ರಾಜ್ಯ ಬಿಜೆಪಿ ಆಡಳಿತದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ
ಮೈಸೂರು

ರಾಜ್ಯ ಬಿಜೆಪಿ ಆಡಳಿತದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ

June 20, 2021

ಮೈಸೂರು,ಜೂ.19(ಪಿಎಂ)- ಬಿಜೆಪಿ ಯವರಿಗೆ ಅಧಿಕಾರ ಮುಖ್ಯವೇ ಹೊರತು, ಜನತೆ ಸಂಕಷ್ಟಕ್ಕೆ ಸ್ಪಂದಿಸುವುದು ಬೇಕಿಲ್ಲ. ರಾಜ್ಯ ಬಿಜೆಪಿ ಆಡಳಿತದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಷಾರ ನಡೆಯುತ್ತಿದ್ದು, ಮುಖ್ಯಮಂತ್ರಿ ಗಳ ವಿರುದ್ಧವೇ ಅವರ ಪಕ್ಷದವರೇ ನೇರ ಆರೋಪ ಮಾಡಿದರೂ ಕ್ರಮ ಕೈಗೊಳ್ಳುವ ಶಕ್ತಿ ಬಿಜೆಪಿ ವರಿಷ್ಠರಿಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಮಾಜಿ ಸಂಸದ ಆರ್.ಧ್ರುವನಾರಾಯಣ್ ವಾಗ್ದಾಳಿ ನಡೆಸಿದರು.
ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಯವರ ಜನ್ಮದಿನದ ಅಂಗವಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಶನಿವಾರ ಹಮ್ಮಿ ಕೊಂಡಿದ್ದ ಬಡ ಮಹಿಳೆಯರಿಗೆ ಅಡುಗೆ ಎಣ್ಣೆ ಒಳಗೊಂಡಂತೆ ದಿನಸಿ ಕಿಟ್ ವಿತರಣೆ ಹಾಗೂ ಬಡ ಮಕ್ಕಳಿಗೆ ಉಚಿತ ಹೆಲ್ತ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಜನರ ಜೀವ ಉಳಿಸಬೇಕಿದ್ದ ಸರ್ಕಾರ ದೊಡ್ಡ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಇದು ದೊಡ್ಡ ದುರಂತ. ಬಿಜೆಪಿ ಪಕ್ಷದವರೇ ಆದ ಪರಿಷತ್ ಸದಸ್ಯ ಎ.ಹೆಚ್.ವಿಶ್ವನಾಥ್ ನೇರ ವಾಗಿ ಮುಖ್ಯಮಂತ್ರಿಗಳ ಕುಟುಂಬದ ವಿರುದ್ಧ 2 ಸಾವಿರ ಕೋಟಿ ರೂ. ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಕೋವಿಡ್ ಸಮಯ ದಲ್ಲಿ ಬಿಜೆಪಿ ನಾಯಕರು ಪರಸ್ಪರ ಕೆಸರೆರ ಚಾಟದಲ್ಲಿ ತೊಡಗಿದ್ದು, ಶ್ರೀರಾಮನ ಭಕ್ತರು ಎಂದು ಹೇಳಿ ಕೊಳ್ಳುವ ಇವರಿಗೆ ನಾಚಿಕೆ ಯಾಗಬೇಕು ಎಂದು ಕಿಡಿಕಾರಿದರು.

ರಾಹುಲ್‍ಗೆ ಪ್ರಧಾನಿಯಾಗುವ ಅರ್ಹತೆ ಇದೆ: ದೇಶದ ಪ್ರಧಾನಿಯಾಗುವ ಎಲ್ಲಾ ಅರ್ಹತೆಯನ್ನು ರಾಹುಲ್ ಗಾಂಧಿಯವರು ಹೊಂದಿದ್ದಾರೆ. ಆದರೆ ಅವರು ಅಧಿಕಾರ ಕ್ಕಾಗಿ ಎಂದೂ ಆಸೆ ಪಟ್ಟವರಲ್ಲ. ಅವರು ಮತ್ತೆ ಎಐಸಿಸಿ ಅಧ್ಯಕ್ಷರಾಗಲಿ ಎಂದು ಆರ್.ಧ್ರುವನಾರಾಯಣ್ ಆಶಿಸಿದರು.
2004ರಿಂದ ರಾಹುಲ್ ಗಾಂಧಿಯವರು 4 ಬಾರಿ ಸತತವಾಗಿ ಸಂಸದರಾಗಿ ಆಯ್ಕೆ ಯಾಗುತ್ತಿದ್ದಾರೆ. ಸಂಸದರಾಗಿ ತಮ್ಮದೇ ವಿಶಿಷ್ಟ ಕೊಡುಗೆಯನ್ನೂ ಕೊಡುತ್ತಿದ್ದಾರೆ. ಅವರ ಜೊತೆಯಲ್ಲಿ 10 ವರ್ಷಗಳ ಕಾಲ ಸಂಸದನಾಗಿ ಸೇವೆ ಸಲ್ಲಿಸುವ ಅವಕಾಶ ನನಗೆ ಸಿಕ್ಕಿತ್ತು. ಅವರು ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ ಎಂದರು.

