ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ
ಮೈಸೂರು

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ

November 12, 2019

ಮುಂಬೈ, ನ.11- ಖ್ಯಾತ ಗಾಯಕಿ ಲತಾಮಂಗೇಶ್ಕರ್ ಅವರು ಉಸಿ ರಾಟದ ಸಮಸ್ಯೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿ ದ್ದಾರೆ. ಸೆ.28ಕ್ಕೆ 90ನೇ ವರ್ಷ ವಸಂ ತಕ್ಕೆ ಕಾಲಿಟ್ಟಿದ್ದ ಲತಾಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಬಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವು ದಾಗಿ ವೈದ್ಯರು ತಿಳಿಸಿದ್ದಾರೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಲತಾ ಮಂಗೇಶ್ವರ್ ಅವರು ಧ್ವನಿ ನೀಡಿದ್ದು, ಭಾರತದ ಅತ್ಯುನ್ನತ ಭಾರತ ರತ್ನ ಪ್ರಶಸ್ತಿಯನ್ನು 2001ರಲ್ಲಿ ಪಡೆದಿದ್ದಾರೆ. ಒಟ್ಟಾರೆ ವಿವಿಧ ಭಾಷೆಯಲ್ಲಿ ಲತಾ ಮಂಗೇಶ್ಕರ್ ಅವರು 36 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದ್ದಾರೆ. ಅವರಿಗೆ 3 ರಾಷ್ಟ್ರೀಯ ಪ್ರಶಸ್ತಿ, 6 ಫಿಲ್ಮ ಫೇರ್ ಪ್ರಶಸ್ತಿ, ಪದ್ಮ ವಿಭೂಷಣ್, ಪದ್ಮ ಭೂಷಣ್, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಲಭಿಸಿದೆ. ಲತಾ ಮಂಗೇಶ್ಕರ್ ಅವರ ತಂದೆ ದೀನಾನಾಥ್ ಮಂಗೇಶ್ಕರ್ ಕೂಡ ಗಾಯಕರಾಗಿದ್ದು, ತಾಯಿ ಕೂಡ ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು. ಪರಿಣಾಮ ಅವರಿಗೆ ಗಾಯನ ಸಹಜವಾಗಿ ಒಲಿದು ಬಂದಿತ್ತು. 60 ದಶಕದಲ್ಲಿ ಲತಾಮಂಗೇಶ್ಕರ್ ಅವರು ಯಶಸ್ಸಿನ ಉತ್ತುಂಗದಲ್ಲಿದ್ದರು. ಇವರು ಹಾಡಿರುವ ಹಲವು ಡ್ಯುಯೆಟ್ ಹಾಡುಗಳು ಇಂದಿಗೂ ಸೂಪರ್ ಹಿಟ್ ಸಾಲಿನಲ್ಲಿ ನಿಂತಿವೆ.

Translate »