ಚಾಮರಾಜನಗರ: ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯಾಗಿ ಸಿ. ಸತ್ಯಭಾಮ ಬುಧ ವಾರ ಅಧಿಕಾರ ಸ್ವೀಕರಿಸಿದ ಕೆಲ ಗಂಟೆಗಳಲ್ಲೇ ಅವರನ್ನು ಮತ್ತೆ ವರ್ಗಾಯಿಸಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿದ್ದ ಡಾ. ಕೆ. ಹರೀಶ್‍ಕುಮಾರ್ ಅವರನ್ನು ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿ ವರ್ಗಾಯಿ ಸಲಾಗಿತ್ತು. ಈ ಸ್ಥಾನಕ್ಕೆ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆಗಿದ್ದ ಸಿ. ಸತ್ಯಭಾಮ ರನ್ನು ನಿಯೋಜಿಸಲಾಗಿತ್ತು. ಸಿ. ಸತ್ಯಭಾಮ ಅವರು ಈ ಹಿಂದೆ ಜಿಲ್ಲೆಯಲ್ಲಿ ಉಪವಿಭಾಗಾ ಧಿಕಾರಿಯಾಗಿ (ಎಸಿ) ಸೇವೆ ಸಲ್ಲಿಸಿದ್ದರು. ಹೀಗಾಗಿ ಜಿಲ್ಲೆಯ ಪರಿಚಯ ಅವರಿಗಿತ್ತು.
ಸಿ. ಸತ್ಯಭಾಮ ಬುಧವಾರ ಬೆಳಿಗ್ಗೆ ನಗರಕ್ಕೆ ಆಗಮಿಸಿ ಅಧಿಕಾರ ಸ್ವೀಕರಿಸಿದರು. ನಂತರ ಜಿಲ್ಲಾ ಧಿಕಾರಿ ಬಿ.ಬಿ. ಕಾವೇರಿ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಹೂಗುಚ್ಛ ನೀಡಿ ಪರಿಚಯ ಮಾಡಿಕೊಂಡರು. ತದನಂತರ ಕಚೇರಿಗೆ ತೆರಳಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಚಾಮರಾಜನಗರದ ಜಿಪಂ ಸಿಇಓ ಆಗಿ ರಿಯಲ್ ಎಸ್ಟೇಟ್ ನಿಯಂತ್ರಣಾ ಪ್ರಾಧಿಕಾರದ ಕಾರ್ಯದರ್ಶಿಯಾಗಿದ್ದ ಕೆ.ಎಸ್. ಲತಾಕುಮಾರಿ ಅವರನ್ನು ನಿಯೋ ಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಅಧಿಕಾರ ಸ್ವೀಕರಿಸಿದ ಸತ್ಯಭಾಮ ಅವರನ್ನು ಕೆಲವೇ ಗಂಟೆಗಳಲ್ಲಿ ವರ್ಗಾವಣೆ ಮಾಡಿ ರುವುದು ಚರ್ಚೆಗೆ ಗ್ರಾಸವಾಗಿದೆ.