ಶಾಸಕ ತನ್ವೀರ್ ಸೇಠ್ ಅವರನ್ನು ಎಐಸಿಸಿಗೆ ನೇಮಕ ಮಾಡುವಂತೆ ಆಗ್ರಹ
ಮೈಸೂರು

ಶಾಸಕ ತನ್ವೀರ್ ಸೇಠ್ ಅವರನ್ನು ಎಐಸಿಸಿಗೆ ನೇಮಕ ಮಾಡುವಂತೆ ಆಗ್ರಹ

January 29, 2021

ಮೈಸೂರು,ಜ.28-ಮಾಜಿ ಸಚಿವರು, ಶಾಸಕರೂ ಆದ ತನ್ವೀರ್ ಸೇಠ್ ಅವರನ್ನು ಎಐಸಿಸಿ ಪದಾಧಿಕಾರಿಗಳನ್ನಾಗಿ ನೇಮಕ ಮಾಡುವಂತೆ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್‍ನ ಕಾರ್ಯಾಧ್ಯಕ್ಷ ಸೈಯದ್ ಫಾರೂಕ್ ಒತ್ತಾ ಯಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ತನ್ವೀರ್ ಸೇಠ್ ಅವರು ಐದು ಬಾರಿ ವಿಧಾನಸಭಾ ಸದಸ್ಯರಾಗಿ, ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಕೆಪಿಸಿಸಿ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ಭಾಗದಲ್ಲಿ ಯಾರನ್ನೂ ಎಐಸಿಸಿ ಪದಾಧಿಕಾರಿಯನ್ನಾಗಿ ನೇಮಕ ಮಾಡಿಲ್ಲ. ಆದ್ದರಿಂದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತನ್ವೀರ್ ಸೇಠ್ ಅವರ ಸೇವೆಯನ್ನು ಪರಿಗಣಿಸಿ ಎಐಸಿಸಿ ಪದಾಧಿಕಾರಿಯನ್ನಾಗಿ ನೇಮಕ ಮಾಡುವಂತೆ ಆಗ್ರಹಿಸಿದ್ದಾರೆ.

Translate »