆ ತಂದಿದ್ದಾರೆನ್ನಲಾಗಿದೆ. ಬಿಜೆಪಿ ಉನ್ನತ ಮೂಲಗಳ ಪ್ರಕಾರ ಸುಮಲತಾ ಅವರಿಗೆ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

Translate »