ಲಾಕ್‍ಡೌನ್ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ
News

ಲಾಕ್‍ಡೌನ್ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ

November 30, 2021

ಬೆಂಗಳೂರು,ನ.29(ಕೆಎಂಶಿ)-ಒಮಿಕ್ರಾನ್ ಸೋಂಕು ವೇಗ ವಾಗಿ ಹರಡುತ್ತದೆ. ಆದರೆ ಇದರಿಂದ ಯಾವುದೇ ದೊಡ್ಡ ಪ್ರಮಾಣದ ಹಾನಿ ಇಲ್ಲ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಲಾಕ್‍ಡೌನ್ ಜಾರಿಗೊಳಿಸುವ ಪರಿಸ್ಥಿತಿ ಎದು ರಾಗಿಲ್ಲ, ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಆರೋಗ್ಯ ಇಲಾಖೆ ಸೋಂಕಿನ ಬಗ್ಗೆ ಇನ್ನೊಂ ದರೆಡು ದಿನಗಳಲ್ಲಿ ಪೂರ್ಣ ಮಾಹಿತಿ ನೀಡಲಿದೆ. ನಂತರ ರಾಜ್ಯ ಸರ್ಕಾರ ಮತ್ತಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

ಕೊರೊನಾ ಮೂಲ ಸೋಂಕಿಗೂ ಒಮಿಕ್ರಾನ್ ರೂಪಾಂ ತರಿಗೂ ರೋಗ ಲಕ್ಷಣಗಳಲ್ಲಿ ಭಾರಿ ವ್ಯತ್ಯಾಸವಿದೆ. ಹೊಸ ತಳಿಗೆ ತುತ್ತಾದವರಲ್ಲಿ ವಾಂತಿ, ತಲೆ ಸುತ್ತುವುದು, ವಿಪರೀತ ಸುಸ್ತು ಕಾಣಿ ಸುತ್ತದೆ, ಮೊದಲಿನಂತೆ ಶ್ವಾಸಕೋಶಕ್ಕೆ ಹಾನಿಯಾಗಿ ವಿವಿಧ ಅಂಗಾಂಗಳ ಮೇಲೆ ಯಾವುದೇ ದುಷ್ಪರಿಣಾಮ ಈ ಸೋಂಕಿ ನಿಂದ ಆಗುವುದಿಲ್ಲ. ನಾಲಿಗೆಗೆ ಆಹಾರದ ರುಚಿಯೂ ಇರಲಿದೆ.

ಆಫ್ರಿಕಾದಲ್ಲಿರುವ ನನ್ನ ವೈದ್ಯ ಸ್ನೇಹಿತರನ್ನು ಸಂಪರ್ಕಿಸಿ, ಈ ಸೋಂಕಿನ ಬಗ್ಗೆ ಮಾಹಿತಿ ಪಡೆದಾಗ ಒಮಿಕ್ರಾನ್ ಬಗ್ಗೆ ಗಾಬರಿ ಮತ್ತು ಅತಂಕಗೊಳ್ಳುವುದು ಅಗತ್ಯವಿಲ್ಲ ಎಂದಿದ್ದಾರೆ. ಈ ಸೋಂಕಿ ತರು ಸೌಮ್ಯ ರೋಗಲಕ್ಷಣ ಹೊಂದಿದ್ದು, ಆಸ್ಪತ್ರೆಗೆ ದಾಖಲಾಗದೆ, ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕೆಲವು ಅಪರಿಚಿತ ರೋಗ ಲಕ್ಷಣಗಳು ಈ ಸಾಂಕ್ರಾಮಿಕದಲ್ಲಿ ಕಂಡು ಬಂದರೂ, ಅವು ಸೌಮ್ಯ ಸ್ವರೂಪದ್ದಾಗಿರುತ್ತವೆ.
ಕೊರೊನಾ ಲಸಿಕೆ ಪಡೆದವರಿಗೆ ಈ ರೋಗ ತಟ್ಟುವುದಿಲ್ಲ ಎಂಬ ಮಾಹಿತಿ ಇದೆ. ಆದರೂ ಸಾರ್ವಜನಿಕರು ಎಚ್ಚರಿಕೆ ಮತ್ತು ಜಾಗ್ರತೆಯಿಂದ ಇರುವುದು ಒಳ್ಳೆಯದು ಎಂದರು.

ಹೊಸ ರೂಪಾಂತರಿ ಒಮಿಕ್ರಾನ್ ವೈರಾಣು ಸುಮಾರು 12 ದೇಶಗಳಲ್ಲಿ ಕಂಡುಬಂದಿದೆ. ಕಳೆದ 12-13 ದಿನಗಳಲ್ಲಿ ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ದೇಶಗಳಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇರಿಸಿ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಒಮಿಕ್ರಾನ್, ಹಿಂದೆ ನಾಲ್ಕು ದೇಶಗಳಲ್ಲಿ ಕಂಡುಬಂದಿತ್ತು. ಈಗ ಒಟ್ಟು 12 ದೇಶಗಳಲ್ಲಿ ಪತ್ತೆಯಾಗಿದೆ. ಆ ದೇಶಗಳಲ್ಲೂ ಹೈ ಅಲರ್ಟ್ ಮೂಲಕ ವಿದೇಶಿ ಪ್ರಯಾಣಿಕರ ಮೇಲೆ
ನಿಗಾ ಇರಿಸಲಾಗಿದೆ. ರಾಜ್ಯ ಸರ್ಕಾರ ಕೂಡ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ನಾಳೆ ಆರೋಗ್ಯ ಇಲಾಖೆಯಿಂದ ವಿಶೇಷ ಸಭೆ ನಡೆಯಲಿದ್ದು, ಎಲ್ಲಾ ಹಿರಿಯ ಅಧಿಕಾರಿಗಳು, ವೈದ್ಯರು, ತಾಂತ್ರಿಕ ಸಲಹಾ ಸಮಿತಿ ತಜ್ಞರು ಪಾಲ್ಗೊಳ್ಳ ಲಿದ್ದಾರೆ. ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಸರ್ಕಾರ ನೀಡುವ ಮಾರ್ಗಸೂಚಿ, ಅದರ ಪಾಲನೆ ಹೇಗಾಗಬೇಕು ಎಂಬುದರ ಬಗ್ಗೆ ಇಲ್ಲಿ ಚರ್ಚೆಯಾಗಲಿದೆ ಎಂದು ತಿಳಿಸಿದರು. ಕೋವಿಡ್ ನಿಂದ ಈಗಾಗಲೇ ಜನರು ನೊಂದಿದ್ದು, ಬಹಳ ನಷ್ಟ ಅನುಭವಿಸಿದ್ದಾರೆ. ಆದ್ದರಿಂದ ಜನರು ಆತಂಕಕ್ಕೆ ಒಳಗಾಗುವಂತೆ ಮಾಡಬಾರದು. ಈ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳು ತಪ್ಪು ಸುದ್ದಿ ಹರಡಬಾರದು. ಈಗ ಲಾಕ್ ಡೌನ್ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ. ಆ ಬಗ್ಗೆ ಹೆದರಿಸುವ ಕೆಲಸ ಆಗಬಾರದು. ಆದರೆ ವೈರಾಣು ಕುರಿತು ಜಾಗೃತಿ ಕಾರ್ಯಗಳು ಹೆಚ್ಚಾಗಿ ನಡೆಯಬೇಕು ಎಂದರು.

Translate »