ಬೈಕ್‍ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಸವಾರ ಸಾವು
ಚಾಮರಾಜನಗರ

ಬೈಕ್‍ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಸವಾರ ಸಾವು

May 6, 2018

ಹನೂರು: ತಾಲ್ಲೂಕಿನ ವಡಕೆಹಳ್ಳ ಗ್ರಾಮದ ಸಮೀಪ ಕೆಎಸ್ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ವಡಕೆಹಳ್ಳ ಗ್ರಾಮದ ವಾಟರ್ ಮೆನ್ ಗೋವಿಂದ (45) ಮೃತಪಟ್ಟ ವ್ಯಕ್ತಿ. ಗೋವಿಂದ ಅವರು ಬೆಳ್ಳಿಗೆ ಮನೆಯಿಂದ ಗ್ರಾಮ ಬಸ್‍ನಿಲ್ದಾಣದ ಕಡೆಗೆ ತಮ್ಮ ಬೈಕ್‍ನಲ್ಲಿ ಬರುತ್ತಿದ್ದಾಗ ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ಹೋಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಗೋವಿಂದ ಅವರ ತಲೆಗೆ ಬಲವಾಗಿ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಗ್ರಾಮಸ್ಥರಿಂದ ಪ್ರತಿಭಟನೆ: ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಮಲೆಮಹದೇಶ್ವರ ಬೆಟ್ಟ ಹಾಗೂ ಹನೂರು ಪಟ್ಟಣಕ್ಕೆ ಬರುತ್ತಿದ್ದ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಸ್ಥಳಕ್ಕೆ ಡಿಪೋ ವ್ಯವಸ್ಥಾಪಕರು ಬರಬೇಕು ಎಂದು ಪಟ್ಟು ಹಿಡಿದರು. ಬಳಿಕ, ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದರು. ಪ್ರಕರಣವನ್ನು ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

Translate »