ಕಡೇ ಶ್ರಾವಣ ಶನಿವಾರ: ದೇವಾಲಯದಲ್ಲಿ ವಿಶೇಷ ಪೂಜೆ
ಚಾಮರಾಜನಗರ

ಕಡೇ ಶ್ರಾವಣ ಶನಿವಾರ: ದೇವಾಲಯದಲ್ಲಿ ವಿಶೇಷ ಪೂಜೆ

September 9, 2018

ಚಾಮರಾಜನಗರ: ಕಡೆಯ ಶ್ರಾವಣ ಶನಿವಾರದ ಅಂಗವಾಗಿ ಜಿಲ್ಲಾದಂತ್ಯ ಶನಿವಾರ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ಜರುಗಿತ್ತು. ಬೆಳಿಗ್ಗೆಯಿಂದಲೇ ಸಾರ್ವಜನಿಕರು ದೇವಾ ಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.

ನಗರದ ಚಾಮರಾಜೇಶ್ವರಸ್ವಾಮಿ ದೇವ ಸ್ಥಾನ, ಕೊಳದಬೀದಿ ಗಣಪತಿ, ಆಂಜ ನೇಯ ಸ್ವಾಮಿ, ಆದಿಶಕ್ತಿ, ವೀರಭದ್ರೇಶ್ವರ ಸ್ವಾಮಿ, ಮಂಟೇಸ್ವಾಮಿ ದೇವಸ್ಥಾನದಲ್ಲಿ ಹಾಗೂ ಮಲೆಮಹದೇಶ್ವರಸ್ವಾಮಿ ಬೆಟ್ಟ, ಬಿಳಿಗಿರಿರಂಗನಾಥ ಸ್ವಾಮಿ ಬೆಟ್ಟ, ಸೇರಿ ದಂತೆ ವಿವಿಧ ಪ್ರಸಿದ್ಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು.ತಾಲೂಕಿನ ಅಮಚವಾಡಿ ಗ್ರಾಮದ ಚನ್ನಪ್ಪಪುರ ಮಾರ್ಗದಲ್ಲಿರುವ ಶ್ರೀ ಹೆಬ್ಬಾಳ್ ಶನೇಶ್ವರಸ್ವಾಮಿ ದೇವಸ್ಥಾನದಲ್ಲಿ ಕೊಂಡೋತ್ಸವ ನಡೆಯಿತು. ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.

ಗುಂಡ್ಲುಪೇಟೆ ವರದಿ(ಸೋಮ್.ಜಿ): ನಾಡಿನ ಪ್ರಸಿದ್ಧ ಪುಣ್ಯ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಶ್ರಾವಣ ಮಾಸದ ಕೊನೆಯ ಶನಿವಾರದ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತ ಬಂದು ಶ್ರೀ ಗೋಪಾಲಸ್ವಾಮಿಯ ದರ್ಶನ ಪಡೆದರು.

ತಾಲೂಕಿನ ಬಂಡೀಪುರ ಹುಲಿ ಯೋಜನೆಯ ಸೂಕ್ಷ್ಮ ಪರಿಸರ ವಲಯಕ್ಕೆ ಸೇರಿದ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರವನ್ನು ನಿಷೇಧಿಸಿದ್ದರಿಂದ ವಿವಿಧ ವಾಹನಗಳಲ್ಲಿ ಆಗಮಿಸಿದ ಸಾವಿರಾರು ಭಕ್ತರು ಬೆಟ್ಟದ ತಪ್ಪಲಿನಲ್ಲಿರುವ ಅರಣ್ಯ ಇಲಾಖೆಯ ಚೆಕ್‍ಪೋಸ್ಟ್ ನ ಸಮೀಪದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ಅಲ್ಲಿಂದ ವಿಶೇಷ ಬಸ್‍ಗಳಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಪ್ರತಿ ವರ್ಷದಂತೆ ಈ ಬಾರಿಯೂ ಸಹ ಶ್ರಾವಣ ಶನಿವಾರದ ಪ್ರಯುಕ್ತ ಹಿಮ ವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಭಕ್ತರ ಸಂಖ್ಯೆ ಹೆಚ್ಚಾಗಿದ್ದರಿಂದ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಿಂದ 30 ಬಸ್ ಮತ್ತು ಬೆಟ್ಟದ ತಪ್ಪಲಿನಿಂದ 5 ಮಿನಿ ಬಸ್‍ಗಳ ಸೌಲಭ್ಯ ಕಲ್ಪಿಸಲಾಗಿತ್ತು. ಆದರೂ, ಭsಕ್ತರು ಹೆಚ್ಚಿನ ಸಂಖ್ಯೆ ಬಂದ ಹಿನ್ನೆಲೆಯಲ್ಲಿ ಪಟ್ಟಣದ ಬಸ್ ನಿಲ್ದಾಣ ಹಾಗೂ ಬೆಟ್ಟದ ತಪ್ಪಲಿ ನಲ್ಲಿ ಉದ್ದನೆಯ ಸರದಿ ಸಾಲು ಸೃಷ್ಟಿಯಾಗಿತ್ತು.

