ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನು ಅರಿವು ಅಗತ್ಯ
ಚಾಮರಾಜನಗರ

ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನು ಅರಿವು ಅಗತ್ಯ

August 2, 2018

ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ವತಿಯಿಂದ ಚಂದಕವಾಡಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಮತಿ ವಿಶಾಲಾಕ್ಷಿ ಸಿ.ಜಿ, ಉತ್ತಮ ಸಮಾಜ ಮತ್ತು ಉತ್ತಮ ನಾಗರಿಕರಾಗಲು ಕಾನೂನು ಅರಿವು ಹೊಂದು ವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ, ನಮ್ಮ ನೆಲದ ಕಾನೂನನ್ನು ಗೌರವಿಸಬೇಕು. ನಮ್ಮ ಸಂವಿಧಾನ ಎಲ್ಲಾ ಕಾನೂನುಗಳಿಗೂ ಅಡಿ ಪಾಯವಾಗಿದ್ದು, ಅಂತಹ ಸಂವಿಧಾನದಲ್ಲಿ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಸಹ ನೀಡಿದೆ. ಅದನ್ನು ಪ್ರತಿಯೊಬ್ಬರು ಪಾಲಿಸುವ ಮೂಲಕ ಸುಂದರ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಕಡ್ಡಾಯವಾಗಿ ಕಾನೂನಿನ ಅರಿವನ್ನು ಹೊಂದಬೇಕು, ಎಲ್ಲರೂ ನಿಮ್ಮ ಹಕ್ಕುಗಳ ಬಗ್ಗೆ ಕೇಳುತ್ತೀರಾ, ಅದೇ ತರಹ ಕರ್ತವ್ಯಗಳನ್ನು ಸಹ ಪಾಲಿಸುವ ಮೂಲಕ ಸಂವಿಧಾನಕ್ಕೆ ಗೌರವ ಸೂಚಿಸಬೇಕು ಎಂದು ತಿಳಿಸಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದು ಶೇಖರ್ ಮಾತನಾಡಿ, ವಿದ್ಯಾರ್ಥಿಗಳು ತಂದೆ ತಾಯಿಗಳ ಹಿತ ವಚನ ಮತ್ತು ಗುರು ಹಿರಿಯರ ಆದರ್ಶಗಳನ್ನು ಪಾಲಿಸಿದರೆ ಕಾನೂನನ್ನು ಪರಿಪಾಲಿಸಿದಂತೆ ಎಂದು ಹೇಳಿದರು.

ಪೂರ್ವ ಠಾಣೆಯ ಆರಕ್ಷಕ ಉಪ ನಿರೀಕ್ಷಕ ಆನಂದ್ ಗೌಡ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾನೂನುಗಳು ಜಾರಿಯಲ್ಲಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಷೇಧ ಕಾಯಿದೆ ಪ್ರಕಾರ 18 ವರ್ಷ ಒಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರೆ ಕಾನೂನಿ ನಡಿಯಲ್ಲಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಆದ್ದರಿಂದ ಪ್ರತಿ ಯೊಬ್ಬರಿಗೂ ಕಾನೂನಿನ ತಿಳುವಳಿಕೆ ಅತ್ಯಗತ್ಯ ಎಂದರು.

ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಆರ್.ಅರುಣ್ ಕುಮಾರ್ ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮಾಡುವುದರ ಮೂಲಕ ಜಾಗೃತಿಯನ್ನು ಮೂಡಿಸುತ್ತಿದ್ದು, ಇದರಿಂದ ಅನೇಕ ಕಾನೂನು ವಿರೋಧಿ ಚಟುವಟಿಕೆಗಳನ್ನು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.

ವಕೀಲೆ ಎಂ.ಪಿ.ನಾಗಲಕ್ಷ್ಮಿ ಆಸ್ತಿ ಹಕ್ಕುಗಳ ಬಗ್ಗೆ ವಿದ್ಯಾ ರ್ಥಿಗಳಿಗೆ ಅರಿವು ಮೂಡಿಸಿದರು, ಕಾಲೇಜಿನ ಪ್ರಾಂಶುಪಾಲ ಡಿ.ಎಸ್.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲ ನ್ಯಾಯ ಮಂಡಳಿ ಸದಸ್ಯ ಟಿ.ಜೆ.ಸುರೇಶ್, ಉಪನ್ಯಾಸಕ ಸತೀಶ್ ಇತರರು ಹಾಜರಿದ್ದರು.

Translate »