ಮಡಿವಾಳರು, ಕ್ಷೌರಿಕರು, ಆಟೋ, ಟ್ಯಾಕ್ಸಿ ಚಾಲಕರು, ಕಟ್ಟಡ ಕಾರ್ಮಿಕರಿಗೆ ತಲಾ 5000 ರೂ. ನೆರವು
ಮೈಸೂರು

ಮಡಿವಾಳರು, ಕ್ಷೌರಿಕರು, ಆಟೋ, ಟ್ಯಾಕ್ಸಿ ಚಾಲಕರು, ಕಟ್ಟಡ ಕಾರ್ಮಿಕರಿಗೆ ತಲಾ 5000 ರೂ. ನೆರವು

May 7, 2020

ಬೆಂಗಳೂರು, ಮೇ 6(ಕೆಎಂಶಿ)- ಕೋವಿಡ್‍ನಿಂದ ಸಂಕ ಷ್ಟಕ್ಕೆ ಸಿಲುಕಿರುವ ಮಡಿವಾಳರು, ಕ್ಷೌರಿಕ, ಆಟೋ ಚಾಲಕರು, ಕಟ್ಟಡ ಕಾರ್ಮಿಕರು ಹಾಗೂ ಕ್ಯಾಬ್ ಚಾಲಕರಿಗೆ ಒಂದು ಬಾರಿಗೆ ಅನ್ವಯವಾಗುವಂತೆ ತಲಾ ಐದು ಸಾವಿರ ರೂ. ಸಹಾಯಧನವನ್ನು ಸರ್ಕಾರ ಘೋಷಣೆ ಮಾಡಿದೆ.

ಕಳೆದ ಒಂದೂವರೆ ತಿಂಗಳಿನಿಂದ ಲಾಕ್‍ಡೌನ್‍ನ ಪರಿ ಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದ ರಿಂದ ಎಲ್ಲ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿ ದ್ದಾರೆ. ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ಕಲ್ಪಿಸಲು 1610 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ಘೋಷಣೆ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ ಮುಖ್ಯ ಮಂತ್ರಿಯವರು ಇದೇ ಕಾಲಕ್ಕೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ವಿವಿಧ ಮದ್ಯಗಳ ಮೇಲೆ ಶೇ. 17ರಷ್ಟು ಅಬಕಾರಿ ಸುಂಕವನ್ನು ವಿಧಿಸಿದ್ದಾರೆ. ಒಂದೆಡೆ ಪರಿಹಾರ ನೀಡಿದರೆ, ಮತ್ತೊಂದೆಡೆ ಹೆಚ್ಚುವರಿಯಾಗಿ ಸುಮಾರು ಐದು ಸಾವಿರ ಕೋಟಿ ರೂ. ಆದಾಯವನ್ನು ಮದ್ಯ ಪ್ರಿಯರು ಸರ್ಕಾರಕ್ಕೆ ತಂದುಕೊಡಲಿದ್ದಾರೆ.

ಲಾಕ್‍ಡೌನ್‍ನಿಂದಾಗಿ ಎಲ್ಲ ದೇವಾಲಯಗಳು ಮುಚ್ಚಿ ರುವುದರಿಂದ ಹಬ್ಬ, ಮದುವೆ, ಸಭೆ-ಸಮಾರಂಭಗಳು ಹಾಗೂ ಮತ್ತಿತರ ಯಾವುದೇ ಕಾರ್ಯಕ್ರಮಗಳು ನಡೆಯದಿ ರುವುದರಿಂದ ಹೂವುಗಳ ಬೇಡಿಕೆ ಇಲ್ಲದೇ ಹೂವು ಬೆಳೆ ಗಾರರು ತಾವು ಬೆಳೆದಿರುವ ಎಲ್ಲ ಹೂವುಗಳನ್ನು ತಮ್ಮ ಹೊಲದಲ್ಲೇ ನಾಶ ಮಾಡುವ ಪರಿಸ್ಥಿತಿ ಉದ್ಭವಿಸಿದೆ.

