ಚಾಮುಂಡಿಬೆಟ್ಟದಲ್ಲಿ ಭೂ ಕುಸಿತ: ತಕ್ಷಣ ರಸ್ತೆ ದುರಸ್ತಿ ಕಾರ್ಯಕ್ಕೆ ಸಚಿವದ್ವಯರ ಸೂಚನೆ
ಮೈಸೂರು

ಚಾಮುಂಡಿಬೆಟ್ಟದಲ್ಲಿ ಭೂ ಕುಸಿತ: ತಕ್ಷಣ ರಸ್ತೆ ದುರಸ್ತಿ ಕಾರ್ಯಕ್ಕೆ ಸಚಿವದ್ವಯರ ಸೂಚನೆ

October 22, 2021

ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಈ ಹಿಂದೆಯೂ ಇದೇ ಸ್ಥಳದಲ್ಲಿ ಭೂ ಕುಸಿತವಾಗಿತ್ತು

ಮೈಸೂರು, ಅ.೨೧(ಆರ್‌ಕೆ)-ಮೈಸೂರಿನ ಚಾಮುಂಡಿಬೆಟ್ಟದ ನಂದಿ ಮಾರ್ಗದಲ್ಲಿ ಭೂ ಕುಸಿತ ಉಂಟಾಗಿರುವ ಪ್ರದೇಶದಲ್ಲಿ ತಕ್ಷಣವೇ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಹಾಗೂ ಆ ಬಗ್ಗೆ ತಾಂತ್ರಿಕ ವರದಿ ಸಲ್ಲಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ತಮ್ಮ ಇಲಾಖೆಯ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಹ ಕೂಡಲೇ ದುರಸ್ತಿ ಕಾರ್ಯ ಕೈಗೊಂಡು ಮುಂದೆ ಆಗಬಹುದಾದ ಅನಾಹುತ ತಪ್ಪಿಸ ಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಗುರುವಾರ ಬೆಳಗ್ಗೆ ಚಾಮುಂಡಿಬೆಟ್ಟದ ಭೂ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೇ ನಾಳೆ (ಶುಕ್ರವಾರ) ಯಿಂದಲೇ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಲೋಕೋ ಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಹರ್ಷ ಅವರಿಗೆ ತಿಳಿಸಿದರು. ಇದು ತುರ್ತು ಕಾಮಗಾರಿ ಆಗಿರುವುದರಿಂದ ಅನುಭವಿ ಗುತ್ತಿಗೆ ದಾರರಿಂದ ಕೆಲಸ ಮಾಡಿಸುವಂತೆಯೂ ಹಾಗೂ ಎಂಜಿನಿಯರ್‌ಗಳು ಸ್ಥಳದಲ್ಲೇ
ಇದ್ದು ಮೇಲ್ವಿಚಾರಣೆ ನಡೆಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಅಲ್ಲದೇ ಚಾಮುಂಡಿಬೆಟ್ಟದ ಎಲ್ಲಾ ರಸ್ತೆಗಳನ್ನು ಪರಿಶೀಲಿಸಿ ಕುಸಿಯುವ ಹಂತದಲ್ಲಿರುವ ಸ್ಥಳಗಳನ್ನು ಗುರುತಿಸಿ, ಅಪಾಯ ಸಂಭವಿಸಲಿದೆ ಎಂಬುದು ಕಂಡು ಬಂದಲ್ಲಿ ಮುಂಜಾಗ್ರತಾ ಕ್ರಮವಾಗಿ ದುರಸ್ತಿ ಕಾಮಗಾರಿ ಕೈಗೊಳ್ಳಲು ಅಂದಾಜು ಪಟ್ಟಿ ಸಲ್ಲಿಸಿದರೆ ಅದಕ್ಕೆ ಅನುಮೋದನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಈ ಸಂಬAಧ `ಮೈಸೂರು ಮಿತ್ರ’ ಜೊತೆ ಮಾತನಾಡಿದ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಹರ್ಷ, ಚಾಮುಂಡಿಬೆಟ್ಟದ ಭೂ ಕುಸಿತವಾ ಗಿರುವ ಪ್ರದೇಶದಲ್ಲಿ ನಾಳೆಯಿಂದಲೇ ದುರಸ್ತಿ ಕಾಮಗಾರಿ ಕೈಗೊಳ್ಳಲಾಗುವುದು. ಜೆಸಿಬಿ ಬಳಸಿ ಕುಸಿದಿರುವ ಮಣ್ಣು ತೆರವುಗೊಳಿಸಿದ ನಂತರ ತಳಮಟ್ಟದಲ್ಲಿ ಜಲ್ಲಿ, ಸಿಮೆಂಟ್, ಕಬ್ಬಿಣ ಬಳಸಿ ಬೇಸ್ ಕಾಂಕ್ರೀಟ್ ಹಾಕಿದ ನಂತರ ಅಗತ್ಯವಿರುವಷ್ಟು ಪಿಲ್ಲರ್‌ಗಳನ್ನು ನಿರ್ಮಿಸಿ ಭೂ ಕುಸಿತವಾಗಿರುವ ಸ್ಥಳದಲ್ಲಿ ರೀಟೇನಿಂಗ್ ವಾಲ್ ನಿರ್ಮಿಸಬೇಕಾಗುತ್ತದೆ ಎಂದು ಹೇಳಿದರು. ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಚಾಮುಂಡಿ ಬೆಟ್ಟದ ನಂದಿ ಮಾರ್ಗದಲ್ಲಿ ರಸ್ತೆ ಕುಸಿದಿದ್ದು, ಈ ಮಾರ್ಗದಲ್ಲಿ ವಾಹನ ಸಂಚರಿಸದAತೆ ಸಿದ್ದಾರ್ಥ ನಗರ ಸಂಚಾರ ಠಾಣೆ ಪೊಲೀಸರು ಈ ರಸ್ತೆ ಪ್ರಾರಂಭವಾಗುವ ಎರಡೂ ಬದಿಯಲ್ಲೂ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದಾರೆ. ಹಾಗೂ ಪ್ರವೇಶ ನಿಷೇಧಿಸಿದೆ ಎಂಬ ಫಲಕವನ್ನೂ ಕೂಡ ಅಳವಡಿಸಿದ್ದಾರೆ.
ಈ ಹಿಂದೆಯೂ ಭೂ ಕುಸಿತವಾಗಿತ್ತು: ೨೦೧೯ರ ಅಕ್ಟೋಬರ್ ೨೨ರಂದು ಕೂಡ ಚಾಮುಂಡಿಬೆಟ್ಟದ ನಂದಿ ಮಾರ್ಗದಲ್ಲಿ ಭೂ ಕುಸಿತ ಉಂಟಾಗಿತ್ತು. ಆ ಸಂದರ್ಭದಲ್ಲಿ ತಕ್ಷಣವೇ ದುರಸ್ತಿ ಕಾಮಗಾರಿ ಕೈಗೊಂಡು ಕಾಂಕ್ರೀಟ್ ತಡೆಗೋಡೆ ನಿರ್ಮಿಸಲಾಗಿತ್ತು. ಇದೀಗ ಅದರ ಸಮೀಪವೇ ಭೂಮಿ ಕುಸಿದಿದೆ. ಹೀಗಾಗಿ ಚಾಮುಂಡಿಬೆಟ್ಟವನ್ನು ಸಂಪರ್ಕಿಸುವ ರಸ್ತೆಯನ್ನು ಸೂಕ್ಷö್ಮವಾಗಿ ಪರಿಶೀಲಿಸಿ ಭೂ ಕುಸಿತ ಸಂಭವಿಸುವ ಸಾಧ್ಯತೆ ಇರುವ ಕಡೆ ಕಾಮಗಾರಿ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.

