ಶ್ರೀ ಮಹದೇಶ್ವರ ದಾಸೋಹ ಭವನಕ್ಕೆ ಭೂಮಿ ಪೂಜೆ
ಚಾಮರಾಜನಗರ

ಶ್ರೀ ಮಹದೇಶ್ವರ ದಾಸೋಹ ಭವನಕ್ಕೆ ಭೂಮಿ ಪೂಜೆ

November 20, 2018

ಸಂತೇಮರಹಳ್ಳಿ: ಇಲ್ಲಿನ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನದ ಅವರಣದಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ 50 ಲಕ್ಷ ರೂ. ವೆಚ್ಚದಲ್ಲಿ ದಾಸೋಹ ಭವನ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಶ್ರೀಕ್ಷೇತ್ರ ಮಲ್ಲನಮೂಲೆ ಮಠಾಧ್ಯಕ್ಷರಾದ ಶ್ರೀ ಚನ್ನ ಬಸವಸ್ವಾಮೀಜಿ ಹಾಗೂ ಆಲಹಳ್ಳಿ ಪಟ್ಟದ ಮಠಾಧ್ಯಕ್ಷ ರಾದ ಶ್ರೀ ಶಿವಕುಮಾರಸ್ವಾಮೀಜಿ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಸಂತೇಮರಹಳ್ಳಿಯಲ್ಲಿರುವ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ಪ್ರತಿ ಅಮಾವಾಸ್ಯೆ ಹಾಗೂ ವಿಶೇಷ ದಿನಗಳಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಪ್ರತಿ ವರ್ಷ ಭೀಮನ ಅಮಾವಾಸ್ಯೆ ದಿನದಂದು ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಸ್ವಾಮಿಯ ದರ್ಶನ ಪಡೆಯಲಿದ್ದು, ಸಹಪಂಕ್ತಿ ಭೋಜನ ವ್ಯವಸ್ಥೆ ನಡೆಯಲಿದೆ. ಇದಕ್ಕಾಗಿ ಭಕ್ತರು ಹಾಗೂ ಸುತ್ತಮತ್ತಲಿನ ಗ್ರಾಮಸ್ಥರು ಹಾಗೂ ಭಕ್ತರ ನೆರವಿನೊಂದಿಗೆ ಬಹಳ ವಿಜೃಂಭಣೆ ಯಿಂದ ಜಾತ್ರೆಯ ಮಾದರಿಯಲ್ಲಿ ಆಚರಣೆ ಮಾಡಲಾಗುತ್ತಿದೆ.

ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಎಲ್ಲಾ ಭಕ್ತರಿಗೂ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಇದರೊಟ್ಟಿಗೆ ದೇವಸ್ಥಾನ ಆವರಣದಲ್ಲಿ ಭಕ್ತಾಧಿಗಳ ನೆರವಿ ನೊಂದಿಗೆ ಸÀುಸಜ್ಜಿತ ದಾಸೋಹ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ದಾಸೋಹ ಭವನ ಗುದ್ದಲಿಪೂಜೆ ನೆರವೇರಿಸಿದ ಚೆನ್ನಬಸವಸ್ವಾಮೀಜಿ ಮಾತನಾಡಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಶ್ರೀ ಮಹದೇಶ್ವರ ಸ್ವಾಮಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮಹದೇಶ್ವರ ಸ್ವಾಮಿಯ ಮಹಿಮೆ ಅಪಾರವಾಗಿದೆ. ಸಂತೇಮರಹಳ್ಳಿಯಲ್ಲಿರುವ ಶ್ರೀ ಮಹ ದೇಶ್ವರ ಸ್ವಾಮಿ ದೇವಸ್ಥಾನದ ಹೆಚ್ಚಿನ ಪ್ರಖ್ಯಾತಿಯನ್ನು ಪಡೆದುಕೊಂಡಿದೆ. ದಾಸೋಹ ಭವನ ಜೊತೆಗೆ ಶ್ರೀ ಕ್ಷೇತ್ರದಲ್ಲಿ ಸರಳ ವಿವಾಹಗಳು ಮತ್ತು ಶುಭ ಸಮಾರಂಭ ಗಳು ನಡೆಯುವಂತಾಗಬೇಕು. ಗ್ರಾಮಸ್ಥರು ಹಾಗೂ ಭಕ್ತರು ಇದಕ್ಕಾಗಿ ಹೆಚ್ಚಿನ ಶ್ರಮ ವಹಿಸಬೇಕು ಎಂದು ತಿಳಿಸಿದರು.

ಆಲಹಳ್ಳಿ ಪಟ್ಟದ ಮಠಾಧ್ಯಕ್ಷರಾದ ಶ್ರೀ ಶಿವಕುಮಾರ ಸ್ವಾಮೀಜಿ ಮಾತನಾಡಿ, ಸಂತೇಮರಹಳ್ಳಿ ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ದಾಸೋಹ ಭವನ ನಿರ್ಮಾಣ ಮಾಡುತ್ತಿರುವುದು ಒಳ್ಳೆಯ ಕಾಯಕ. ಹೋಬಳಿ ಕೇಂದ್ರವಾಗಿ ರುವ ಸಂತೇಮರಹಳ್ಳಿ ಸುತ್ತಮುತ್ತಲಿನ ಹಳ್ಳಿಗಳು ಹಾಗೂ ತಾಲೂಕು ಕೇಂದ್ರಗಳ ಮಧ್ಯೆ ಭಾಗದ ಕೇಂದ್ರ ಸ್ಥಾನವಾಗಿದೆ. ಮಹದೇಶ್ವರರ ಮಹಿಮೆ ಈ ಭಾಗದಲ್ಲಿ ಹೆಚ್ಚಿನದ್ದಾಗಿದೆ. ದಾಸೋಹ ಭವನ ನಿರ್ಮಾಣದ ಜೊತೆಗೆ ಇನ್ನು ಹೆಚ್ಚಿನ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿ ಎಂದರು.ಕಾರ್ಯಕ್ರಮದಲ್ಲಿ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನದ ಟ್ರಸ್ಟ್‍ನ ಪದಾಧಿಕಾರಿಗಳು, ಸಂತೇಮರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Translate »