ಒಟ್ಟಾರೆ 11687 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆದಿರುವ ಹೂವು ಗಳು ಮಾರಾಟವಾಗದೆ ರೈತರಿಗೆ ತುಂಬಾ ನಷ್ಟವಾಗಿದೆ. ಇದರಿಂದ ಎಲ್ಲ ರೀತಿಯ ಹೂವುಗಳ ಬೆಳೆದಿರುವ ರೈತ ರಿಗೆ ನೆರವಾಗಲು ನಮ್ಮ ಸರ್ಕಾರವು ಹೆಕ್ಟೇರ್‍ಗೆ ಗರಿಷ್ಠ 25,000 ರೂ.ಗಳಂತೆ ಪರಿಹಾರವನ್ನು ಘೋಷಿಸಿದೆ. ಈ ವರ್ಷ ರಾಜ್ಯದಲ್ಲಿ ತರಕಾರಿ ಮತ್ತು ಹಣ್ಣುಗಳ ಇಳುವರಿಯು ಉತ್ತಮವಾಗಿದೆ. ಆದರೆ ಕೋವಿಡ್-19ರಿಂದ ರಾಷ್ಟ್ರಾದ್ಯಂತ ಆಗಿರುವ ಲಾಕ್‍ಡೌನ್‍ನಿಂದಾಗಿ ರೈತರು ತಮ್ಮ ಬೆಳೆಗಳಿಗೆ ಸೂಕ್ತ ದರಗಳನ್ನು ಪಡೆಯಲು ಸಾಧ್ಯವಾಗಿಲ್ಲ. ನಷ್ಟಕ್ಕೆ ಒಳಗಾಗಿರುವ ತರಕಾರಿ ಹಾಗೂ ಹಣ್ಣು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಪ್ಯಾಕೇಜ್ ಅನ್ನು ಒಂದೆ ರಡು ದಿನಗಳಲ್ಲಿ ಘೋಷಣೆ ಮಾಡಲಾಗುವುದು ಎಂದರು.

ಕೋವಿಡ್-19 ರಿಂದಾಗಿ ರೈತರಷ್ಟೇ ಅಲ್ಲದೆ ಪಟ್ಟಣದ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಡಿವಾಳರು ಹಾಗೂ ಕ್ಷೌರಿಕರ ವೃತ್ತಿಯಲ್ಲಿ ತೊಡಗಿರುವವರು ಒಂದೂವರೆ ತಿಂಗಳಿಗೆ ಮೇಲ್ಪಟ್ಟು ತಮ್ಮ ಕಸುಬನ್ನು ನಡೆಸಲಾಗದೇ ತಮ್ಮ ದೈನಂದಿನ ಆದಾಯವನ್ನು ಕಳೆದುಕೊಂಡಿದ್ದಾರೆ. ನಮ್ಮ ರಾಜ್ಯದಲ್ಲಿರುವ ಅಂದಾಜು 60,000 ಮಡಿವಾಳರು, 230000 ಕ್ಷೌರಿಕರಿಗೆ ತಲಾ 5000 ರೂ.ಗಳನ್ನು ಒಂದು ಬಾರಿ ಪರಿಹಾರವಾಗಿ ನೀಡಲಾಗುವುದು. ಹಾಗೆಯೇ ಆಟೋ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರು ದೈನಂದಿನ ಉದ್ಯೋಗ ವನ್ನು ನಡೆಸಲಾಗದೇ ತಮ್ಮ ಆದಾಯವನ್ನು ಕಳೆದುಕೊಂಡಿದ್ದಾರೆ. ನಮ್ಮ ರಾಜ್ಯದಲ್ಲಿ ಇರುವ ಇಂತಹ 7,75,000 ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ 5000 ರೂಗಳನ್ನು ನೀಡಲಾಗುತ್ತಿದೆ. ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳನ್ನು ನಡೆಸುವ ಉದ್ದಿಮೆದಾರರು ತಮ್ಮ ಉದ್ದಿಮೆಗಳನ್ನು ತೆರೆಯಲಾಗದೆ ಹಾಗೂ ತಮ್ಮ ಉತ್ಪನ್ನಗಳನ್ನು ಸಾಗಿಸಿ ಮಾರಾಟ ಮಾಡಲಾಗದೆ ನಷ್ಟವನ್ನು ಅನುಭವಿಸಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ವಹಿವಾಟು ಚೇತರಿಕೆಯಾಗಲು ಕೆಲವು ತಿಂಗಳ ಸಮಯ ಬೇಕಾಗಿರುವುದರಿಂದ ಇವರಿಗೆ ಸರಕಾರ ನೆರವು ನೀಡುವುದು ಅನಿವಾರ್ಯವಾಗಿದೆ. ಆದ್ದರಿಂದ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ವಿದ್ಯುತ್ ಬಿಲ್ಲಿನ ಫಿಕ್ಸ್ಡ್ ಚಾರ್ಜ್‍ನ್ನು 2 ತಿಂಗಳ ಅವಧಿಗೆ ಪೂರ್ತಿಯಾಗಿ ಮನ್ನಾ ಮಾಡಲಾಗುವುದು. ಹಾಗೆಯೇ ಬೃಹತ್ ಕೈಗಾರಿಕೆಗಳಿಗೆ ಅವರು ವಿದ್ಯುತ್ ಬಿಲ್ಲಿನ ಫಿಕ್ಸ್ಡ್ ಚಾರ್ಜ್‍ನ ಪಾವತಿಯನ್ನು ಎರಡು ತಿಂಗಳ ಅವಧಿಗೆ ಯಾವುದೇ ಬಡ್ಡಿ ಅಥವಾ ದಂಡ ಇಲ್ಲದೇ ಬಡ್ಡಿ ರಹಿತವಾಗಿ ಮುಂದೂಡಲಾಗುವುದು. ಎಲ್ಲ ಪ್ರವರ್ಗದ ಗ್ರಾಹಕರು ನಿಗದಿತ ಸಮಯದೊಳಗೆ ವಿದ್ಯುತ್ ಬಿಲ್ಲಿನ ಮೊತ್ತವನ್ನು ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹ ರಿಯಾಯಿತಿಯನ್ನು ನೀಡಲಾಗಿದೆ. ವಿಳಂಬ ಪಾವತಿಗಾಗಿ ವಿದ್ಯುತ್ ಬಿಲ್ಲಿನ ಮೊತ್ತದ ಮೇಲೆ ವಿಧಿಸುವ ಬಡ್ಡಿಯನ್ನು ಕಡಿತಗೊಳಿಸಲಾಗಿದೆ.

