ಕೆಆರ್‍ಎಸ್, ಕಬಿನಿಗೆ ಇಂದು  ಮುಖ್ಯಮಂತ್ರಿ ಬೊಮ್ಮಾಯಿ ಬಾಗಿನ
ಮೈಸೂರು

ಕೆಆರ್‍ಎಸ್, ಕಬಿನಿಗೆ ಇಂದು ಮುಖ್ಯಮಂತ್ರಿ ಬೊಮ್ಮಾಯಿ ಬಾಗಿನ

July 20, 2022

ಮೈಸೂರು, ಜು.19(ಆರ್‍ಕೆ)-ಮೈದುಂಬಿರುವ ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳಿಗೆ ನಾಳೆ (ಜು.20) ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸುವರು.

ಬುಧವಾರ ಬೆಳಗ್ಗೆ 11 ಗಂಟೆಗೆ ಹೆಚ್.ಡಿ.ಕೋಟೆ ತಾಲೂಕಿನ ಬೀಚನ ಹಳ್ಳಿಯ ಕಬಿನಿ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸುವ ಮುಖ್ಯಮಂತ್ರಿ ಗಳು, ನಂತರ ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲೂಕು, ಕೃಷ್ಣರಾಜಸಾಗರ ಜಲಾ ಶಯದ ಕಾವೇರಿಗೆ ಬಾಗಿನ ಅರ್ಪಿಸುವರು. ಕೃಷ್ಣರಾಜ ಸಾಗರ ಅಣೆಕಟ್ಟೆಯಲ್ಲಿ ನೀರಿನ ಮಟ್ಟ 124.80 ಅಡಿ ತಲುಪಿದ್ದು, ಜಲಾಶಯಕ್ಕೆ 57,765 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ 57,557 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಇಂದು ಕಬಿನಿ ಜಲಾಶಯದ ನೀರಿನ ಮಟ್ಟ 2,282.43 ಅಡಿ ತಲುಪಿದ್ದು, ಇಂದು 29,768 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅದೇ ರೀತಿ ಅಣೆಕಟ್ಟೆಯಿಂದ 30,594 ಕ್ಯೂಸೆಕ್ ನೀರನ್ನು ಕಪಿಲಾ ನದಿಗೆ ಬಿಡಲಾಗುತ್ತಿದೆ. ಒಳ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಕಬಿನಿ ಮತ್ತು ಕೆಆರ್‍ಎಸ್ ಜಲಾಶಯಗಳು ಭರ್ತಿ ಯಾಗಿದ್ದು, ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಉಸ್ತುವಾರಿ ಸಚಿವರು, ಜಲಸಂಪನ್ಮೂಲ ಸಚಿವ, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರ ಸಮ್ಮುಖದಲ್ಲಿ ಬಾಗಿನ ಅರ್ಪಿಸುವರು. ಇದಕ್ಕೂ ಮೊದಲು ಬುಧ ವಾರ ಬೆಳಗ್ಗೆ 9.45 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡಿನ ಅದಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವರ್ಧಂತಿಯಂದು ತಾಯಿಗೆ ಮುಖ್ಯಮಂತ್ರಿಗಳು ವಿಶೇಷ ಪೂಜೆ ಸಲ್ಲಿಸುವರು ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ. ಬಾಗಿನ ಸಮರ್ಪಣೆ ಕಾರ್ಯಕ್ರಮಕ್ಕೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು, ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಮತ್ತು ಶ್ರೀರಂಗಪಟ್ಟಣ ತಾಲೂಕು ಕೃಷ್ಣರಾಜಸಾಗರ ಅಣೆಕಟ್ಟೆ ಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ.

Translate »