ಇಂದು ಹಾರಂಗಿಗೆ ಸಿಎಂ ಕುಮಾರಸ್ವಾಮಿ ಬಾಗಿನ
ಕೊಡಗು

ಇಂದು ಹಾರಂಗಿಗೆ ಸಿಎಂ ಕುಮಾರಸ್ವಾಮಿ ಬಾಗಿನ

July 19, 2018

ಮಡಿಕೇರಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜು.19 ರಂದು ಮಧ್ಯಾಹ್ನ 3 ಗಂಟೆಗೆ ಹಾರಂಗಿ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಲಿದ್ದಾರೆ.

ಮಾಜಿ ಪ್ರಧಾನಮಂತ್ರಿ ಹಾಗೂ ಸಂಸದ ರಾದ ಎಚ್.ಡಿ.ದೇವೇಗೌಡ, ಉಪ ಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್, ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಹಾಗೂ ರೇಷ್ಮೆ ಖಾತೆ ಸಚಿವ ಸಾ.ರಾ.ಮಹೇಶ್, ಶಾಸಕ ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಜಿಪಂ ಅಧ್ಯಕ್ಷ ಬಿ.ಎ.ಹರೀಶ್, ಉಪಾ ಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಶಾಸಕ ರಾದ ಅಡಗೂರು ಎಚ್.ವಿಶ್ವನಾಥ್, ಡಾ.ಎ.ಟಿ. ರಾಮಸ್ವಾಮಿ, ಕೆ.ಮಹದೇವ, ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜು ನಾಥ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಆರ್.ಮಂಜುಳ, ಸೋಮವಾರಪೇಟೆ ತಾಪಂ ಅಧ್ಯಕ್ಷರಾದ ಪುಷ್ಪಾ ರಾಜೇಶ್, ಉಪಾಧ್ಯಕ್ಷರಾದ ಅಭಿಮನ್ಯು ಕುಮಾರ್, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷರಾದ ಲಕ್ಷ್ಮೀ ರವಿ, ಉಪಾಧ್ಯಕ್ಷರಾದ ಕೆ.ವಿ.ಸಣ್ಣಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.

 

Translate »