ರಾಹುಲ್ ಗಾಂಧಿಯವರು ಬಿಳಿಗಿರಿ ರಂಗನಬೆಟ್ಟಕ್ಕೆ ಬಂದಿದ್ದು ಅವರ ಮೊಟ್ಟ ಮೊದಲ ರಾಜ್ಯ ಪ್ರವಾಸವಾಗಿತ್ತು. ಆಗ ನಾನು ಕೊಳ್ಳೇಗಾಲ ಕ್ಷೇತ್ರದ ಶಾಸಕನಾಗಿದ್ದೆ. ಬಿಳಿಗಿರಿರಂಗನಬೆಟ್ಟದ ಆದಿವಾಸಿಗಳೊಂ ದಿಗೆ ರಾಹುಲ್ ಗಾಂಧಿಯವರು ಸಮಾ ಲೋಚನೆ ನಡೆಸಿದ್ದರು. ಈ ಪ್ರವಾಸ ಬಳಿಕ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಗಮನ ಸೆಳೆದು ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಕಾರಣೀಭೂತರಾದರು. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ದೇಶದ ಕೆಲವೇ ಜಿಲ್ಲೆಗಳಿಗೆ ಸೀಮಿತ ವಾಗಿದ್ದನ್ನು ದೇಶದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲೂ ಸಂಸದರ ಮೂಲಕ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಗಮನ ಸೆಳೆದು ಯಶಸ್ವಿಯಾದರು. ಎಂದೂ ಅಧಿ ಕಾರಕ್ಕೆ ಆಸೆ ಪಡೆದೇ ಜನಪರ ಕಾರ್ಯ ಕ್ರಮಗಳ ಕಾರ್ಯಗತಗೊಳಿಸಲು ರಾಹುಲ್ ಗಾಂಧಿ ಶ್ರಮಿಸಿದ್ದಾರೆ. ಅವರು ಅಧಿಕಾರ ಬೇಕೆಂದಿದ್ದರೆ, ಮಂತ್ರಿಗಳಾಗುತ್ತಿದ್ದರು ಎಂದರು.

ಕೋವಿಡ್ ಮೊದಲ ಮತ್ತು ಎರಡನೇ ಅಲೆಯಲ್ಲಿ ಕಾಂಗ್ರೆಸ್ ಸಾಕಷ್ಟು ಸೇವಾ ಕಾರ್ಯಕ್ರಮಗಳ ಮೂಲಕ ಜನತೆ ಸಂಕಷ್ಟಕ್ಕೆ ಸ್ಪಂದಿಸಿದೆ. ಪಕ್ಷದ ಶಾಸಕರು, ಮಾಜಿ ಶಾಸಕರು, ಪಕ್ಷದ ಮುಖಂಡರು ನಿರಂತರವಾಗಿ ಸೇವಾ ಕಾರ್ಯಕ್ರಮ ನಡೆ ಸುತ್ತಿದ್ದಾರೆ. ರಾಜ್ಯಾದ್ಯಂತ 224 ವಿಧಾನ ಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಈ ಸಂದರ್ಭದಲ್ಲಿ ಜನತೆ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.

ಶಾಸಕರಾದ ಹೆಚ್.ಪಿ.ಮಂಜುನಾಥ್, ಅನಿಲ್ ಚಿಕ್ಕಮಾದು, ಎಂಎಲ್‍ಸಿ ಧರ್ಮ ಸೇನ, ಮಾಜಿ ಶಾಸಕರಾದ ವಾಸು, ಎಂ.ಕೆ. ಸೋಮಶೇಖರ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಡಾ.ಪುಷ್ಪಾ ಅಮರನಾಥ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ ಕುಮಾರ್ ಮತ್ತಿತರರು ಹಾಜರಿದ್ದರು.

Translate »