ಮೈಸೂರು: ಸಂತ ಶ್ರೀ ಕನಕದಾಸರ ಜಯಂತ್ಯೋತ್ಸವ ಸಮಿತಿಯು ಮೈಸೂರು ಜಿಲ್ಲೆಯಲ್ಲಿ ವಾಸಿಸುತ್ತಿರುವ ಕುರುಬ ಜನಾಂಗದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರ ಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ. 85ಕ್ಕಿಂತಲೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಕನಕ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಆಸಕ್ತರು ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ, ಪೂರ್ಣ ವಿಳಾಸದೊಂದಿಗೆ ನ.20ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಮೊ. 9845116664 ಅನ್ನು ಸಂಪರ್ಕಿಸಬಹುದು.