ಭೂ ಕುಸಿತ ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡರ ಭೇಟಿ: ತುರ್ತು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

ಮೈಸೂರು, ಅ.೨೧(ಆರ್‌ಕೆಬಿ)- ಬುಧವಾರ ಸುರಿದ ಧಾರಾಕಾರ ಮಳೆಯಿಂದ ಮೈಸೂರಿನ ಚಾಮುಂಡಿಬೆಟ್ಟದ ನಂದಿ ಮಾರ್ಗದ ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಗುರುವಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

ಹಾನಿಗೀಡಾದ ರಸ್ತೆಯನ್ನು ಕೂಡಲೇ ದುರಸ್ತಿಪಡಿಸಬೇಕು. ಆರ್‌ಸಿಸಿ ರಿಟೈನಿಂಗ್ ವಾಲ್ ನಿರ್ಮಾಣ ಮಾಡಲು ತಕ್ಷಣ ಅಂದಾಜು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಅಂದಾಜು ಪಟ್ಟಿಗೆ ತಕ್ಷಣವೇ ಅನುಮತಿ ನೀಡುವಂತೆ ಲೋಕೋಪಯೋಗಿ ಸಚಿವರು, ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಕೃಷ್ಣರೆಡ್ಡಿ ಅವರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು. ಕಳೆದ ಎರಡು ವರ್ಷದ ಹಿಂದಷ್ಟೇ ಇದೇ ರೀತಿಯ ಭೂ ಕುಸಿತ ಇದೇ ಜಾಗದ ಸಮೀಪ ಸಂಭವಿಸಿತ್ತು. ಮತ್ತೆ ಮತ್ತೇ ಈ ರೀತಿ ಭೂ ಕುಸಿತ ಉಂಟಾಗದ ರೀತಿಯಲ್ಲಿ ತಾಂತ್ರಿಕ ವರದಿ ತಯಾರಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಶಾಸಕರು ತಾಕೀತು ಮಾಡಿದರು. ಈ ಸಂದರ್ಭದಲ್ಲಿ ಲೋಕೋಪ ಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಹರ್ಷ, ಎಇಇ ರಾಜು ಉಪಸ್ಥಿತರಿದ್ದರು.

Translate »