ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಆರೋಗ್ಯ, ನೈರ್ಮಲ್ಯ ಕುರಿತ ವಸ್ತು ಪ್ರದರ್ಶನಕ್ಕೆ ಚಾಲನೆ
ಮೈಸೂರು

ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಆರೋಗ್ಯ, ನೈರ್ಮಲ್ಯ ಕುರಿತ ವಸ್ತು ಪ್ರದರ್ಶನಕ್ಕೆ ಚಾಲನೆ

August 5, 2019

ಮೈಸೂರು, ಆ.4(ಆರ್‍ಕೆಬಿ)- ಮೈಸೂ ರಿನ ಕೆಎಸ್‍ಅರ್‍ಟಿಸಿ ಬಸ್ ನಿಲ್ದಾಣದಲ್ಲಿ ಜನಸಾಮಾನ್ಯರಿಗೆ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಾಹಿತಿ ನೀಡುವ ಫಲಕಗಳ 2 ದಿನಗಳ ವಸ್ತು ಪ್ರದರ್ಶನಕ್ಕೆ ಭಾನುವಾರ ಚಾಲನೆ ನೀಡಲಾಯಿತು.

ವಾರ್ತಾ ಇಲಾಖೆಯೊಂದಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್‍ರಾಜ್ ಇಲಾಖೆ, ಆರೋಗ್ಯ ಇಲಾಖೆ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ವಸ್ತು ಪ್ರದರ್ಶನದಲ್ಲಿ ಮಹಿಳೆಯರು, ಮಕ್ಕಳ ಆರೋಗ್ಯ ಫಲಕಗಳು ಮಾಹಿತಿ ನೀಡಲಿವೆ.

ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮೈಸೂರು ಜಿಪಂ ಸಿಇಓ ಕೆ.ಜ್ಯೋತಿ, ರಾಜ್ಯದಲ್ಲಿ ಪೂರ್ವ ಮುಂಗಾರು ಆರಂಭವಾಗಿರುವುದರಿಂದ ಬದಲಾದ ವಾತಾವರಣದಲ್ಲಿ ಸಾರ್ವಜನಿ ಕರ ಆರೋಗ್ಯದಲ್ಲಿ ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ ಇದೆ. ಹೀಗಾಗಿ ಆರೋಗ್ಯ ಮತ್ತು ನೈರ್ಮಲ್ಯ ಕಾರ್ಯಕ್ರಮಗಳಿಗೆ ಸಂಬಂ ಧಿಸಿದಂತೆ ವಸ್ತು ಪ್ರದರ್ಶನ ಏರ್ಪಡಿಸ ಲಾಗಿದೆ. ಸಾರ್ವಜನಿಕರು ತಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದು ಹೆಚ್ಚಿನ ಜಾಗೃತಿ ವಹಿಸುವುದು ಅತ್ಯಗತ್ಯ ಎಂದರು.

ವಸ್ತುಪ್ರದರ್ಶನ ಮಾಹಿತಿ ಫಲಕಗಳಲ್ಲಿ ನೈರ್ಮಲ್ಯದ ಬಗ್ಗೆ ಒಣ ಕಸ ಹಾಗೂ ಹಸಿ ಕಸಗಳ ವಿಲೇವಾರಿ, ಸ್ವಚ್ಛತೆ ಮಾಹಿತಿ, ಮಕ್ಕಳು, ತಾಯಂದಿರು, ಗರ್ಭಿಣಿಯರ ಆರೋಗ್ಯ ಕಾಪಾಡಲು ಮಾಹಿತಿ ಮತ್ತು ಡೆಂಗ್ಯೂ, ಚಿಕುನ್‍ಗುನ್ಯಾ ಕಾಯಿಲೆಗಳ ಹರಡು ವಿಕೆ. ಅದಕ್ಕೆ ಕೈಗೊಳ್ಳಬೇಕಾದ ಮುಂಜಾ ಗ್ರತಾ ಕ್ರಮಗಳ ಕುರಿತಂತೆ ಮಾಹಿತಿಗಳನ್ನು ನೀಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕ ಟೇಶ್ ಮಾತನಾಡಿ, ಡೆಂಗ್ಯೂ ಹಾಗೂ ಚಿಕುನ್ ಗುನ್ಯಾ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊ ಳ್ಳಲು ಆರೋಗ್ಯ ಹಾಗೂ ನೈರ್ಮಲ್ಯ ಕಾಪಾ ಡುವ ಹಲವಾರು ಮಾಹಿತಿಗಳನ್ನು ವಸ್ತು ಪ್ರದರ್ಶನದಲ್ಲಿ ಒದಗಿಸಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ರವಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಪ್ರಕಾಶ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವೇಣು ಗೋಪಾಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಆರ್.ರಾಜು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಉದಯಕುಮಾರ್, ರಾಜೇಶ್ವರಿ ಇದ್ದರು.

Translate »