ಕೃಷಿ ತಜ್ಞ ಸ್ವಾಮಿನಾಥನ್ ಜೊತೆ ರೈತರ ಸಮಸ್ಯೆ ಕುರಿತು ಕುಮಾರಸ್ವಾಮಿ ಚರ್ಚೆ
ಮೈಸೂರು

ಕೃಷಿ ತಜ್ಞ ಸ್ವಾಮಿನಾಥನ್ ಜೊತೆ ರೈತರ ಸಮಸ್ಯೆ ಕುರಿತು ಕುಮಾರಸ್ವಾಮಿ ಚರ್ಚೆ

July 14, 2018

ಬೆಂಗಳೂರು:  ರಾಜ್ಯದ ರೈತರ ಆರ್ಥಿಕ ಸ್ಥಿತಿ ಸುಧಾರಣೆಗಾಗಿ ವಿಶ್ವದ ವಿವಿಧೆಡೆಗಳಲ್ಲಿ ಅಳವಡಿಸಿ ಕೊಳ್ಳಲಾದ ಉತ್ತಮ ಕೃಷಿ ಪದ್ದತಿಯ ಜಾರಿಗೆ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ತಿಳಿಸಿದ್ದಾರೆ.

ರಾಜ್ಯದಲ್ಲಿ ರೈತರ ಸುಧಾರಣೆ, ಕೃಷಿ ಅಭಿವೃದ್ದಿಗೆ ಕಾರಣವಾಗಿದ್ದ ಕೃಷಿ ತಜ್ಞ ಡಾ.ಎಸ್.ಎಸ್. ಸ್ವಾಮಿನಾಥನ್ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಕುಮಾರಸ್ವಾಮಿ ರಾಜ್ಯದಲ್ಲಿ ಇಸ್ರೇಲ್ ಮಾದರಿ ಕೃಷಿ ಅಳವಡಿಕೆ ಕುರಿತಂತೆ ಬಜೆಟ್ ಪ್ರಸ್ತಾವನೆಯನ್ನು ಸ್ವಾಮಿನಾಥನ್ ಸ್ವಾಗತಿಸಿದ್ದಾರೆ ಎಂದು ತಿಳಿಸಿದರು. ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸಲುವಾಗಿ ಸ್ವಾಮಿನಾಥನ್ ಅವರಿಂದ ಸಲಹೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಶೀಘ್ರವೇ ಕೃಷಿ ಸಚಿವ ಶಿವಶಂಕರ ರೆಡ್ಡಿ 30 ಜಿಲ್ಲೆಗಳ ಕೃಷಿ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಲಿದ್ದಾರೆ ಮತ್ತು ಪ್ರತಿ ಜಿಲ್ಲೆಯಲ್ಲಿ ಕಂಡುಬರುವ ಸಮಸ್ಯೆಯನ್ನು ಅಧಿಕಾರಿಗಳ ಜತೆ ಚರ್ಚಿಸಲಾಗುತ್ತದೆ. ಹಾಗೆಯೇ ಆಯಾ ಜಿಲ್ಲೆಗೆ ನಿರ್ದಿಷ್ಟ ಪರಿಹಾರಗಳನ್ನು ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಕೃಷಿ ಅಧಿಕಾರಿಗಳ ಸಭೆಯಲ್ಲಿ ತಾವೂ ಭಾಗವಹಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

Translate »