ಉದ್ದನೆಯ ಕ್ಯೂ: ಬೆಟ್ಟದ ಮೇಲಿರುವ ಹಿಮವದ್ ಗೋಪಾಲಸ್ವಾಮಿ ದೇವಾಲ ಯದ ಮುಂಭಾಗವೂ ಸಹ ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ಗೋಪಾಲಸ್ವಾಮಿಯ ದರ್ಶನ ಪಡೆದರು.

ವಿಶೇಷ ಅಲಂಕಾರ: ಕೊನೆಯ ಶ್ರಾವಣ ಶನಿವಾರ ಹಿನ್ನೆಲೆಯಲ್ಲಿ ದೇವಾಲಯವನ್ನು ವಿವಿಧ ಪುಷ್ಪಗಳಿಂದ ಮತ್ತು ತಳಿರು ತೋರ ಣಗಳಿಂದ ಸಿಂಗಾರಗೊಳಿಸಲಾಗಿತ್ತು. ಪ್ರಧಾನ ಅರ್ಚಕ ಗೋಪಾಲಕೃಷ್ಣಭಟ್ ಅವರ ನೇತೃತ್ವದಲ್ಲಿ ವೇಣುಗೋಪಾಲ ಸ್ವಾಮಿ ವಿಶೇಷ ಅಲಂಕಾರ ಮತ್ತು ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗಿತ್ತು.

ತಾಲೂಕಿನ ತೆರಕಣಾಂಬಿ ಸಮೀಪದ ಹುಲುಗಿನಮರಡಿ ವೆಂಕಟರಮಣಸ್ವಾಮಿ ಬೆಟ್ಟಕ್ಕೂ ಸಹ ಅಧಿಕ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದರು.

ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ: ಗುಂಡ್ಲುಪೇಟೆ ಪಟ್ಟಣದ ಹೊರವಲಯದಲ್ಲಿರುವ ಕೆಬ್ಬೇಕಟ್ಟೆ ಶನೇಶ್ವರ ದೇವಸ್ಥಾನ ದಲ್ಲಿ ಕೊನೆಯ ಶ್ರಾವಣ ಶನಿವಾರದ ಹಿನ್ನೆ ಲೆಯಲ್ಲಿ ವಿಶೇಷ ಪೂಜೆ ಮತ್ತು ಅನ್ನ ಸಂತ ರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಭಕ್ತರುಗಳು ದೇವರ ದರ್ಶನ ಪಡೆದರು.

ದೇವಾಲಯವನ್ನು ವಿದ್ಯುತ್ ದೀಪಗಳಿಂದ ಮತ್ತು ತಳಿರು ತೋರಣಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ದೇವಾಲಯದ ಒಳಭಾಗವನ್ನು ಅಲಂಕಾರಿಕ ಪುಷ್ಪಗಳಿಂದ ಸಿಂಗರಿಸಲಾಯಿತು. ದೇವರ ದರ್ಶನಕ್ಕೆ ಬಂದ ಸಾವಿರಾರು ಮಂದಿ ಭಕ್ತರಿಗೆ ಪಂಕ್ತಿ ಭೋಜನ ಮಾಡಲಾಗಿತ್ತು.

Translate »