ವಿದ್ಯುತ್ ಬಿಲ್ಲಿನ ಮೊತ್ತವನ್ನು ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹಧನ ನೀಡಲಾ ಗುವುದು. ಕಂದಾಯ ಬಾಕಿ ಮೊತ್ತವನ್ನು ಕಂತುಗಳಲ್ಲಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಕಂದಾಯ ಬಾಕಿ ಮೊತ್ತವನ್ನು ಪಾವತಿಸದಿರುವ ಗ್ರಾಹಕರಿಗೆ 30.06.2020 ರವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಿಲ್ಲ ಎಂದರು. ಈಗಾಗಲೇ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದ ನೇಕಾರರಿಗೆ ಲಾಕ್‍ಡೌನ್‍ನಿಂದಾಗಿ ಮತ್ತಷ್ಟು ನಷ್ಟ ಉಂಟಾಗಿದೆ. ಈಗಾಗಲೇ ಅವರಿಗೆ 109 ಕೋಟಿ ರೂ.ಗಳ ವೆಚ್ಚದಲ್ಲಿ `ನೇಕಾರರ ಸಾಲ ಮನ್ನಾ ಯೋಜನೆ’ಯನ್ನು ಘೋಷಿಸಿದೆ. ಇದಲ್ಲದೆ `ನೇಕಾರರ ಸಮ್ಮಾನ್ ಯೋಜನೆ’ ಎಂಬ ಹೊಸ ಯೋಜನೆ ಯನ್ನು ಘೋಷಣೆ ಮಾಡಿದ್ದೇನೆ. ಇದರಡಿ ನಮ್ಮ ರಾಜ್ಯದಲ್ಲಿರುವ 53 ಸಾವಿರ ಕೈಮಗ್ಗ ನೇಕಾರ ರಿಗೆ ಪ್ರತಿ ವರ್ಷ 2000 ರೂ.ಗಳಂತೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು. ರಾಜ್ಯದಲ್ಲಿರುವ 15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರ ಪೈಕಿ ಈಗಾಗಲೇ 11.80 ಲಕ್ಷ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ 2000 ರೂ.ಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗಿದೆ. ಇನ್ನುಳಿದ 4 ಲಕ್ಷ ಕಟ್ಟಡ ಕಾರ್ಮಿಕರಿಗೆ ಅವರವರ ಬ್ಯಾಂಕ್ ಖಾತೆಯ ವಿವರಗಳು ದೊರೆತ ನಂತರ 2,000 ರೂ.ಗಳನ್ನು ವರ್ಗಾಯಿಸಲು ಕ್ರಮ ವಹಿಸಲಾಗುವುದು. ಮುಂದುವರೆದು ಈ ಎಲ್ಲ ಕಟ್ಟಡ ಕಾರ್ಮಿಕರಿಗೆ ಈಗಾಗಲೇ ನೀಡಿರುವ 2,000 ರೂ.ಗಳ ಜೊತೆಗೆ ಹೆಚ್ಚುವರಿಯಾಗಿ 3,000 ರೂ.ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು ಎಂದು ತಿಳಿಸಿದರು.

Translate »