ಅನಿರ್ದಿಷ್ಟಾವಧಿಗೆ ಟಿಕೆಟ್ ಬುಕ್ಕಿಂಗ್ ರದ್ದುಗೊಳಿಸಿದ ಕೆಎಸ್‍ಆರ್‍ಟಿಸಿ
ಮೈಸೂರು

ಅನಿರ್ದಿಷ್ಟಾವಧಿಗೆ ಟಿಕೆಟ್ ಬುಕ್ಕಿಂಗ್ ರದ್ದುಗೊಳಿಸಿದ ಕೆಎಸ್‍ಆರ್‍ಟಿಸಿ

April 13, 2020

ಬೆಂಗಳೂರು, ಏ.12- ಕೊರೊನಾ ಸೋಂಕು ತಡೆಗಟ್ಟುವಿಕೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವಿಧಿಸಲಾಗಿದ್ದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ.

ಮುಂದೆ ಪರಿಸ್ಥಿತಿ ಯಾವ ರೀತಿ ಇರುತ್ತದೆ ಎಂದು ಅಂದಾಜಿಸಲು ಸಾಧ್ಯ ವಾಗದ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿ ಟಿಕೆಟ್ ಬುಕ್ಕಿಂಗ್ ಅನ್ನು ಅನಿರ್ದಿಷ್ಟಾವ ಧಿಯವರೆಗೆ ಸ್ಥಗಿತಗೊಳಿಸಿದೆ. ಇದುವರೆಗೆ ಬುಕ್ಕಿಂಗ್ ಮಾಡಿರುವವರ ಟಿಕೆಟ್‍ಗಳನ್ನು ರದ್ದುಗೊಳಿಸಲಾಗಿದ್ದು, ಅವರ ಹಣವನ್ನು ಹಿಂತಿರುಗಿಸಲಾಗುತ್ತದೆ. ಸರ್ಕಾರದಿಂದ ಮುಂದಿನ ಆದೇಶ ಬರುವವರೆಗೆ ಟಿಕೆಟ್ ಬುಕ್ಕಿಂಗ್ ಅನ್ನು ರದ್ದುಗೊಳಿಸಲಾಗಿದೆ ಎಂದು ನಿಗಮದ ಸಾರ್ವಜನಿಕ ಸಂಪ ರ್ಕಾಧಿಕಾರಿ ತಿಳಿಸಿದ್ದಾರೆ.

Translate »