ಕಾನೂನು ಉಲ್ಲಂಘಿಸಿದರೆ ಕಾನೂನು ಕ್ರಮ
ಮೈಸೂರು

ಕಾನೂನು ಉಲ್ಲಂಘಿಸಿದರೆ ಕಾನೂನು ಕ್ರಮ

December 27, 2018

ಮೈಸೂರು: ಕಾನೂನು-ಸುವ್ಯವಸ್ಥೆಗೆ ಭಂಗ ಬಾರದಂತೆ 2019ರ ಹೊಸ ವರ್ಷ ಆಚರಿ ಸುವಂತೆ ಮೈಸೂರು ನಗರ ಪೊಲೀಸ್ ಕಮೀ ಷ್ನರ್ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಹೊಸ ವರ್ಷಾಚರಣೆ ಹೆಸರಲ್ಲಿ ನಿಯಮ ಉಲ್ಲಂಘಿಸಿ ಬೇರೆಯವರಿಗೆ ತೊಂದರೆ ನೀಡು ವವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಡಿಸೆಂಬರ್ 31ರ ರಾತ್ರಿ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂತೋಷ ಕೂಟಗಳಲ್ಲಿ ಮಧ್ಯರಾತ್ರಿ 1 ಗಂಟೆಯೊಳಗೆ ಕಾರ್ಯ ಕ್ರಮ ಮುಗಿಸಬೇಕು. ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮದ್ಯ ಮಾರಾಟ ಮಾಡಬಾರದು. ಯುವಕರು, ವಿದ್ಯಾರ್ಥಿಗಳು ಅಂದು ರಾತ್ರಿ ರಸ್ತೆಗಳಲ್ಲಿ ಅಸಭ್ಯವಾಗಿ ವರ್ತಿಸಬಾರದು, ಧ್ವನಿವರ್ಧಕ ಕೇಂದ್ರಗಳನ್ನು ಅಳವಡಿಸಲು ಪೊಲೀಸ್ ಕಮೀಷ್ನರ್ ಕಚೇರಿಯಿಂದ ಅನುಮತಿ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.

ಸಾಂಸ್ಕøತಿಕ ಕಾರ್ಯಕ್ರಮದ ನೆಪದಲ್ಲಿ ಅಶ್ಲೀಲ, ಅರೆ ಬೆತ್ತಲೆ ನೃತ್ಯ ಅಥವಾ ಜೂಜಾಟ ನಿಷೇಧಿಸಲಾಗಿದೆ. ಸಾರ್ವಜನಿಕರನ್ನು ಬಲ ವಂತವಾಗಿ ನಿಲ್ಲಿಸಿ ಅವರ ಇಚ್ಛೆಗೆ ವಿರುದ್ಧವಾಗಿ ಶುಭ ಕೋರುವ ನೆಪದಲ್ಲಿ ಕಿರಿಕಿರಿ ಮಾಡುವುದು, ಅಸಭ್ಯವಾಗಿ ವರ್ತಿಸುವುದನ್ನು ತಡೆಯಲು ಕಾರ್ಯಪಡೆ ತಂಡ ರಚಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಕ್ರಮ ಜರುಗಿಸ ಲಾಗುವುದು ಎಂದು ಪೊಲೀಸ್ ಕಮೀಷ್ನರ್ ತಿಳಿಸಿದ್ದಾರೆ.
ವಾಹನಗಳ ವ್ಹೀಲಿಂಗ್, ಡ್ರಾಗ್ ರೇಸ್, ಕರ್ಕಶ ಶಬ್ದ ಮಾಡುವುದು, ಸಾರ್ವಜನಿಕರ ಮನೆ ಮುಂದೆ, ಹಾಸ್ಟೆಲ್, ವರ್ಕಿಂಗ್ ವುಮೆನ್ಸ್ ಹಾಸ್ಟೆಲ್‍ಗಳ ಅತಿಕ್ರಮ ಪ್ರವೇಶ ಮಾಡುವವರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ತಂಡ ಕ್ರಮ ಕೈಗೊಳ್ಳಲಿದೆ. ರಸ್ತೆಗಳಲ್ಲಿ ಬಾಟಲಿ ಒಡೆಯುವುದು, ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ರೀತಿಯಲ್ಲಿ ಪಟಾಕಿ ಸಿಡಿಸುವುದನ್ನು ನಿರ್ಬಂಧಿಸಲಾಗಿದೆ. ಡಿಸೆಂಬರ್ 31ರ ಸಂಜೆ 7 ಗಂಟೆ ನಂತರ ಚಾಮುಂಡಿಬೆಟ್ಟಕ್ಕೆ ಕೆಎಸ್‍ಆರ್‍ಟಿಸಿ ಬಸ್ಸು, ಚಾಮುಂಡಿಬೆಟ್ಟ ಗ್ರಾಮಸ್ಥರನ್ನು ಹೊರತುಪಡಿಸಿ ಬೇರೆಯವರ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ ಎಂದು ಪೊಲೀಸ್ ಕಮೀಷ್ನರ್ ಡಾ. ಎ. ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದ್ದಾರೆ.

Translate »