`ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರೈತರು ಅಂಗೀಕರಿಸುವುದಿಲ್ಲ’
ಮೈಸೂರು

`ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರೈತರು ಅಂಗೀಕರಿಸುವುದಿಲ್ಲ’

July 15, 2020

ಮೈಸೂರು, ಜು.14- ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜುಬಾಯಿ ರೂಡಾಬಾಯಿ ವಾಲಾ ಅವರು ಅಂಗೀಕಾರ ಮುದ್ರೆ ಒತ್ತಿರಬಹುದು. ಆದರೆ, ಈ ಜನವಿರೋಧಿ ತಿದ್ದುಪಡಿ ಕಾಯ್ದೆಯನ್ನು ರೈತರು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಈ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವ ಮೂಲಕ ರೈತರ ಕೊರಳಿಗೆ ನೇಣು ಕುಣಿಕೆ ಹಾಕಿದೆ. ಮುಂದೆ ಈ ಕುಣಿಕೆ ಯಡಿಯೂರಪ್ಪನವರ ಸಿಎಂ ಕುರ್ಚಿಯ ಕಾಲಿಗೇ ತಗುಲಿ ಕೊಳ್ಳಲಿದೆ ಎಂದು ಕಿಡಿಕಾರಿರುವ ನಾಗೇಂದ್ರ, ಈ ಕಾಯ್ದೆ ವಿರುದ್ಧದ ಹೋರಾಟ ಇನ್ನಷ್ಟು ತೀವ್ರಗೊಳಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Translate »